ಉಬರ್‌ ಆಟೊ ನಿರೀಕ್ಷಣಾ ಸಮಯ 71 ನಿಮಿಷ; ಸ್ಕ್ರೀನ್‌ ಶಾಟ್‌ ಹಂಚಿಕೊಂಡ ಬೆಂಗಳೂರು ನಿವಾಸಿ

Date:

Advertisements

ಸಿಲಿಕಾನ್‌ ಸಿಟಿ ಬೆಂಗಳೂರಿನ ವಾಹನ ದಟ್ಟಣೆ ಸಮಸ್ಯೆ ಸದಾ ಚರ್ಚೆಯಲ್ಲಿರುವ ವಿಷಯ. ಇಲ್ಲಿನ ಜನರ ದೈನಂದಿನ ಬದುಕಿನಲ್ಲಿ ವಾಹನ ದಟ್ಟಣೆ ಹಾಸುಹೊಕ್ಕಾಗಿ ಬಿಟ್ಟಿದೆ ಎಂದರೆ ಅತಿಶಯೋಕ್ತಿ ಅನಿಸದು. ಬೆಂಗಳೂರಿನ ಸಂಚಾರ ದಟ್ಟಣೆ ಸಮಸ್ಯೆ ಬಗ್ಗೆ ಹಲವು ಹಾಸ್ಯಗಳು ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿರುತ್ತವೆ.

ಬೆಂಗಳೂರಿನ ನಿವಾಸಿಯೊಬ್ಬರು ಉಬರ್ ಆಟೊ ಬುಕ್‌ ಮಾಡಿ ಅದರ ಸ್ಕ್ರೀನ್ ಶಾಟ್‌ವೊಂದನ್ನು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದು, ಹಲವು ಚರ್ಚೆಗೆ ಎಡೆಮಾಡಿಕೊಟ್ಟಿದೆ.

ಅನುಶಾಂಕ್‌ ಎಂಬವರು ಉಬರ್ ಆಟೋ ಬುಕ್‌ ಮಾಡಿದ್ದು, 24 ಕಿ.ಮಿ ದೂರದಿಂದ ಆಟೋ ಬರುವುದಾಗಿಯೂ, 71 ನಿಮಿಷ ನಿರೀಕ್ಷಣಾ ಸಮಯ ಎಂದು ತೋರಿಸಿದೆ. ಇದರ ಫೋಟೊವನ್ನು ಅವರು ಹಂಚಿಕೊಂಡಿದ್ದು, ‘ಅವರು ಬಂದರೆ ಅವರಿಗೆ ಅಪಾರ ಗೌರವ‘ ಎಂದು ಬರೆದುಕೊಂಡಿದ್ದಾರೆ.

Advertisements

ಅವರ ಈ ಪೋಸ್ಟ್‌ಗೆ ಟ್ವೀಟ್‌ನಲ್ಲಿ ಹಲವು ರೀತಿಯ ಪ್ರತಿಕ್ರಿಯೆಗಳು ಬಂದಿದ್ದು, ಚರ್ಚೆಗಳಿಗೆ ಎಡೆಮಾಡಿಕೊಟ್ಟಿದೆ.

“ಕಚೇರಿಯಿಂದ ಕೆಲಸ ಮಾಡುವ ಎಲ್ಲ ಎಚ್‌.ಆರ್‌ಗಳಿಗೂ ಈ ಚಿತ್ರವನ್ನು ಕಳಿಸಬೇಕು” ಎಂದು ಟ್ವಿಟರ್‌ ಬಳಕೆದಾರರೊಬ್ಬರು ಕಮೆಂಟ್ ಮಾಡಿದ್ದಾರೆ.

“ಎರಡು ಮತ್ತು ಮೂರನೇ ಹಂತದ ನಗರಗಳಿಗೆ ಹೋಗಲು ಇದು ಸರಿಯಾದ ಸಮಯ ಎಂದು ನನಗೆ ಅನಿಸುತ್ತಿದೆ. ಹೆಚ್ಚಿನ ಉತ್ಪಾದಕತೆ, ಜೀವನ ನಿರ್ವಹಣಾ ವೆಚ್ಚ ಕಡಿಮೆ ಇರುವ ಹಾಗೂ ಜೀವನ ಸರಳಗೊಳಿಸುವ ನಗರಗಳಿಗೆ ಬದಲಿಸಲು ಎಂಎನ್‌ಸಿ ಕಂಪನಿಗಳು ಯೋಚನೆ ಮಾಡಬೇಕಿದೆ” ಎಂದು ಇನ್ನೊಬ್ಬರು ಟ್ವೀಟ್‌ ಮಾಡಿದ್ದಾರೆ.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗುಬ್ಬಿ | ರೈತನ ಕೃಷಿ ಚಟುವಟಿಕೆಗೆ ಜೇನು ಸಾಕಾಣಿಕೆ ವರದಾನ : ಪುಷ್ಪಲತಾ

ರೈತರು ತಮ್ಮ ಕೃಷಿ ಚಟುವಟಿಕೆಯಲ್ಲಿ ಪ್ರಮುಖ ಘಟವಾದ ಪರಾಗಸ್ಪರ್ಶ ಕ್ರಿಯೆಗೆ...

ಮಂಗಳೂರು | ಆ. 23: ಅಲ್ ವಫಾ ಚಾರಿಟೇಬಲ್ ಟ್ರಸ್ಟ್‌ನಿಂದ 15 ಜೋಡಿಗಳ ಸರಳ ಸಾಮೂಹಿಕ ವಿವಾಹ

ಮಂಗಳೂರು ಭಾಗದಲ್ಲಿ ಸಮಾಜ ಸೇವೆಯಲ್ಲಿ ಗುರುತಿಸಿಕೊಂಡಿರುವ ಅಲ್ ವಫಾ ಚಾರಿಟೆಬಲ್ ಟ್ರಸ್ಟ್...

ಗುಬ್ಬಿ | ಎಂ.ಎನ್.ಕೋಟೆ ಗ್ರಾಪಂ ಉಪಾಧ್ಯಕ್ಷರಾಗಿ ಸಿದ್ದಗಂಗಮ್ಮ ಅವಿರೋಧ ಆಯ್ಕೆ

ಗುಬ್ಬಿ ತಾಲ್ಲೂಕಿನ ನಿಟ್ಟೂರು ಹೋಬಳಿ ಎಂ.ಎನ್.ಕೋಟೆ ಗ್ರಾಮ ಪಂಚಾಯಿತಿ ಉಪಾಧ್ಯಕ್ಷ ಸ್ಥಾನಕ್ಕೆ...

ಕೋಲಾರ | ಐಎಎಸ್, ಐಪಿಎಸ್ ಓದುವ ವಿದ್ಯಾರ್ಥಿಗಳಿಗೆ ಉಚಿತ ಬಸ್ ವ್ಯವಸ್ಥೆ; ಅ.ಮು ಲಕ್ಷ್ಮೀನಾರಾಯಣ ಭರವಸೆ

ಕೆಎಎಸ್, ಐಎಎಸ್ ಮತ್ತು ಐಪಿಎಸ್ ಓದಲು ಆಸಕ್ತಿ ಇರುವ ವಿದ್ಯಾರ್ಥಿಗಳಿಗೆ ಉಚಿತ...

Download Eedina App Android / iOS

X