- ಲೈಂಗಿಕ ಅಲ್ಪಸಂಖ್ಯಾತರಿಗೆ ಕಿರುಕುಳ ನೀಡುವವರ ವಿರುದ್ಧ ಕ್ರಮಕ್ಕೆ ಕಠಿಣ ಕಾನೂನು ಅಗತ್ಯ
- ರಾಜ್ಯಸಭಾ, ವಿಧಾನಪರಿಷತ್ತಿನಲ್ಲಿ ಲೈಂಗಿಕ ಅಲ್ಪಸಂಖ್ಯಾತರ ಸಮಸ್ಯೆ ಚರ್ಚಿಸಿ, ಸಮಿತಿ ರಚಿಸಿ
ಸಲಿಂಗ ವಿವಾಹ ಮತ್ತು ಲೈಂಗಿಕ ಅಲ್ಪಸಂಖ್ಯಾತರು ದಿನನಿತ್ಯ ತಮ್ಮ ಜೀವನದಲ್ಲಿ ಅನುಭವಿಸುತ್ತಿರುವ ಸಮಸ್ಯೆಗಳ ಬಗ್ಗೆ ಮುಕ್ತವಾಗಿ ಚರ್ಚಿಸಲು ವಿಧಾನ ಪರಿಷತ್ತಿನಲ್ಲಿ ಅವಕಾಶ ನೀಡಬೇಕೆಂದು ಆಗ್ರಹಿಸಿ ಹೋರಾಟಗಾರ್ತಿ ಅಕ್ಕೈ ಪದ್ಮಶಾಲಿ ಅವರು ರಾಷ್ಟ್ರಪತಿ ದ್ರೌಪದಿ ಮುರ್ಮು ಅವರಿಗೆ ಪತ್ರ ಬರೆದಿದ್ದಾರೆ.
ಲೈಂಗಿಕ ಅಲ್ಪಸಂಖ್ಯಾತರ ವಿರೋಧಿ ದಿನ (ಎಲ್‌ಜಿಬಿಟಿಕ್ಯೂಐಎ) ಅಂಗವಾಗಿ ರಾಷ್ಟ್ರಪತಿ ದೌಪದಿ ಮುರ್ಮು ಅವರಿಗೆ ಮೇ 18ರಂದು ಅಕ್ಕೈ ಪದ್ಮಶಾಲಿ ಪತ್ರ ಬರೆದಿದ್ದಾರೆ.
ಸದನದಲ್ಲಿ ಅಂತಾರಾಷ್ಟ್ರೀಯ ಲಿಂಗತ್ವ ವಿರುದ್ಧ ದೌರ್ಜನ್ಯ, ಸಲಿಂಗ ವಿವಾಹಕ್ಕೆ ಮ್ಯಾನತೆ, ಲೈಂಗಿಕ ಅಲ್ಪಸಂಖ್ಯಾತರು ದಿನ ನಿತ್ಯ ತಮ್ಮ ಬದುಕಿನಲ್ಲಿ ಎದುರಿಸುತ್ತಿರುವ ಸಮಸ್ಯೆಗಳ ಕುರಿತು ಚರ್ಚೆ ನಡೆಸಲು ರಾಜ್ಯಸಭಾ, ವಿಧಾನಪರಿಷತ್ತಿನಲ್ಲಿ ಸಮುದಾಯಕ್ಕೆ ಸೂಕ್ತ ಸ್ಥಾನ ಒದಗಿಸಬೇಕು ಎಂದು ಆಗ್ರಹಿಸಿದ್ದಾರೆ.
ಸದನದಲ್ಲಿ ಇಲ್ಲಿಯವರೆಗೂ ಲೈಂಗಿಕ ಅಲ್ಪಸಂಖ್ಯಾತರ ಸಮಸ್ಯೆಗಳ ಬಗ್ಗೆ ಚರ್ಚಿಸಲು ಅಥವಾ ಕಾನೂನು ಬದ್ಧವಾಗಿ ಪರಿಹರಿಸಲು ಯಾವುದೇ ಸಮಿತಿ ರಚನೆಯಾಗಿಲ್ಲ. ತಮ್ಮದೇ ಸಮಸ್ಯೆಗಳ ಕುರಿತು ಮಾತನಾಡಲು ಅವಕಾಶವೂ ಇಲ್ಲ ಇದೊಂದು ಖಂಡನಾರ್ಹ ವಿಷಯ. ಲೈಂಗಿಕ ಅಲ್ಪಸಂಖ್ಯಾತರಿಗೆ ಸದನದಲ್ಲಾಗುವ ಚರ್ಚೆಗಳಿಗೆ ಅವಕಾಶ ಕೊಡಬೇಕು ಎಂದು ಪತ್ರದಲ್ಲಿ ಉಲ್ಲೇಖಿಸಿದ್ದಾರೆ.
ಈ ಸುದ್ದಿ ಓದಿದ್ದೀರಾ?: ಹೊಸಿಲ ಒಳಗೆ-ಹೊರಗೆ | ನೀವು ಯಾವತ್ತಾದರೂ ಬಸ್ಸಿನಲ್ಲಿ ಪಯಣಿಸುವ ಮಹಿಳೆಯ ಸ್ಥಾನದಲ್ಲಿ ನಿಂತು ಯೋಚಿಸಿದ್ದೀರಾ?
ರಾಜ್ಯಗಳಲ್ಲಿಯೂ ವಿಧಾನ ಪರಿಷತ್ತಿನಲ್ಲಿ ಚರ್ಚೆಗೆ ಅವಕಾಶ ನೀಡಬೇಕು. ಲೈಂಗಿಕ ಅಲ್ಪಸಂಖ್ಯಾತರಿಗೆ ಕಿರುಕುಳ ನೀಡುವ ಪೊಲೀಸರು. ಕಠಿಣ ಕ್ರಮದ ಕಾನೂನು, ಸ್ವಯಂ ಉದ್ಯೋಗಕ್ಕೆ ಆರ್ಥಿಕ ನೆರವು, ಮನೆ, ಮಕ್ಕಳ ಶಿಕ್ಷಣಕ್ಕೆ ನೆರವು, ಆರೋಗ್ಯ ಹಾಗೂ ಪಿಂಚಣಿ ಸೌಲಭ್ಯ ಒದಗಿಸಲು ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಮುಂದಾಗಬೇಕು ಎಂದು ಒತ್ತಾಯಿಸಿದ್ದಾರೆ.
ಲೈಂಗಿಕ ಕಾರ್ಯಕರ್ತೆಯರಿಗೆ ಕಾನೂನಿನಲ್ಲಿ ಅವಕಾಶ ಕಲ್ಪಿಸಿ ಕೊಡಲಾಗಿದೆ. ಆದರೂ, ಅವರು ಸಾಕಷ್ಟು ಸಮಸ್ಯೆ ಎದುರಿಸುತ್ತಿದ್ದಾರೆ. ಈ ಸಮಾಜದಲ್ಲಿ ಗೌರವ ಸ್ವಾಭಿಮಾನದಿಂದ ಬದುಕುವಂತಾಗಬೇಕು. ಕಿರುಕುಳ ನೀಡುತ್ತಿರುವವರ ವಿರುದ್ಧ ಕ್ರಮ ಕೈಗೊಳ್ಳಲು ಕಠಿಣ ಕಾನೂನಿನ ಅಗತ್ಯವಿದೆ ಎಂದೂ ಅಕೈ ಪದ್ಮಶಾಲಿ ನುಡಿದರು.