ಬೆಳಗಾವಿ ಜಿಲ್ಲೆಯ ರಾಮದುರ್ಗ ಪಟ್ಟಣದಲ್ಲಿ ಕಳೆದ ಎರಡು ದಿನಗಳಿಂದ 20ಕ್ಕೂ ಅಧಿಕ ಮಂದಿಗೆ ಕಚ್ಚಿದ್ದ ಕೋತಿಯನ್ನು ಅರಣ್ಯ ಇಲಾಖೆ ಸಿಬ್ಬಂದಿಗಳು ಸೆರೆ ಹಿಡಿಯುವಲ್ಲಿ ಯಶಸ್ವಿಯಾಗಿದ್ದಾರೆ.
ರಾಮದುರ್ಗ ಪಟ್ಟಣದಲ್ಲಿ 20ಕ್ಕೂ ಹೆಚ್ಚು ಜನರಿಗೆ ಕಚ್ಚಿದ್ದ ಮಂಗನನ್ನು ಸೆರೆ ಹಿಡಿಯುವಂತೆ ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸಿದ್ದರು. ಈ ಹಿನ್ನೆಲೆಯಲ್ಲಿ ನಿನ್ನೆ ಬೆಳಿಗ್ಗೆಯಿಂದ ಕಾರ್ಯಾಚರಣೆ ಆರಂಭಿಸಲಾಗಿತ್ತು. ಆದರೆ ಸೆರೆ ಹಿಡಿಯಲು ಬಂದ ವಾಹನದ ಮೇಲೆ ಬಂದ ಕೋತಿ ಮತ್ತೆ ಓಡಿ ಹೋಗುತ್ತಿತ್ತು.
ಈ ಸುದ್ದಿ ಓದಿದ್ದೀರಾ? ಬಾಗಲಕೋಟೆ | ಸಾಲಬಾಧೆಯಿಂದ ಬೇಸತ್ತ ರೈತ ಆತ್ಮಹತ್ಯೆ
ಕೊನೆಗೂ ಅರಣ್ಯ ಇಲಾಖೆ ಸಿಬ್ಬಂದಿಗಳು ಕೋತಿಯನ್ನು ಸೆರೆ ಹಿಡಿಯುವಲ್ಲಿ ಯಶಸ್ವಿಯಾಗಿದ್ದು ಸಾರ್ವಜನಿಕರು ನಿಟ್ಟುಸಿರು ಬಿಡುವಂತಾಗಿದೆ.