ವಕ್ಫ್ ಆಸ್ತಿ ಕಾಪಾಡ್ತೀವಿ ಎಂದಿದ್ದ ಬಿಜೆಪಿಯವರು ಈಗ ಡಬಲ್ ಗೇಮ್ ಆಡಬಹುದಾ: ಸಿದ್ದರಾಮಯ್ಯ ಪ್ರಶ್ನೆ

Date:

Advertisements

ಬಸವರಾಜ ಬೊಮ್ಮಾಯಿ ಅವರು ಮುಖ್ಯಮಂತ್ರಿಯಾಗಿದ್ದಾಗ ಒತ್ತುವರಿಯಾಗಿರುವ ಇಂಚಿಂಚು ವಕ್ಫ್ ಆಸ್ತಿಯನ್ನು ಕಾಪಾಡುವುದಾಗಿ ಹೇಳಿದ್ದರು. ಈಗ ರಾಜಕೀಯ ಕಾರಣಕ್ಕಾಗಿ ವಿರುದ್ಧವಾಗಿ ಮಾತನಾಡುತ್ತಾರೆ. ಅವರೇ ಹೇಳಿದ್ದ ಮಾತುಗಳಿಗೆ ರಾಜಕೀಯ ಕಾರಣಕ್ಕಾಗಿ ಉಲ್ಟಾ ಹೊಡೆದಿದ್ದಾರೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಟೀಕಿಸಿದರು.

ಅವರು ಇಂದು ಹುಬ್ಬಳ್ಳಿಯಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿ, “ಬಿಜೆಪಿ ರಾಜಕಾರಣಕ್ಕಾಗಿ ಈ ವಿಚಾರವನ್ನು ಇಟ್ಟುಕೊಂಡು ಹೋರಾಡುತ್ತಿದ್ದಾರೆ. ವಕ್ಫ್ ಆಸ್ತಿ ವಿಚಾರ ನಿನ್ನೆ ಮೊನ್ನೆಯದಲ್ಲ. ಬಿಜೆಪಿ ಸರ್ಕಾರದ ಕಾಲದಲ್ಲೂ ನೋಟಿಸ್‌ ಕೊಡಲಾಗಿದೆ” ಎಂದರು.

“ವಕ್ಫ್ ಆಸ್ತಿ ವಿಚಾರ ನಮಗೆ ಗೊತ್ತಾದ ತಕ್ಷಣವೇ ನೋಟೀಸು ಹಿಂಪಡೆಯಲಾಗಿದೆ . ಬಿಜೆಪಿ ಅವಧಿಯಲ್ಲಿ 216 ಪ್ರಕರಣಗಳಲ್ಲಿ ನೋಟಿಸ್‌ ಕೊಡಲಾಗಿದೆ. ಯಡಿಯೂರಪ್ಪ, ಸದಾನಂದ ಗೌಡ, ಜಗದೀಶ್ ಶೆಟ್ಟರ್, ಹೆಚ್.ಡಿ ಕುಮಾಸ್ವಾಮಿ ಇದ್ದಾಗ ಏಕೆ ನೋಟಿಸ್ ಕೊಟ್ಟಿದ್ದಾರೆ?‌ ಬಿಜೆಪಿಯ ಈ ಡಬಲ್‌ ಗೇಮ್ ವಿಚಾರವನ್ನು ಜನರಿಗೆ ನಾವು ತಲುಪಿಸುತ್ತೇವೆ” ಎಂದು ಹೇಳಿದರು.

Advertisements

ಕರ್ನಾಟಕಕ್ಕೆ ಅನ್ಯಾಯ

16ನೇ ಹಣಕಾಸು ಆಯೋಗದವರು ಬೆಂಗಳೂರಿಗೆ ಭೇಟಿ ನೀಡಿದಾಗ 15ನೇ ಹಣಕಾಸು ಆಯೋಗದಿಂದ ಕರ್ನಾಟಕಕ್ಕೆ ಅನ್ಯಾಯವಾಗಿರುವ ಬಗ್ಗೆ ಗಮನ ಸೆಳೆದಿದ್ದೇವೆ. ಸುಮಾರು 4.50 ಲಕ್ಷ ಕೋಟಿ ರೂ.ಗಳಿಗೂ ಹೆಚ್ಚು ಮೊತ್ತವನ್ನು ವರ್ಷಕ್ಕೆ ತೆರಿಗೆ ನೀಡುತ್ತಿದ್ದೇವೆ. ಅದರಲ್ಲಿ ನಮಗೆ ವಾಪಸ್ಸು ಬರುವುದು 55 ರಿಂದ 60 ಸಾವಿರ ಕೋಟಿ ರೂ. ಮಾತ್ರ. ಇದು ನ್ಯಾಯವೇ? ಎಂದು ಪ್ರಶ್ನಿಸಿದರು.

“ಈ ಬಗ್ಗೆ ನಾವು ನ್ಯಾಯಕ್ಕಾಗಿ ಹೋರಾಡುತ್ತಿದ್ದೇವೆ. ಬಿಜೆಪಿಯ ಪ್ರಲ್ಹಾದ್ ಜೋಶಿ, ಬಸವರಾಜ ಬೊಮ್ಮಾಯಿ, ಜಗದೀಶ್ ಶೆಟ್ಟರ್ ಅವರು ಈ ಬಗ್ಗೆ ಮಾತನಾಡಿದ್ದಾರೆಯೇ? ಕರ್ನಾಟಕಕ್ಕೆ ಅನ್ಯಾಯವಾಗಿದೆ ಎಂದರೆ ಅದು ರಾಜಕೀಯ ಎಂದರೆ ಏನು ಹೇಳಬೇಕು?” ಎಂದರು

ಹಣಕಾಸು ಆಯೋಗ ಶಿಫಾರಸು ಮಾಡಿದ್ದ ವಿಶೇಷ ಅನುದಾನ ನೀಡಿದ್ದರೆ ರಾಜಕೀಯ ಬಿಟ್ಟುಬಿಡುವೆ. 11,495 ಕೋಟಿ ರೂ. ಕೊಟ್ಟಿದ್ದಾರೆಯೇ? ಕೊಟ್ಟಿದ್ದರೆ ನಾನು ರಾಜಕೀಯ ಬಿಟ್ಟುಬಿಡುವೆ. ಪ್ರಲ್ಹಾದ್‌ ಜೋಶಿ ಬಿಡುತ್ತಾರೆಯೇ ಕೇಳಿ ಎಂದು ಪ್ರಶ್ನಿಸಿದರು. ಅವರು ಸುಳ್ಳು ಹೇಳಿದ್ದನ್ನು ಕೇಳಿ ಬರೆಯುತ್ತೀರಿ” ಎಂದು ಮಾಧ್ಯಮದವರನ್ನು ಪ್ರಶ್ನಿಸಿದರು.

ಪ್ರತಾಪ್ ಸಿಂಹ ಮಹಾನ್ ಕೋಮುವಾದಿ

ಮಾಜಿ ಸಂಸದ ಪ್ರತಾಪ್ ಸಿಂಹ ಮುಖ್ಯಮಂತ್ರಿಗಳು ಸಂಪೂರ್ಣ ಮುಸ್ಲಿಂ ಆಗಿದ್ದಾರೆ ಎಂದು ಹೇಳಿಕೆ ನೀಡಿರುವ ಬಗ್ಗೆ ಪ್ರತಿಕ್ರಿಯೆ ನೀಡಿ, “ಅವರೊಬ್ಬ ಮಹಾನ್ ಕೋಮುವಾದಿ. ಕೋಮುವಾದಿಗಳಿಂದ ಇನ್ನೇನು ನಿರೀಕ್ಷೆ ಮಾಡಲಾಗುತ್ತದೆ. ಅವರಿಗೆ ಸಂವಿಧಾನ, ಪ್ರಜಾಪ್ರಭುತ್ವದ ಬಗ್ಗೆ ಗೌರವವಿಲ್ಲ. ಕೋಮುವಾದ ಮಾಡುವುದೇ ಅವರ ಕಸುಬು. ಸಮಾಜವನ್ನು ಜಾತಿ, ಧರ್ಮದ ಹೆಸರಿನಲ್ಲಿ ಒಡೆಯುವುದೇ ಅವರ ರಾಜಕಾರಣ. ಕೋಮುವಾದದಲ್ಲಿ ತೊಡಗಿ ರಾಜಕೀಯದಲ್ಲಿ ಬದುಕಲು ಹಾಗೂ ಮತ ಪಡೆಯಲು ಪ್ರಯತ್ನ ಮಾಡುತ್ತಾರೆ” ಎಂದು ಟೀಕಿಸಿದರು.

ಶಿಗ್ಗಾಂವಿ ಗೆಲ್ಲಲಿದ್ದೇವೆ : ಸಿಎಂ ವಿಶ್ವಾಸ

“ಇಂದು ಮತ್ತು ನಾಳೆ ಎರಡು ದಿನ ಶಿಗ್ಗಾಂವಿ ಕ್ಷೇತ್ರದಲ್ಲಿ ಪ್ರಚಾರ ಮಾಡಲಾಗುವುದು. ಶಿಗ್ಗಾಂವಿ ಕ್ಷೇತ್ರದಲ್ಲಿ ಹಿಂದೆಯೂ ಪ್ರಚಾರ ಮಾಡಿದ್ದೇನೆ. ಕೊನೆಯಲ್ಲಿ ಅಭ್ಯರ್ಥಿಯನ್ನು ನಿಗದಿ ಮಾಡಿದ್ದರಿಂದ ಕಳೆದ ವಿಧಾನ ಸಭಾ ಚುನಾವಣೆ ಸಂದರ್ಭದಲ್ಲಿ ಇಲ್ಲಿಗೆ ಭೇಟಿ ನೀಡಲಾಗಲಿಲ್ಲ. ಈ ಬಾರಿ ಮೂರು ದಿನ ಶಿಗ್ಗಾಂವಿ ಭೇಟಿ ನೀಡುತ್ತಿದ್ದು, ಶಿಗ್ಗಾಂವಿ ಯಲ್ಲಿ ನೂರಕ್ಕೇ ನೂರು ಗೆಲ್ಲಲಿದ್ದೇವೆ” ಎಂದು ಮುಖ್ಯಮಂತ್ರಿಗಳು ವಿಶ್ವಾಸ ವ್ಯಕ್ತಪಡಿಸಿದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬೂಕರ್ ಪ್ರಶಸ್ತಿ ಪುರಸ್ಕೃತೆ ಬಾನು‌ ಮುಷ್ತಾಕ್‌ರಿಂದ ಮೈಸೂರು ದಸರಾ ಉದ್ಘಾಟನೆ: ಸಿಎಂ ಸಿದ್ದರಾಮಯ್ಯ

ಈ ಬಾರಿಯ 'ಮೈಸೂರು ದಸರಾ' ಉದ್ಘಾಟನೆಯನ್ನು ಬೂಕರ್ ಪ್ರಶಸ್ತಿ ವಿಜೇತೆ ಲೇಖಕಿ...

ದಸರಾ ಉದ್ಘಾಟನೆಗೆ ಸೋನಿಯಾ ಗಾಂಧಿಗೆ ಆಹ್ವಾನ ಸಂಪೂರ್ಣ ಸುಳ್ಳು: ಸಿಎಂ ಸಿದ್ದರಾಮಯ್ಯ ಸ್ಪಷ್ಟನೆ

ಈ ಬಾರಿಯ ದಸರಾ ಉದ್ಘಾಟನೆಗೆ ಕಾಂಗ್ರೆಸ್ ಅಧಿನಾಯಕಿ ಸೋನಿಯಾ ಗಾಂಧಿಯನ್ನು ಆಹ್ವಾನಿಸಲಾಗಿದೆ...

BREAKING NEWS | ಬೆಂಗಳೂರು ನಗರ ಸಿವಿಲ್ ನ್ಯಾಯಾಲಯಕ್ಕೆ ಬಾಂಬ್​ ಬೆದರಿಕೆ ಇಮೇಲ್

ಬೆಂಗಳೂರು ನಗರ ಸಿವಿಲ್ ನ್ಯಾಯಾಲಯಕ್ಕೆ ಬಾಂಬ್​ ಬೆದರಿಕೆ ಇಮೇಲ್ ಬಂದಿದೆ ಎಂದು...

Download Eedina App Android / iOS

X