ವಿಜಯನಗರ ಜಿಲ್ಲೆಯ ಹರಪನಹಳ್ಳಿ ತಾಲೂಕಿನ ನೀಲಗುಂದ ಗ್ರಾಮದಲ್ಲಿ ಟ್ರಾಕ್ಟರ್ ಡಿಕ್ಕಿ ಹೊಡೆದು ಎಂಟು ವರ್ಷದ ಬಾಲಕಿ ಸಾವನಪ್ಪಿರುವ ಘಟನೆ ಗುರುವಾರ ಸಂಜೆ ನಡೆದಿದೆ.
ನೀಲಗುಂದ ಹರಿಜನ ಕಾಲೋನಿಯ ಅಶೋಕ ಮತ್ತು ಶಾರದಾ ದಂಪತಿ ಪುತ್ರಿ ಲಕ್ಷ್ಮಿ (8) ಮೃತ ಬಾಲಕಿ ಎಂದು ತಿಳಿದು ಬಂದಿದೆ.
ಮಹಾರಾಷ್ಟ್ರ ಮೂಲದ ಆರೋಪಿ ಟ್ರಾಕ್ಟರ್ ಚಾಲಕನನ್ನು ಬಂಧಿಸಲಾಗಿದೆ. ಎರಡು ಟ್ರಾಲಿಗಳಲ್ಲಿ ಕಬ್ಬು ತುಂಬಿದ ಟ್ರಾಕ್ಟರ್ ಅಜಾಗರೂಕತೆಯಿಂದ ಚಲಾಯಿಸಿದ ಪರಿಣಾಮ ಬಾಲಕಿ ಮೇಲೆ ಹರಿದಿದೆ ಎಂದು ತಿಳಿದು ಬಂದಿದೆ.
ಈ ಸುದ್ದಿ ಓದಿದ್ದೀರಾ? ಜಮೀನಿನ ಪಹಣಿಯಲ್ಲಿ ವಕ್ಫ್ ಹೆಸರು ನಮೂದು; ರೈತ ಆತ್ಮಹತ್ಯೆ: ಸುಳ್ಳು ಸುದ್ದಿ ಹಂಚಿಕೊಂಡ ತೇಜಸ್ವಿ ಸೂರ್ಯ
ಈ ಕುರಿತು ಹರಪನಹಳ್ಳಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.