ಒಡಿಶಾದಲ್ಲಿ ಅಪ್ಪಳಿಸಿದ್ದ ಡಾನಾ ಚಂಡಮಾರುತದಿಂದಾಗಿ ಕರ್ನಾಟಕವೂ ಸೇರಿದಂತೆ ವಿವಿಧ ರಾಜ್ಯಗಳಲ್ಲಿ ಕಳೆದ ವಾರ ಭಾರೀ ಮಳೆಯಾಗಿತ್ತು. ಇದೀಗ, ಮತ್ತೊಂದು ಚಂಡಾಮಾರುತ ಬೀಸುವ ಆಂತಕ ಹೆಚ್ಚಾಗಿದ್ದು, ಕರ್ನಾಟಕದಲ್ಲಿ ಮುಂದಿನ ಮೂರು ದಿನಗಳ ಕಾಲ ಮತ್ತೆ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಹೇಳಿದೆ.
ಕೇರಳದ ಮತ್ತು ಶೀಲಂಕಾ ಕರಾವಳಿ ಭಾಗದಲ್ಲಿ ವಾಯುಭಾರ ಕುಸಿತವಾಗಿದ್ದು, ಹಿಂದು ಮಹಾ ಸಾಗರದಿಂದ ಬಂಗಾಳಕೊಲ್ಲಿ ಎಡೆಗೆ ಚಂಡಮಾರುತ ಪರಿಚಲನೆ ಸೃಷ್ಟಿಯಾಗಿದೆ. ಪರಿಣಾಮ, ಕೇರಳ, ತಮಿಳುನಾಡು, ಕರ್ನಾಟಕ, ಆಂಧ್ರಪ್ರದೇಶ ಸೇರಿದಂತ ಕರಾವಳಿ ರಾಜ್ಯಗಳಲ್ಲಿ ಮಳೆಯಾಗುವ ಸಾಧ್ಯತೆ ಇದೆ.
ನವೆಂಬರ್ 9ರಿಂದ ಮೂರು ದಿನಗಳ ಕಾಲ ರಾಜ್ಯದ 19 ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಹೇಳಿದೆ. ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಕೊಡಗು, ಶಿವಮೊಗ್ಗ, ಚಿಕ್ಕಮಗಳೂರು, ಹಾಸನ, ಮೈಸೂರು, ಚಾಮರಾಜನಗರ, ಮಂಡ್ಯ, ರಾಮನಗರ, ಬೆಂಗಳೂರು, ಬೆಂಗಳೂರು ಗ್ರಾಮಾಂತರ, ಕೋಲಾರ, ತಮಕೂರು, ಚಿತ್ರದುರ್ಗ, ದಾವಣಗೆರೆ ಹಾಗೂ ವಿಜಯನಗರ ಜಿಲ್ಲೆಗಳಲ್ಲಿ ಮಳೆಯಾಗಲಿದೆ ಎಂದು ಇಲಾಖೆ ತಿಳಿಸಿದೆ.