ಮುಖ್ಯಮಂತ್ರಿ ಸ್ಥಾನದ ಘನತೆ ಸಿದ್ದರಾಮಯ್ಯ ಅವರ ನಡವಳಿಕೆಯಿಂದ ದಿನೇ ದಿನೇ ಕುಗ್ಗುತ್ತಿದೆ: ವಿಜಯೇಂದ್ರ

Date:

Advertisements

ಎ1 ಆರೋಪಿ ಸಿದ್ದರಾಮಯ್ಯ ಅವರೇ ಸದ್ಯ ನಿಮ್ಮ ಮುಖಕ್ಕೆ ಮೆತ್ತಿಕೊಂಡಿರುವ ಕಪ್ಪು ಮಸಿಯನ್ನು ಸ್ವಚ್ಛಗೊಳಿಸುವತ್ತ ಗಮನ ನೀಡಿ. ಏಕೆಂದರೆ ಕರ್ನಾಟಕದ ಸಾರ್ವಭೌಮತ್ವದ ಸಂಕೇತವಾದ ಮುಖ್ಯಮಂತ್ರಿ ಸ್ಥಾನದ ಘನತೆ ನಿಮ್ಮ ಭಂಡತನದ ನಡವಳಿಕೆಯಿಂದ ದಿನದಿಂದ ದಿನಕ್ಕೆ ಕುಗ್ಗುತ್ತಿದೆ ಎಂದು ಬಿಜೆಪಿ ರಾಜ್ಯಾದ್ಯಕ್ಷ ಬಿ ವೈ ವಿಜಯೇಂದ್ರ ಟೀಕಿಸಿದ್ದಾರೆ.

‘ಚೆಕ್‌ನಲ್ಲಿ ಲಂಚ ಪಡೆದ ಬಿ ವೈ ವಿಜಯೇಂದ್ರ ಈಗ ನನ್ನ ಬಗ್ಗೆ ಮಾತಾಡುತ್ತಿದ್ದಾರೆ’ ಎಂದಿದ್ದ ಸಿದ್ದರಾಮಯ್ಯ ಅವರಿಗೆ ಎಕ್ಸ್‌ ತಾಣದಲ್ಲಿ ಪ್ರತ್ಯುತ್ತರ ನೀಡಿರುವ ಅವರು, “ಮುಖ್ಯಮಂತ್ರಿ ಕುರ್ಚಿಗೆ ಅಂಟಿಕೊಂಡೇ ತನಿಖೆ ಎದುರಿಸುತ್ತಿರುವ ಭ್ರಷ್ಟ ಮುಖ್ಯಮಂತ್ರಿ ಎಂಬ ಅಪಖ್ಯಾತಿಗೆ ಭಾಜನರಾಗಿರುವುದನ್ನು ದೇಶವೇ ಗಮನಿಸುತ್ತಿದೆ. ನೀವು ನನ್ನ ಮೇಲೆ ಮಾಡಿರುವ ಆರೋಪ ನಿರಾಧಾರ ಎನ್ನುವುದನ್ನು ನ್ಯಾಯಾಲಯವೇ ತೀರ್ಪಿತ್ತಿದೆ” ಎಂದರು.

“ನೀವೊಬ್ಬ ವಕೀಲರೂ ಆಗಿ ಮತ್ತೆ ಮತ್ತೆ ಪ್ರಸ್ತಾಪಿಸುತ್ತಿರುವುದನ್ನು ನೋಡುತ್ತಿದ್ದರೆ ವಿವೇಕಶೂನ್ಯತೆ ನಿಮ್ಮನ್ನು ಕಾಡುತ್ತಿರುವಂತಿದೆ. ದಿನದಿಂದ ದಿನಕ್ಕೆ ಬಿಗಿಯಾಗುತ್ತಿರುವ ಕಾನೂನಿನ ಕುಣಿಕೆ ನಿಮ್ಮ ನೆಮ್ಮದಿಯನ್ನು ಕಸಿದಿದ್ದು ಇದರಿಂದ ತೀವ್ರ ವಿಚಲಿತಗೊಂಡಂತಿರುವ ನೀವು ‘ಆಡಿದ್ದೇ ಆಡೋ ಕಿಸಬಾಯಿ ದಾಸ’ ಎನ್ನುವಂತೆ ಅದೇ ಸುಳ್ಳು ಆರೋಪಗಳನ್ನು ಪುನರಾವರ್ತಿಸುತ್ತಿದ್ದೀರಿ” ಎಂದು ಕಿಡಿಕಾರಿದ್ದಾರೆ.

Advertisements

“ನಿಮ್ಮದೇ ಸರ್ಕಾರವಿದೆ ನಮ್ಮ ಮೇಲಿನ ಯಾವುದೇ ಆರೋಪವನ್ನು ಸಾಬೀತುಪಡಿಸಲು ತ್ವರಿತಗತಿಯಲ್ಲಿ ತನಿಖೆ ನಡೆಸಲು ನಿಮ್ಮ ಭತ್ತಳಿಕೆಯಲ್ಲಿ ಬ್ರಹ್ಮಾಸ್ತ್ರವೇ ಇದೆ, ಆದಾಗ್ಯೂ ಮುಖ್ಯಮಂತ್ರಿ ಸ್ಥಾನದ ಘನತೆಯನ್ನು ಮರೆತು ಕ್ಷುಲ್ಲಕ ಆರೋಪಗಳನ್ನೇ ಚುನಾವಣಾ ಪ್ರಚಾರದ ಸರಕಾಗಿ ಬಳಸಿಕೊಳ್ಳುತ್ತಿರುವ ನಿಮ್ಮ ಪರಿಸ್ಥಿತಿ ನೋಡಿ ನಗುವಂತಾಗಿದೆ” ಎಂದಿದ್ದಾರೆ.

“ಸದನದಲ್ಲಿ ನಿಮ್ಮ ವಿರುದ್ಧದ ಮುಡಾ ಹಗರಣದ ಚರ್ಚೆಗೆ ಅವಕಾಶ ನೀಡದೇ ಹೆದರಿ ಪಲಾಯನ ಮಾಡಿದ ನೀವು ಭ್ರಷ್ಟಾಚಾರದ ಬಗ್ಗೆ ಮಾತನಾಡುತ್ತಿರುವುದು ‘ಭೂತದ ಬಾಯಲ್ಲಿ ಭಗವದ್ಗೀತೆ ಕೇಳಿಸಿದಂತಾಗಿದೆ’. ಅಮಾಯಕ ದಲಿತ ಕುಟುಂಬವನ್ನು ವಂಚಿಸಿ ಭೂಮಿ ಪಡೆದುಕೊಂಡ ಆರೋಪ ನಿಮ್ಮ ಕುಟುಂಬದ ಮೇಲಿದೆ. ಅದೇ ಭೂಮಿಯನ್ನು ಮುಡಾ ಬಳಸಿಕೊಂಡಿದೆ ಎಂದು 14 ನಿವೇಶನಗಳನ್ನು ಲಪಟಾಯಿಸಿದ ತನಿಖೆ ನಿಮ್ಮ ವಿರುದ್ಧ ನಡೆಯುತ್ತಿದೆ. ನೀವು ತಪ್ಪೇ ಮಾಡದಿದ್ದರೆ ನೀವು ಕೇಳಿರುವ 62 ಕೋಟಿ ರೂ ಬರಲೇಬೇಕಾಗಿದ್ದರೆ ನೀವೇಕೆ ಮುಡಾಗೆ ನಿವೇಶನಗಳನ್ನು ಬೇಷರತ್ತಾಗಿ ರಾತ್ರೋರಾತ್ರಿ ವಾಪಸ್ ನೀಡಿದಿರಿ. ನೀವು ಸ್ವಚ್ಛರಾಗಿದ್ದರೆ ಪಾರದರ್ಶಕ ತನಿಖೆಗೆ ಅವಕಾಶ ನೀಡದೇ ಭ್ರಷ್ಟತೆಯನ್ನು ಏಕೆ ಸಮರ್ಥಿಸಿ ಕೊಳ್ಳುತ್ತಿದ್ದೀರಿ? ನೈತಿಕತೆ ಎಂಬ ಪದವನ್ನು ಕಸದಬುಟ್ಟಿಗೆ ಸೇರಿಸಿದ ನಿಮ್ಮಿಂದ ಪ್ರಾಮಾಣಿಕತೆ ಮಾತು ಕೇಳಿಬರುತ್ತಿರುವುದು ಕರ್ಕಶವಾಗಿದೆ” ಎಂದು ಕುಟುಕಿದ್ದಾರೆ.

“ಪ್ರಧಾನಿ ನರೇಂದ್ರ ಮೋದಿಯವರನ್ನು ಬಹಿರಂಗ ಚರ್ಚೆಗೆ ಆಹ್ವಾನಿಸುವ ನೀವು ಮೊದಲು ಸಾಮಾನ್ಯ ಪ್ರಜೆಯ (ಸ್ನೇಹಮಯಿ ಕೃಷ್ಣ) ನ್ಯಾಯಾಂಗ ಹೋರಾಟದ ವಿರುದ್ಧ ಜಯಿಸಿ ತೋರಿಸಿ ನೋಡೋಣ, ಆಮೇಲೆ ಇತರೆಲ್ಲರ ಭ್ರಷ್ಟತೆಯ ವಿರುದ್ಧ ಮಾತನಾಡುವಿರಂತೆ” ಎಂದು ಹೇಳಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕರ್ನಾಟಕ ಕೃಷಿ ಇಲಾಖೆಯಿಂದ ರೈತರಿಗೆ ಡಿಜಿಟಲ್ ಬಲ: ಬಿಇಎಲ್ ಜೊತೆ ಒಡಂಬಡಿಕೆ

ಕೃಷಿ ಸೇವೆಗಳು ರೈತರಿಗೆ ಇನ್ನಷ್ಟು ಸುಲಭವಾಗಿ ದತ್ತಾಂಶ ಆಧಾರಿತವಾಗಿ ಮತ್ತು ಅವಶ್ಯಕತೆಗೆ...

ಚಿಕ್ಕಮಗಳೂರು l ಸಮಾಜದಲ್ಲಿ ಜಾತಿ,ಧರ್ಮಗಳ ಕಂದಕದ ಗೋಡೆಗಳನ್ನು ತೊಡೆದು ಹಾಕುವುದೇ ನಿಜವಾದ ಸಾಹಿತ್ಯ; ಸಾಹಿತಿ ಮನಸುಳಿ ಮೋಹನ್‌

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ತಾಲ್ಲೂಕು ಸಮಿತಿ...

ಧರ್ಮಸ್ಥಳ | 20 ವರ್ಷಗಳ ಅಸಹಜ ಸಾವು ಪ್ರಕರಣ; ತನಿಖೆ ತೀವ್ರಗೊಳಿಸಲು ಸಮಾನ ಮನಸ್ಕರ ಆಗ್ರಹ

ಬೆಂಗಳೂರಿನ ಪ್ರಮುಖ ಸಮಾನ ಮನಸ್ಕ ಸಂಘಟನೆಗಳು ಗುರುವಾರ ಸಭೆ ಸೇರಿ ಧರ್ಮಸ್ಥಳ...

ಬ್ರಹ್ಮಾವರ | ಮಹೇಶ್ ಶೆಟ್ಟಿ ತಿಮರೋಡಿಗೆ 14 ದಿನಗಳ ಕಾಲ ನ್ಯಾಯಾಂಗ ಬಂಧನ

ಬಿಜೆಪಿ ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿ ಬಿಎಲ್ ಸಂತೋಷ್ ವಿರುದ್ಧ ಅವಹೇಳನಾಕಾರಿ ಹೇಳಿಕೆ...

Download Eedina App Android / iOS

X