ಕಮಲಾ ಪೂರ್ವಜರ ಊರಿನಲ್ಲಿ ನಿರಾಸೆ; ಉತ್ತರ ಪ್ರದೇಶದಲ್ಲಿ ಡೊನಾಲ್ಡ್‌ ಟ್ರಂಪ್‌ ಗೆಲುವಿಗೆ ಪೂಜೆ

Date:

Advertisements

ಅಮೆರಿಕ ಅಧ್ಯಕ್ಷೀಯ ಚುನಾವಣೆಯಲ್ಲಿ ಡೆಮಾಕ್ರಟಿಕ್ ಪಕ್ಷದ ಅಭ್ಯರ್ಥಿ ಕಮಲಾ ಹ್ಯಾರಿಸ್ ಅವರು ಗೆಲುವು ಸಾಧಿಸುವು ಬಹುತೇಕ ಕಷ್ಟವಾಗಿದೆ. ಮತ ಎಣಿಕೆಯ ಫಲಿತಾಂಶ ಹೊರಬೀಳುತ್ತಿದ್ದಂತೆಯೆ ಅವರ ಪೂರ್ವಜರ ಗ್ರಾಮವಾದ ತಮಿಳುನಾಡಿನ ತಿರುವಾವೂರು ಜಿಲ್ಲೆಯ ತುಳಸೇಂದ್ರಪುರಂನ ಜನರ ಮುಖದಲ್ಲಿ ನಿರಾಸೆ ಆವರಿಸಿದೆ.

ಬೆಳಿಗ್ಗೆಯಿಂದಲೂ ಚುನಾವಣಾ ಫಲಿತಾಂಶ ತಿಳಿದುಕೊಳ್ಳಲು ಜನರು ಟಿ.ವಿ ಮುಂದೆ ಕುಳಿತಿದ್ದರು. ಹಲವು ವೆಬ್‌ಸೈಟ್‌ಗಳಲ್ಲಿ ಫಲಿತಾಂಶದ ಬಗ್ಗೆ ಕುತೂಹಲದ ಕಣ್ಣಿಟ್ಟಿದ್ದರು. ಕಮಲಾ ಹ್ಯಾರಿಸ್ ಅವರ ಗೆಲುವಿಗೆ ಹಲವು ಗ್ರಾಮಸ್ಥರು, ಶ್ರೀಧರ್ಮಸಾಸ್ಥ ಪೆರುಮಾಳ್ ದೇಗುಲಕ್ಕೆ ಭೇಟಿ ನೀಡಿ ಪ್ರಾರ್ಥನೆ ಸಲ್ಲಿಸಿದ್ದರು.

‘ನಾವು ಅವರ ಗೆಲುವನ್ನು ನಿರೀಕ್ಷಿಸುತ್ತಿದ್ದೆವು. ದೀಪಾವಳಿಗಿಂತ ಅದ್ಧೂರಿ ಸಂಭ್ರಮಾಚರಣೆ ಉದ್ದೇಶಿಸಿದ್ದೆವು. ಪಟಾಕಿ ಸಿಡಿಸಲು, ಸಿಹಿ ಹಂಚಲು, ದೇ ವಾಲಯಗಳಲ್ಲಿ ಪೂಜೆ ನಡೆಸಲು, ಜನರಿಗೆ ಊಟ ನೀಡಲು ಸಿದ್ಧತೆ ಮಾಡಿಕೊಂಡಿದ್ದೆವು’ ಎಂದು ಡಿಎಂಕೆ ಪಕ್ಷದ ತಿರುವಾವೂರು ಜಿಲ್ಲೆಯ ಪ್ರತಿನಿಧಿ ಹಾಗೂ ತುಳಸೇಂದ್ರಪುರಂನ ನಾಯಕ ಜೆ. ಸುಧಾಕರ್ ಹೇಳಿದ್ದಾರೆ.

Advertisements

‘ಸೋಲು–ಗೆಲುವು ಜೀವನದ ಭಾಗ. ಇದೊಂದು ಕಠಿಣ ಹೋರಾಟ. ಅವರ ಹೋರಾಟದ ಮನೋಭಾವವನ್ನು ಮೆಚ್ಚಲೇಬೇಕು. ಅವರು ಹೋರಾಟಗಾರ್ತಿ , ಪುನರಾಗಮನಮಾಡುತ್ತಾರೆ. ಕಮಲಾ ಅಧ್ಯಕ್ಷರಾಗುತ್ತಾರೆ ಎಂದು ಗ್ರಾಮದ ಪ್ರತಿಯೊಬ್ಬರು ನಿರೀಕ್ಷಿಸುತ್ತಿದ್ದರು’ ಎಂದು ಅವರು ನುಡಿದಿದ್ದಾರೆ.

ಈ ಸುದ್ದಿ ಓದಿದ್ದೀರಾ? ಅಮೆರಿಕ ಚುನಾವಣೆ | ಕಮಲಾ ಹ್ಯಾರಿಸ್ – ಡೊನಾಲ್ಡ್‌ ಟ್ರಂಪ್‌; ಮತದಾರರ ಚಿತ್ತ ಯಾರತ್ತ?

ಟ್ರಂಪ್‌ ಗೆಲುವು ಸಾಧಿಸಿದ ಹಿನ್ನೆಲೆ ಉತ್ತರ ಪ್ರದೇಶದ ಪ್ರಯಾಗ್‌ರಾಜ್‌ನಲ್ಲಿ ಕೆಲವು ಧಾರ್ಮಿಕ ಸಂಘಟನೆಯ ಕಾರ್ಯಕರ್ತರು ಡೋನಾಲ್ಡ್‌ ಟ್ರಂಪ್ ಭಾವಚಿತ್ರಗಳಿಗೆ ಕುಂಕುಮವಿಟ್ಟು, ಸಿಹಿ ಹಂಚಿ ಸಂಭ್ರಮಾಚರಣೆ ವ್ಯಕ್ತಪಡಿಸಿದರು.

ಅಮೆರಿಕದ 538 ಕ್ಷೇತ್ರಗಳ ಪೈಕಿ ಡೊನಾಲ್ಡ್ ಟ್ರಂಪ್ 270 ಸ್ಥಾನಗಳಲ್ಲಿ ಮುನ್ನಡೆ ಸಾಧಿಸಿದ್ದು, ಕಮಲಾ ಹ್ಯಾರಿಸ್ 214 ಸ್ಥಾನಗಳಲ್ಲಿ ಮುಂದಿದ್ದಾರೆ. ಗೆಲುವಿಗೆ 270 ಸ್ಥಾನಗಳ ಅವಶ್ಯಕತೆಯಿದ್ದು, ಈ ಸ್ಥಾನಗಳಲ್ಲಿ ಟ್ರಂಪ್‌ ಮುನ್ನಡೆಯಲ್ಲಿದ್ದಾರೆ. ಇದರೊಂದಿಗೆ ಡೊನಾಲ್ಡ್‌ ಟ್ರಂಪ್‌ ಅಮೆರಿಕದ 47ನೇ ಅಧ್ಯಕ್ಷರಾಗಿ ಮುಂದಿನ ವರ್ಷದ ಜನವರಿಯಲ್ಲಿ ಅಧಿಕಾರ ಸ್ವೀಕರಿಸಲಿದ್ದಾರೆ.

ಅದಲ್ಲದೆ ನಿರ್ಣಾಯಕ ಎಲೆಕ್ಟೋರಲ್‌ ರಾಜ್ಯಗಳಲ್ಲಿ ಗೆಲುವು ಸಾಧಿಸಿದ ನಂತರ ರಿಪಬ್ಲಿಕನ್‌ ಪಕ್ಷದ ಅಭ್ಯರ್ಥಿ ಹಾಗೂ ಅಮೆರಿಕದ ಮಾಜಿ ಅಧ್ಯಕ್ಷ ಡೊನಾಲ್ಡ್ ಟ್ರಂಪ್‌ ತಾವು ಚುನಾವಣೆಯಲ್ಲಿ ಗೆಲುವು ಸಾಧಿಸಿರುವುದಾಗಿ ಘೋಷಿಸಿಕೊಂಡಿದ್ದಾರೆ.

Trump Won india
ಈದಿನ 1
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಆನ್‌ಲೈನ್‌ ಜೂಜಾಟ ತಡೆಗೆ ಕಠಿಣ ಕಾನೂನು; ಸಂಸತ್ತಿನಲ್ಲಿ ಆನ್‌ಲೈನ್ ಗೇಮಿಂಗ್‌ ಪ್ರಚಾರ ಮತ್ತು ನಿಯಂತ್ರಣ ಮಸೂದೆ, 2025 ಮಂಡನೆ

ಭಾರತದ ಡಿಜಿಟಲ್ ಮನರಂಜನಾ ಕ್ಷೇತ್ರದಲ್ಲಿ ಭಾರೀ ಬದಲಾವಣೆಯನ್ನು ತರಲು ಸಿದ್ಧವಾಗಿರುವ ಆನ್‌ಲೈನ್...

ಕ್ರಿಮಿನಲ್ ಪ್ರಕರಣಗಳಲ್ಲಿ ಪ್ರಧಾನಿ, ಸಿಎಂ ಪದಚ್ಯುತಿಗೆ ಅನುವು ಮಾಡಿಕೊಡುವ ಮಸೂದೆ ಸಂಸತ್ತಿನಲ್ಲಿ ಮಂಡನೆ

ಗಂಭೀರ ಕ್ರಿಮಿನಲ್ ಪ್ರಕರಣಗಳಲ್ಲಿ ಬಂಧಿಸಲ್ಪಟ್ಟ ಅಥವಾ ಬಂಧನದಲ್ಲಿರುವ ಚುನಾಯಿತ ಪ್ರತಿನಿಧಿಗಳನ್ನು ಅಧಿಕಾರದಿಂದ...

ಬಿಹಾರದಂತೆಯೇ, ಇಡೀ ದೇಶ ಚುನಾವಣಾ ಕಳ್ಳತನವನ್ನು ವಿರೋಧಿಸುತ್ತದೆ: ರಾಹುಲ್ ಗಾಂಧಿ

ಬಿಹಾರದಲ್ಲಿ ತಮ್ಮ 'ಮತದಾರ ಅಧಿಕಾರ ಯಾತ್ರೆ'ಗೆ ಸಕಾರಾತ್ಮಕ ಪ್ರತಿಕ್ರಿಯೆಯನ್ನು ಸ್ವಾಗತಿಸಿದ ಲೋಕಸಭೆ...

ಗುಜರಾತ್‌ನ ಗ್ರಾಮವೊಂದರಲ್ಲಿ ಕೊನೆಗೂ ದಲಿತರಿಗೆ ಕ್ಷೌರದಂಗಡಿಗೆ ಮುಕ್ತ ಪ್ರವೇಶ: ಶತಮಾನಗಳ ಅನಿಷ್ಟ ಪದ್ದತಿಗೆ ತೆರೆ

ಗುಜರಾತ್‌ನ ಜುನಾಗಡ್‌ ಜಿಲ್ಲೆಯಲ್ಲಿ ಗಡ್ಡ ಮೀಸೆ ಬೆಳೆಸಿದ್ದಕ್ಕೆ ದಲಿತ ಯುವಕರಿಬ್ಬರ ಜಾತಿ...

Download Eedina App Android / iOS

X