ಮುಂದಿನ ವಾರದಲ್ಲಿ ಹಸೆಮಣೆ ಏರಬೇಕಿದ್ದ ಪೊಲೀಸ್ ಕಾನ್ಸ್ಟೆಬಲ್ ಒಬ್ಬರನ್ನು ಮಾರಕಾಸ್ತ್ರಗಳಿಂದ ಹೊಡೆದು ಬರ್ಬರವಾಗಿ ಹತ್ಯೆ ಮಾಡಿದ ಘಟನೆ ಹಾಸನ ತಾಲೂಕಿನ ದುದ್ದ ಗ್ರಾಮದ ಹೊರವಲಯದಲ್ಲಿರುವ ಡಾಬಾ ಸರ್ಕಲ್ನಲ್ಲಿ ಸೋಮವಾರ ರಾತ್ರಿ ನಡೆದಿದೆ.
ಕರ್ನಾಟಕ ಕೈಗಾರಿಕಾ ಭದ್ರತಾ ಪಡೆಯ ಕಾನ್ಸ್ಟೇಬಲ್, ಬಾಗೇಶಪುರ ಗ್ರಾಮದ ಹರೀಶ್.ವಿ (32) ಕೊಲೆಯಾದವರು.
ಸೋಮವಾರ ರಾತ್ರಿ ಮದುವೆ ಆಮಂತ್ರಣ ಪತ್ರ ಹಂಚಿ ಮನೆಗೆ ವಾಪಾಸ್ ಆಗುತ್ತಿದ್ದ ವೇಳೆ ದುದ್ದ ಗ್ರಾಮದ ಹೊರವಲಯದಲ್ಲಿರುವ ಡಾಬಾ ಸರ್ಕಲ್ನಲ್ಲಿ ದುಷ್ಕರ್ಮಿಗಳು ಬರ್ಬರವಾಗಿ ಹತ್ಯೆ ಮಾಡಿದ್ದಾರೆ. ಶವವನ್ನು ಮರಣೋತ್ತರ ಪರೀಕ್ಷೆಗೆ ರವಾನಿಸಲಾಗಿದೆ.
ಇದನ್ನು ಓದಿದ್ದೀರಾ? ಹುನಗುಂದ | ದುಬಾರಿ ಬಾಡಿಗೆ; ಹರಾಜಾಗದ ಮಳಿಗೆಗಳು
ಇದೇ ತಿಂಗಳು 11ರಂದು ಹರೀಶ್ ಆವರ ವಿವಾಹ ನಿಗದಿಯಾಗಿತ್ತು. ತಮ್ಮ ಮದುವೆ ಆಮಂತ್ರಣ ಪತ್ರಿಕೆಗಳನ್ನು ನೀಡಿ ಸಂಬಂಧಿಕರನ್ನು ಆಹ್ವಾನಿಸಿ ರಾತ್ರಿ KA-13-W-7272 ಬುಲೆಟ್ ಬೈಕ್ನಲ್ಲಿ ಮನೆಗೆ ತೆರಳುತ್ತಿದ್ದಾಗ ದಾಳಿ ಮಾಡಿರುವ ದುಷ್ಕರ್ಮಿಗಳು, ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆ ಮಾಡಿ ಪರಾರಿಯಾಗಿದ್ದಾರೆ.
ಸ್ಥಳಕ್ಕೆ ಎಸ್ಪಿ ಮಹಮದ್ ಸುಜೇತಾ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ದುದ್ದ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.
