ಕಾನೂನು ಸಚಿವರಾಗಿ ಕಿರಣ್‌ ರಿಜಿಜು ಬದಲಿಗೆ ಅರ್ಜುನ್ ರಾಮ್ ಮೇಘವಾಲ್ ನೇಮಕ

Date:

Advertisements
  • ಅರ್ಜುನ್ ಮೇಘವಾಲ್ ಅವರಿಗೆ ರಾಜ್ಯ ಸಚಿವರ ಹೆಚ್ಚುವರಿ ಜವಾಬ್ದಾರಿ
  • ಅರುಣಾಚಲ ಪಶ್ಚಿಮ ಲೋಕಸಭಾ ಕ್ಷೇತ್ರದಿಂದ ಬಿಜೆಪಿ ಸಂಸದರಾಗಿರವ ಕಿರಣ್‌ ರಿಜಿಜು

ಪ್ರಧಾನಿ ನರೇಂದ್ರ ಮೋದಿ ಅವರ ಸಂಪುಟದಲ್ಲಿ ಮಹತ್ವದ ಬದಲಾವಣೆ ಮಾಡಲಾಗಿದ್ದು ಅರ್ಜುನ್ ರಾಮ್ ಮೇಘವಾಲ್ ಅವರನ್ನು ನೂತನ ಕೇಂದ್ರ ಕಾನೂನು ಸಚಿವರಾಗಿ ಗುರುವಾರ (ಮೇ 18) ನೇಮಕ ಮಾಡಲಾಗಿದೆ.

ಈ ಮುನ್ನ ಕಾನೂನು ಸಚಿವರಾಗಿದ್ದ ಕಿರಣ್ ರಿಜಿಜು ಅವರನ್ನು ಆ ಹುದ್ದೆಯಿಂದ ತೆರವುಗೊಳಿಸಲಾಗಿದೆ. ಅವರಿಗೆ ಭೂ ವಿಜ್ಞಾನ ಸಚಿವಾಲಯದ ಉಸ್ತುವಾರಿ ನೀಡಲಾಗಿದೆ. ಈ ಹಿಂದೆ ಜಿತೇಂದ್ರ ಸಿಂಗ್‌ ಅವರು ಈ ಖಾತೆ ನಿರ್ವಹಿಸುತ್ತಿದ್ದರು.

ಪ್ರಧಾನಿ ಮೋದಿ ಅವರ ಸಲಹೆಯ ಮೇರೆಗೆ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಸಂಪುಟ ಪುನಾರಚನೆಗೆ ಅನುಮೋದನೆ ನೀಡಿದ್ದಾರೆ.

Advertisements

ಅರ್ಜುನ್ ರಾಮ್ ಮೇಘವಾಲ್ ಅವರನ್ನು ಕಿರಣ್ ರಿಜಿಜು ಅವರ ಸ್ಥಾನಕ್ಕೆ ನೇಮಕ ಮಾಡಲಾಗಿದೆ. ಅರ್ಜುನ್ ಮೇಘವಾಲ್ ಅವರಿಗೆ ಅಸ್ತಿತ್ವದಲ್ಲಿರುವ ಖಾತೆಗೆ ಹೆಚ್ಚುವರಿಯಾಗಿ ಕಾನೂನು ಹಾಗೂ ನ್ಯಾಯ ಸಚಿವಾಲಯ ರಾಜ್ಯ ಸಚಿವರಾಗಿ ಸ್ವತಂತ್ರ ಉಸ್ತುವಾರಿ ನೀಡಲಾಗಿದೆ.

ಮುಂಬರುವ ರಾಜಸ್ಥಾನ ವಿಧಾನಸಭೆ ಚುನಾವಣೆಯನ್ನು ಗಮನದಲ್ಲಿಟ್ಟುಕೊಂಡು ಅರ್ಜುನ್‌ ಮೇಘವಾಲ್‌ ಅವರನ್ನು ಆರಿಸಲಾಗಿದೆ ಎಂದು ಹೇಳಲಾಗಿದೆ. ಅರ್ಜುನ್ ರಾಮ್ ಮೇಘವಾಲ್ ಅವರು ಪ್ರಸ್ತುತ ಸಂಸ್ಕೃತಿ ಖಾತೆಯ ರಾಜ್ಯ ಸಚಿವರಾಗಿದ್ದಾರೆ. ಕಿರಣ್ ರಿಜಿಜು ಅರುಣಾಚಲ ಪಶ್ಚಿಮ ಲೋಕಸಭಾ ಕ್ಷೇತ್ರದಿಂದ ಬಿಜೆಪಿ ಸಂಸದರಾಗಿದ್ದಾರೆ.

ಸುಪ್ರೀಂ ಕೋರ್ಟ್ ಹಾಗೂ ಹೈಕೋರ್ಟ್‌ಗಳಿಗೆ ನ್ಯಾಯಮೂರ್ತಿಗಳನ್ನು ನೇಮಕ ಮಾಡಲು ಜಾರಿಯಲ್ಲಿ ಇರುವ ಕೊಲಿಜಿಯಂ ವ್ಯವಸ್ಥೆ ಬಗ್ಗೆ ಕಿರಣ್‌ ರಿಜಿಜು ಅಸಮಾಧಾನ ಹೊಂದಿದ್ದರು. ನ್ಯಾಯಮೂರ್ತಿಗಳ ನೇಮಕಕ್ಕೆ ಹೊಸ ವ್ಯವಸ್ಥೆ ರೂಪಿಸುವಂತೆ ಹೇಳಿದ್ದರು.

ರಿಜಿಜು ಅವರು 2009ರ ಲೋಕಸಭೆ ಚುನಾವಣೆಯಲ್ಲಿ ಸೋತಿದ್ದರು. 2014ರ ಚುನಾವಣೆಯಲ್ಲಿ ರಿಜಿಜು ಮತ್ತೊಮ್ಮೆ ಗೆದ್ದು ಪ್ರಧಾನಿ ನರೇಂದ್ರ ಮೋದಿ ಸಂಪುಟದಲ್ಲಿ ಸಚಿವರಾಗಿದ್ದರು.

ಈ ಸುದ್ದಿ ಓದಿದ್ದೀರಾ? ಭಯೋತ್ಪಾದಕರೊಂದಿಗೆ ನಂಟು: 6 ರಾಜ್ಯಗಳ 122 ಸ್ಥಳಗಳಲ್ಲಿ ಎನ್‌ಐಎ ದಾಳಿ

ನಂತರ ಅವರನ್ನು ಮೋದಿ ಸರ್ಕಾರದ ಎರಡನೇ ಅವಧಿ 2019ರಲ್ಲಿ ಕ್ರೀಡಾ ಸಚಿವರನ್ನಾಗಿ ನೇಮಿಸಲಾಯಿತು. 2021 ಜುಲೈನಲ್ಲಿ ಸಂಪುಟ ವಿಸ್ತರಣೆ ಸಮಯದಲ್ಲಿ ಅವರನ್ನು ಕಾನೂನು ಸಚಿವರನ್ನಾಗಿ ನೇಮಿಸಲಾಗಿತ್ತು.

ರವಿಶಂಕರ್ ಪ್ರಸಾದ್ ಬದಲಿಗೆ ಅವರಿಗೆ ಈ ಜವಾಬ್ದಾರಿ ನೀಡಲಾಗಿತ್ತು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಬಿಐ ಅಧಿಕಾರಿಗಳಂತೆ ನಟಿಸಿ 2.3 ಕೋಟಿ ರೂ. ದೋಚಿದ್ದ ಗ್ಯಾಂಗ್: ಇಬ್ಬರ ಬಂಧನ

ಕೇಂದ್ರ ತನಿಖಾ ದಳ (ಸಿಬಿಐ) ಅಧಿಕಾರಿಗಳಂತೆ ನಟಿಸಿ ಉದ್ಯಮಿಯೊಬ್ಬರ ಕಚೇರಿಯಿಂದ ಗ್ಯಾಂಗ್...

ಬೀದಿ ನಾಯಿಗಳಿಗೆ ಲಸಿಕೆ ಹಾಕಿದ ನಂತರ ಅದೇ ಸ್ಥಳಕ್ಕೆ ತಂದು ಬಿಡಬೇಕು: ಸುಪ್ರೀಂ ಕೋರ್ಟ್‌

ಬೀದಿ ನಾಯಿಗಳಿಗೆ ಸಂಬಂಧಿಸಿದ್ದಂತೆ ಆಗಸ್ಟ್ 11ರ ಆದೇಶವನ್ನು ಮಾರ್ಪಡಿಸಿದ ಸುಪ್ರೀಂ...

ವಿವಾದಾತ್ಮಕ ಯೂಟ್ಯೂಬರ್ ಎಲ್ವಿಶ್ ಮನೆ ಮೇಲೆ ಗುಂಡಿನ ದಾಳಿ: ಎನ್‌ಕೌಂಟರ್ ಮಾಡಿ ಆರೋಪಿ ಬಂಧನ

ಬಲಪಂಥೀಯ, ವಿವಾದಾತ್ಮಕ ಯೂಟ್ಯೂಬರ್ ಮತ್ತು ಬಿಗ್ ಬಾಸ್ ವಿಜೇತ ಎಲ್ವಿಶ್ ಯಾದವ್‌...

ಗೇಮಿಂಗ್​ ಆ್ಯಪ್​ಗಳಿಗೆ ಅಕ್ರಮ ಹಣ ವರ್ಗಾವಣೆ ಆರೋಪ: ಚಿತ್ರದುರ್ಗ ಶಾಸಕ ವೀರೇಂದ್ರ ಮನೆ ಮೇಲೆ ಇಡಿ ದಾಳಿ

ಶುಕ್ರವಾರ(ಆಗಸ್ಟ್ 22) ಬೆಳ್ಳಂಬೆಳಗ್ಗೆ ಚಿತ್ರದುರ್ಗದ ಶಾಸಕ ಕೆಸಿ ವೀರೇಂದ್ರ ಪಪ್ಪಿ ಅವರ...

Download Eedina App Android / iOS

X