ವಕ್ಫ್ ಆಸ್ತಿ ವಿವಾದಕ್ಕೆ ಸಂಬಂಧಿಸಿದಂತೆ ರೈತರಿಗೆ ನೀಡಲಾದ ನೋಟಿಸ್‌ಗಳನ್ನು ಕೂಡಲೇ ಹಿಂಪಡೆಯಬೇಕೆಂದು ಸರ್ಕಾರ ಆದೇಶಿಸಿದೆ ಎಂದು ಬೀದರ್ ಸಂಸದ ಸಾಗರ ಖಂಡ್ರೆ ತಿಳಿಸಿದ್ದಾರೆ.
ಬೀದರ್‌ನಲ್ಲಿ ಪತ್ರಿಕೆ ಹೇಳಿಕೆ ನೀಡಿರುವ ಅವರು, “ಈ ಬಗ್ಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸಂಬಂಧಪಟ್ಟ ಸಚಿವರೊಂದಿಗೆ ಸಭೆ ನಡೆಸಿ, ವಕ್ಫ್ ಕುರಿತು ಯಾವುದೇ ನೋಟಿಸ್ ನೀಡಿದಲ್ಲಿ ಅದನ್ನು ಕೂಡಲೇ ವಾಪಸ್ ಪಡೆಯಲು ಹಾಗೂ ವಿಚಾರಣೆ ಇಲ್ಲದೆ ಪಹಣಿ ದಾಖಲೆಗಳಲ್ಲಿ ಬದಲಾವಣೆ ಮಾಡಿದ್ದರೆ ಅದನ್ನು ರದ್ದುಗೊಳಿಸಲು ಸ್ಪಷ್ಟ ನಿರ್ದೇಶನ ನೀಡಿದ್ದಾರೆ” ಎಂದು ತಿಳಿಸಿದ್ದಾರೆ.
ಈ ಸುದ್ದಿ ಓದಿದ್ದೀರಾ? ವಿಜಯಪುರ | ಕಾಂತರಾಜ ಜಾತಿಗಣತಿ ವರದಿ ಬಿಡುಗಡೆಗೆ ಅಹಿಂದ ಮುಖಂಡರ ಆಗ್ರಹ
“ಮುಂದೆ ರೈತರಿಗೆ ಯಾವುದೇ ರೀತಿಯ ತೊಂದರೆ ಬರುವುದಿಲ್ಲ. ಬೀದರ್ ಲೋಕಸಭೆ ಕ್ಷೇತ್ರದ ಜನಪ್ರತಿನಿಧಿಯಾಗಿ, ರೈತರ ಹಿತಾಸಕ್ತಿ ಮತ್ತು ಹಕ್ಕುಗಳನ್ನು ರಕ್ಷಿಸುವುದು ನನ್ನ ಪ್ರಥಮ ಆದ್ಯತೆಯಾಗಿದ್ದು, ರೈತರಿಗೆ ಅನ್ಯಾಯವಾಗದಂತೆ ಮತ್ತು ರೈತರ ಹಿತಕ್ಕಾಗಿ ಯಾವುದೇ ತ್ಯಾಗ ಮಾಡಲು ನಾನು ಸಿದ್ಧನಿದ್ದೇನೆ” ಎಂದು ಭರವಸೆ ನೀಡಿದರು.