ಎಚ್‌ ಡಿ ದೇವೇಗೌಡರ 91ನೇ ಜನ್ಮದಿನ: ಶುಭ ಕೋರಿದ ಪ್ರಧಾನಿ ಮೋದಿ, ಗಣ್ಯರು

Date:

Advertisements

ಮಾಜಿ ಪ್ರಧಾನಿ ಎಚ್‌.ಡಿ ದೇವೇಗೌಡರ 91ನೇ ಜನ್ಮದಿನಕ್ಕೆ ಪ್ರಧಾನಿ ಮೋದಿ ನರೇಂದ್ರ ಮೋದಿ ಸೇರಿದಂತೆ ಹಲವು ಗಣ್ಯರು ಶುಭಾಶಯ ಕೋರಿದ್ದಾರೆ.

“ನಮ್ಮ ದೇಶಕ್ಕೆ ದೇವೇಗೌಡರ ಕೊಡುಗೆ ಗಮನಾರ್ಹವಾಗಿದೆ. ಅವರ ಅರೋಗ್ಯವಂತರಾಗಿ ದೀರ್ಘಕಾಲ ಜೀವಿಸಲಿ ಎಂದು ಪ್ರಾರ್ಥಿಸುತ್ತೇನೆ” ಎಂದು ಪ್ರಧಾನಿ ನರೇಂದ್ರ ಮೋದಿ ಟ್ವೀಟ್‌ ಮಾಡಿದ್ದಾರೆ.

ಮಾಜಿ ಮುಖ್ಯಮಂತ್ರಿ ದೇವೇಗೌಡ ಅವರ ಪುತ್ರ ಎಚ್‌.ಡಿ ಕುಮಾರಸ್ವಾಮಿ ಟ್ವೀಟ್‌ ಮಾಡಿ, “ಭಾರತದ 11ನೇ ಪ್ರಧಾನಮಂತ್ರಿಗಳು, ಜೆಡಿಎಸ್‌ ರಾಷ್ಟ್ರೀಯ ಅಧ್ಯಕ್ಷರೂ ಹಾಗೂ ನನ್ನ ಪೂಜ್ಯ ತಂದೆಯವರಾದ ದೇವೇಗೌಡ ಅವರಿಗೆ 91ನೇ ಜನ್ಮದಿನದ ಹಾರ್ದಿಕ ಶುಭಾಶಯಗಳು ಹಾಗೂ ನನ್ನ ಭಕ್ತಿಪೂರ್ವಕ ಪ್ರಣಾಮಗಳು” ಎಂದು ತಿಳಿಸಿದ್ದಾರೆ.

Advertisements

“ನನ್ನ ಶಕ್ತಿ, ಪ್ರೇರಣೆ, ದಾರಿದೀಪ ಆಗಿರುವ ಅವರು, ಜೆಡಿಎಸ್ ಪಾಲಿನ ಮಹಾನ್ ಚೈತನ್ಯ, ದೇಶ ಮತ್ತು ಕನ್ನಡನಾಡಿಗೆ ಅವರ ಕೊಡುಗೆ ಅವಿಸ್ಮರಣೀಯ. ಅವರ ಅನುಭವಧಾರೆ ನಮಗೆಲ್ಲ ಅಮೃತಧಾರೆ. ಆ ಭಗವಂತ ಶ್ರೀಯುತರಿಗೆ ಇನ್ನೂ ಹೆಚ್ಚಿನ ಆಯುರಾರೋಗ್ಯ ಕರುಣಿಸಲಿ. ಅವರು ನಮ್ಮೆಲ್ಲರನ್ನು ಇನ್ನೂ ದೀರ್ಘಕಾಲ ಮುನ್ನಡೆಸಲಿ ಎಂದು ಪ್ರಾರ್ಥಿಸುತ್ತೇನೆ” ಎಂದು ಬರೆದುಕೊಂಡಿದ್ದಾರೆ.

ಕರ್ನಾಟಕದ ನೂತನ ಮುಖ್ಯಮಂತ್ರಿ ಸಿದ್ದರಾಮಯ್ಯ ಟ್ವೀಟ್‌ ಮಾಡಿ, “ಮಾಜಿ ಪ್ರಧಾನಿಗಳು ಮತ್ತು ಜಾತ್ಯತೀತ ಜನತಾದಳದ ಹಿರಿಯ ನಾಯಕರಾದ ಎಚ್‌ ಡಿ ದೇವೇಗೌಡ ಅವರಿಗೆ ಹುಟ್ಟು ಹಬ್ಬದ ಶುಭಾಶಯಗಳು. ದೇವೇಗೌಡರಿಗೆ ಪರಮಾತ್ಮ ದೀರ್ಘ ಆಯುಷ್ಯ ಮತ್ತು ಆರೋಗ್ಯವನ್ನು ಕರುಣಿಸಲಿ. ಕರ್ನಾಟಕದ ಜನ, ನೆಲ, ಜಲ ಮತ್ತು ಭಾಷೆಯ ಹಿತಾಸಕ್ತಿ ರಕ್ಷಣೆಯ ಕಾರ್ಯಕ್ಕೆ ಗೌಡರ ಮಾರ್ಗದರ್ಶನ ಸದಾ ನಮಗಿರಲಿ ಎಂದು ಹಾರೈಸುತ್ತೇನೆ” ಎಂದು ಶುಭ ಕೋರಿದ್ದಾರೆ.

“ಮುತ್ಸದ್ಧಿ ಹಿರಿಯ ರಾಜಕಾರಣಿಗಳು, ಮಾಜಿ ಪ್ರಧಾನಮಂತ್ರಿಗಳಾದ ಸನ್ಮಾನ್ಯ ಎಚ್ ಡಿ ದೇವೇಗೌಡ ಅವರಿಗೆ ಜನ್ಮದಿನದ ಹಾರ್ದಿಕ ಶುಭಾಶಯಗಳು. ದೇವರ ಅನುಗ್ರಹ ಸದಾ ತಮ್ಮ ಮೇಲಿರಲಿ ಎಂದು ಪ್ರಾರ್ಥಿಸುತ್ತೇನೆ” ಎಂದು ಮಾಜಿ ಮುಖ್ಯಮಂತ್ರಿ ಬಿ ಎಸ್‌ ಯಡಿಯೂರಪ್ಪ ಟ್ವೀಟ್‌ ಮಾಡಿದ್ದಾರೆ.

“ಹಿರಿಯ ಮುತ್ಸದ್ಧಿ ನಾಯಕರು, ಮಾಜಿ ಪ್ರಧಾನ ಮಂತ್ರಿ ದೇವೇಗೌಡ ಅವರಿಗೆ ಜನ್ಮದಿನದ ಹಾರ್ದಿಕ ಶುಭಾಶಯಗಳು. ಭಗವಂತನ ಕೃಪಾಶೀರ್ವಾದ ತಮ್ಮ ಮೇಲೆ ಸದಾ ಇರಲಿಯೆಂದು ಪ್ರಾರ್ಥಿಸುತ್ತೇನೆ” ಎಂದು ಹಂಗಾಮಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಟ್ವೀಟ್‌ ಮೂಲಕ ಶುಭ ಕೋರಿದ್ದಾರೆ.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ವಿಧಾನಸಭೆಯ ಮುಂಗಾರು ಅಧಿವೇಶನ ಮುಕ್ತಾಯ: ಒಟ್ಟು 39 ವಿಧೇಯಕ ಅಂಗೀಕಾರ

ಕಳೆದ ಆಗಸ್ಟ್ 11ರಿಂದ ಆರಂಭಗೊಂಡಿದ್ದ 16ನೇ ವಿಧಾನಸಭೆಯ ಮುಂಗಾರು ಅಧಿವೇಶನವು ಇಂದು(ಆ.22)...

ಶಿವಮೊಗ್ಗ | 15 ವರ್ಷದ ಬಳಿಕ ವಾರ್ತಾ ಇಲಾಖೆಯ ಸಹಾಯಕ ನಿರ್ದೇಶಕ ಆರ್. ಮಾರುತಿ ವರ್ಗಾವಣೆ!

ಶಿವಮೊಗ್ಗ ಜಿಲ್ಲಾ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯಲ್ಲಿ ಕಳೆದ 15...

ಸಿಂಧನೂರು | ಮಹಿಳಾ ಕಾಲೇಜಿನಲ್ಲಿ ಉಪನ್ಯಾಸಕರ ಕೊರತೆ – ವಿದ್ಯಾರ್ಥಿನಿಯರ ಪ್ರತಿಭಟನೆ

ಸಿಂಧನೂರಿನ ಕುಷ್ಟಗಿ ರಸ್ತೆಯಲ್ಲಿರುವ ಸರ್ಕಾರಿ ಮಹಿಳಾ ಪದವಿ ಕಾಲೇಜಿನಲ್ಲಿ ಉಪನ್ಯಾಸಕರ ಕೊರತೆಯಿಂದಾಗಿ...

ಶಿವಮೊಗ್ಗ | ಸೆ. 6ಕ್ಕೆ ಹಿಂದೂ ಮಹಾಸಭಾ ಗಣಪತಿ ವಿಸರ್ಜನೆ

ಶಿವಮೊಗ್ಗದ ಹಿಂದೂ ಮಹಾಸಭಾ ಗಣಪತಿ ಉತ್ಸವದಲ್ಲಿ ಈ ಬಾರಿ ಏನೆಲ್ಲಾ...

Download Eedina App Android / iOS

X