ಬೆಂಗಳೂರಿನ ಆಸ್ಪತ್ರೆಯೊಂದರಲ್ಲಿ ಮಹಿಳೆಯರ ಶೌಚಾಲಯದಲ್ಲಿ ಕ್ಯಾಮೆರಾ ಇಟ್ಟಿದ್ದ ವಿಕೃತ ಕಾಮುಕ, ಆಸ್ಪತ್ರೆಯ ವಾರ್ಡ್‌ಬಾಯ್‌ನನ್ನು ಪೊಲೀಸರು ಬಂಧಿಸಿದ್ದಾರೆ. ಆರೋಪಿಯ ವಿರುದ್ಧ ಪ್ರಕರಣ ದಾಖಲಿಸಿದ್ದಾರೆ.
ನಗರದ ತಿಲಕನಗರದ ಆಸ್ಪತ್ರೆಯೊಂದರಲ್ಲಿ ಈ ಕೃತ್ಯ ನಡೆದಿದೆ. ಆರೋಪಿಯನ್ನು ಕಲಬುರಗಿಯ ಯಲ್ಲಾಲಿಂಗ ಎಂದು ಗುರುತಿಸಲಾಗಿದೆ. ಆರೋಪಿಯು ಆಸ್ಪತ್ರೆಯಲ್ಲಿ ವಾರ್ಡ್ ಸಹಾಯಕನಾಗಿ ಕೆಲಸ ಮಾಡುತ್ತಿದ್ದನು ಎಂದು ತಿಳಿದುಬಂದಿದೆ.
ಅಕ್ಟೋಬರ್ 31ರಂದು ಆಸ್ಪತ್ರೆಯ ಮಹಿಳಾ ಸಿಬ್ಬಂದಿ ಶೌಚಾಲಯಕ್ಕೆ ತೆರಳಿದ್ದಾಗ, ಕಿಟಕಿಯ ಮೇಲೆ ಮೊಬೈಲ್ ಇಟ್ಟಿರುವುದನ್ನು ಗಮನಿಸಿದ್ದಾರೆ. ಆ ಮೊಬೈಲ್ ತೆಗೆದುಕೊಂಡು ಪರಿಶೀಲಿಸಿದಾಗ ಅದರಲ್ಲಿ ಹಲವಾರು ವಿಡಿಯೋಗಳಿರುವುದು ಕಂಡುಬಂದಿದೆ. ಬಳಿಕ, ಪೊಲೀಸರಿಗೆ ಮಾಹಿತಿ ನೀಡಿದ್ದು, ಆರೋಪಿಯನ್ನು ತಿಲಕನಗರ ಪೊಲೀಸರು ಬಂದಿಸಿದ್ದಾರೆ.
ಆರೋಪಿ ವಿರುದ್ಧ ಭಾರತೀಯ ನ್ಯಾಯ ಸಂಹಿತೆ (ಬಿಎನ್‌ಎಸ್) ಸೆಕ್ಷನ್ 77ರ ಅಡಿಯಲ್ಲಿ ಪ್ರಕರಣ ದಾಖಲಾಗಿದೆ.