ಓಮಿನಿ ಕಾರೊಂದು ರಸ್ತೆಯಿಂದ ಹಳ್ಳಕ್ಕೆ ಬಿದ್ದ ಪರಿಣಾಮ ಬೆಂಕಿ ಹತ್ತಿಕೊಂಡಿದ್ದು, ಕಾರಿನಲ್ಲಿದ್ದ ವ್ಯಕ್ತಿಯೋರ್ವ ಸುಟ್ಟು ಭಸ್ಮವಾಗಿರುವ ಘಟನೆ ಚಿಕ್ಕಬಳ್ಳಾಪುರ ಜಿಲ್ಲೆಯ ಚಿಂತಾಮಣಿ ತಾಲೂಕಿನ ಕೆಂಚಾರ್ಲಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಭಾನುವಾರ ರಾತ್ರಿ 9 ಗಂಟೆ ಸುಮಾರಿಗೆ ನಡೆದಿದೆ.
ಚಿಂತಾಮಣಿಯ ಟಿಪ್ಪು ನಗರದ ನಿವಾಸಿ ಇಬ್ರಾಹಿಂ(48) ಬೆಂಕಿಗಾಹುತಿಯಾದ ವ್ಯಕ್ತಿ ಎಂದು ಗುರುತಿಸಲಾಗಿದೆ.
ಇಬ್ರಾಹಿಂ ವ್ಯಾಪಾರ ಮುಗಿಸಿಕೊಂಡು ಚಿಂತಾಮಣಿ ಕಡೆಯಿಂದ ಗಂಡ್ರಗಾನಹಳ್ಳಿ ಕಡೆ ತೆರಳುತ್ತಿದ್ದ ವೇಳೆ ಓಮಿನಿ ಕಾರು ಹಳ್ಳಕ್ಕೆ ಬಿದ್ದಿದ್ದು, ದಿಢೀರ್ ಬೆಂಕಿ ಹತ್ತಿಕೊಂಡಿದೆ. ಇದೇ ವೇಳೆ ಕಾರಿನಲ್ಲಿದ್ದ ಇಬ್ರಾಹಿಂ ಸಹ ಬೆಂಕಿಯ ಕೆನ್ನಾಲಿಗೆಗೆ ಆಹುತಿಯಾಗಿದ್ದಾನೆ.
ಇದನ್ನೂ ಓದಿ : ಈ ದಿನ ಸಂಪಾದಕೀಯ | ಪ್ಲಾಸ್ಟಿಕ್ ತ್ಯಾಜ್ಯಕ್ಕೆ ಕಡಿವಾಣ ಯಾವಾಗ?
ಡಿವೈಎಸ್ಪಿ ಮುರಳಿಧರ್, ಸರ್ಕಲ್ ಇನ್ಸ್ಪೆಕ್ಟರ್ ವೆಂಕಟರವಣಪ್ಪ, ಸಬ್ ಇನ್ಸ್ಪೆಕ್ಟರ್ ಶಿವಕುಮಾರ್ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಪ್ರಕರಣ ದಾಖಲಿಸಿಕೊಂಡದ್ದಾರೆ.