ಧಾರವಾಡ ಜಿಲ್ಲಾ ಪಂಚಾಯತ ವ್ಯಾಪ್ತಿಯಲ್ಲಿನ ವಿವಿಧ ಗ್ರಾಮ ಪಂಚಾಯತಗಳ ಗ್ರಂಥಾಲಯಗಳಲ್ಲಿ ಖಾಲಿ ಇರುವ 32 ಗ್ರಂಥಾಲಯ ಮೇಲ್ವಿಚಾರಕರ ಹುದ್ದೆಗಳಿಗೆ ಅರ್ಹರಿಂದ ಅರ್ಜಿ ಆಹ್ವಾನಿಸಲಾಗಿದ್ದು, ಆಸಕ್ತ ಅಭ್ಯರ್ಥಿಗಳು ಡಿಸೆಂಬರ್ 5, 2024 ರೊಳಗಾಗಿ ಅರ್ಜಿ ಸಲ್ಲಿಸಬೇಕು ಎಂದು ಜಿಲ್ಲಾ ಪಂಚಾಯತ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಆಯ್ಕೆಯಾಗುವ ಅಭ್ಯರ್ಥಿಗಳಿಗೆ ರೂ. 16,382.52 ಗೌರವ ಸಂಭಾವನೆ ನೀಡಲಾಗುತ್ತದೆ ಎಂದು ತಿಳಿಸಿದ್ದಾರೆ.
ಈ ವರದಿ ಓದಿದ್ದೀರಾ? ಧಾರವಾಡ | ಬಸವರಾಜ ಬೊಮ್ಮಾಯಿ ವಕ್ಫ್ ಆಸ್ತಿ ಕಾಪಾಡುವುದಾಗಿ ಹೇಳಿದ್ದರು: ಸಿಎಂ ಸಿದ್ಧರಾಮಯ್ಯ
ಗ್ರಾಮ ಪಂಚಾಯತವಾರು ಖಾಲಿ ಇರುವ ಗ್ರಂಥಾಲಯ ಮೇಲ್ವಿಚಾರಕರ ಹುದ್ದೆಗಳ ಮೀಸಲಾತಿ ವಿವರ ಹಾಗೂ ನಿಬಂಧನೆಗಳನ್ನು ತಿಳಿದುಕೊಳ್ಳಲು ಮತ್ತು ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಪಂಚಾಯತ ಫೋರ್ಟಲ್ https://zpdharwad.karnataka.gov.in ಗೆ ಅಥವಾ ಜಿಲ್ಲಾ ಪಂಚಾಯತ ಉಪಕಾರ್ಯದರ್ಶಿಗಳ ಕಚೇರಿಯನ್ನು ಸಂಪರ್ಕಿಸಬಹುದು ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.