ಲಾರಿ ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಬದಿಯಲ್ಲಿದ್ದ ಟ್ರಾನ್ಸ್ ಫಾರ್ಮರ್‌ಗೆ ಡಿಕ್ಕಿ ಹೊಡೆದ ಪರಿಣಾಮ ವಿದ್ಯುತ್ ಪರಿವರ್ತಕ ನಜ್ಜುಗುಜ್ಜಾದ ಘಟನೆ ರಾಯಚೂರು ತಾಲೂಕಿನ ಹಂಚಿನಾಳ ಬಳಿ ನಡೆದಿದೆ.
ಮಂತ್ರಾಲಯ ರಸ್ತೆಯಿಂದ ರಾಯಚೂರಿಗೆ ಬರುತ್ತಿದ್ದ 20 ಟೈಯರ್‌ನ ಬೃಹತ್ ಗಾತ್ರದ ಲಾರಿ ಬೆಳಗಿನ ಜಾವ ಚಾಲಕನ ನಿಯಂತ್ರಣ ತಪ್ಪಿ ಮೊದಲು ಮರಕ್ಕೆ ಡಿಕ್ಕಿ ಹೊಡೆದಿದೆ. ಬಳಿಕ ಸಂಪೂರ್ಣ ನಿಯಂತ್ರಣ ಕಳೆದುಕೊಂಡು ಟ್ರಾನ್ಸ್ ಫಾರ್ಮರ್‌ಗೂ ಡಿಕ್ಕಿ ಹೊಡೆದಿದೆ. ಘಟನೆಯಿಂದ ಚಾಲಕನಿಗೆ ಸಣ್ಣಪುಟ್ಟ ಗಾಯಗಳಾಗಿದ್ದು, ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ.
ಈ ಸುದ್ದಿ ಓದಿದ್ದೀರಾ? ಉಡುಪಿ | ಬೈಲಕೆರೆಯಲ್ಲಿ ಅಪರಿಚಿತ ಶವ ಪತ್ತೆ; ಸಂಬಂಧಿಕರು ಜಿಲ್ಲಾಸ್ಪತ್ರೆ ಸಂಪರ್ಕಿಸುವಂತೆ ಸೂಚನೆ
“ಘಟನೆ ನಡೆಯುವ ವೇಳೆ ವಿದ್ಯುತ್ ಇರಲಿಲ್ಲ. ಇದ್ದಿದ್ದರೆ ಭಾರೀ ಅನಾಹುತವೇ ಸಂಭವಿಸುತಿತ್ತು. ಅದೃಷ್ಟವಶಾತ್ ಯಾರಿಗೂ ಹಾನಿಯಾಗದೆ ಭಾರೀ ಅನಾಹುತ ತಪ್ಪಿದೆ” ಎಂದು ಸ್ಥಳೀಯರು ನಿಟ್ಟುಸಿರು ಬಿಟ್ಟಿದ್ದಾರೆ.
ಯರಗೇರಾ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು, ಯಾವುದೇ ರೀತಿಯ ಪ್ರಕರಣ ದಾಖಲಾಗಿಲ್ಲ.
