ಮೇಕೆದಾಟು ಯೋಜನೆ | ಪ್ರಧಾನಿ ಮೋದಿ ಅವರಿಂದ ಒಪ್ಪಿಗೆ ಕೊಡಿಸಿಯೇ ಸಾಯುವೆ: ಹೆಚ್‌ ಡಿ ದೇವೇಗೌಡ

Date:

Advertisements

ನನ್ನ ಕೊನೆ ಉಸಿರು‌ ಎಳೆಯುವ ಮುನ್ನವೇ ಮೇಕೆದಾಟು ಯೋಜನೆಗೆ ಪ್ರಧಾನಿ ನರೇಂದ್ರ ಮೋದಿ ಅವರಿಂದ ಒಪ್ಪಿಗೆ ಕೊಡಿಸುತ್ತೇನೆ ಎಂದು ಮಾಜಿ ಪ್ರಧಾನಿ ಹೆಚ್ ಡಿ ದೇವೇಗೌಡ ಭರವಸೆ ನೀಡಿದರು.

ಚನ್ನಪಟ್ಟಣದ ಹೊಡಿಕೆಹೊಸಹಳ್ಳಿ ಗ್ರಾಮದಲ್ಲಿ ಎನ್‌ಡಿಎ ಅಭ್ಯರ್ಥಿ ನಿಖಿಲ್ ಕುಮಾರಸ್ವಾಮಿ ಪರವಾಗಿ ಮತಯಾಚನೆ ಮಾಡುವ ವೇಳೆ ಮಾತನಾಡಿದ ಅವರು, “ಮೇಕೆದಾಟು ಯೋಜನೆ ಆಗುತ್ತೆ ಎಂದರೆ ಅದು‌‌ ಪ್ರಧಾನಿ ನರೇಂದ್ರ ಮೋದಿ ಅವರಿಂದ ಮಾತ್ರ ಸಾಧ್ಯ. ಇದರಲ್ಲಿ ಎರಡು ಮಾತಿಲ್ಲ. ಆದರೆ ತಮಿಳುನಾಡಿನವರು‌ ನಮ್ಮ ಕುತ್ತಿಗೆ ಹಿಡಿದಿದ್ದಾರೆ” ಎಂದರು.

“ನಾನು‌ ಇಗ್ಗಲೂರು‌ ಆಣೆಕಟ್ಟು ಕಟ್ಟಿದ್ದು‌ ದೊಡ್ಡ ವಿಷಯ ಅಲ್ಲ. ನಾನು ಪ್ರಧಾನಿ ಆಗಿದ್ದು‌ ದೈವದ ಆಟ. ನಾನು ಪ್ರಧಾನಿ ಅವರಿಗೆ ಮನವಿ ಮಾಡುತ್ತೇನೆ. ವಾಸ್ತವ ಸ್ಥಿತಿಯನ್ನು ಮನವರಿಕೆ ಮಾಡಿಕೊಡುತ್ತೇನೆ. ಈಗಾಗಲೇ ಹಲವಾರು ಸಲ ಅವರು ನನ್ನ ಮನವಿ ಆಲಿಸಿದ್ದಾರೆ” ಎಂದು ಹೇಳಿದರು.

Advertisements

ಕಾಂಗ್ರೆಸ್ ನಾಯಕರು ನಾಟಕ ಮಾಡುತ್ತಿದ್ದಾರೆ

“ಆರು ತಿಂಗಳಿಂದ ಕಾಂಗ್ರೆಸ್ ಅಧ್ಯಕ್ಷ ಡಿಕೆ ಶಿವಕುಮಾರ್ ಅವರು ನಾನೇ ಅಭ್ಯರ್ಥಿ ಅಂದರು. ರಾಜ್ಯದ ಮಾನ ಮಾರ್ಯಾದೆಯನ್ನು ತೀರಾ ಕೆಳಮಟ್ಟಕ್ಕೆ ತೆಗೆದುಕೊಂಡು ಹೋದರು. 55 ವರ್ಷದಿಂದ ಚನ್ನಪಟ್ಟಣದಲ್ಲಿ ನಾನು ಸಂಘಟನೆ ಮಾಡಿದ್ದೇನೆ. ನಾನು ಕಡಿಮೆ ದರದಲ್ಲಿ ಪಡಿತರ ನೀಡಿದ್ದೇನೆ. ಅದನ್ನು ಸಿದ್ದರಾಮಯ್ಯ ಬಳಿ‌ ನೀವು ಕೇಳಿ. ಆಲಮಟ್ಟಿ, ಹಾರಂಗಿ, ಹೇಮಾವತಿ, ಯಗಚಿ ಅಣೆಕಟ್ಟು ಕಟ್ಟಿದವರು ಯಾರು? ಬರೀ ಇಗ್ಗಲೂರು ಡ್ಯಾಮ್ ಅಷ್ಟೇ ಅಲ್ಲ. ನಿಮ್ಮನ್ನು ‌ನಾನು ನೋಡುತ್ತಿದ್ದರೆ 92 ವರ್ಷದ ನನಗೆ 18ರ ಶಕ್ತಿ ಬರುತ್ತದೆ. ಇನ್ನೂ ನಾಲ್ಕಾರು ವರ್ಷ ಬದುಕಿರುತ್ತೇನೆ” ಎಂದರು.

“ಎಲ್ಲಿ ಡಿಕೆ?, ಎಲ್ಲಿ ಎಚ್‌ಡಿಕೆ?, ಎಲ್ಲಿ ಕುಮಾರಸ್ವಾಮಿ? ಹಿಮಾಲಯ ಪರ್ವತಕ್ಕೂ ಇಲ್ಲಿನ ಸಣ್ಣ ಗುಡ್ಡಕ್ಕೂ ಎಲ್ಲಿಯ ಹೊಲಿಕೆ. ಒಂದು ಶಾಲೆ ಮಾಡಲು ಜಾಗ ಕೇಳಿದರೆ ದುಡ್ಡು ದುಡ್ಡು ಅಂತಾರೆ” ಎಂದು ಹರಿಹಾಯ್ದರು.

“ನಿಖಿಲ್ ನನ್ನು ನಾನೇ ರಾಜ್ಯ ನಾಯಕನನ್ನಾಗಿ ಮಾಡುತ್ತೇನೆ. ತೋಟದಲ್ಲಿ ಕುಳಿತು ಹೇಳಿಕೊಟ್ಟು ರಾಜ್ಯ ನಾಯಕನನ್ನಾಗಿ ಮಾಡುವ ಕಾಲ ಬರಲಿದೆ. ಅವನನ್ನು ದೊಡ್ಡ ನಾಯಕನನ್ನಾಗಿ ರೂಪಿಸುತ್ತೇನೆ” ಎಂದು ತಿಳಿಸಿದರು.

ಯಾರಾದರೂ ಕಣ್ಣೀರು ಹಾಕಿದರೆ ಅಣಕಿಸಬಾರದು: ನಟಿ ತಾರಾ

“ಯಾರಾದರೂ ಕಣ್ಣೀರು ಹಾಕಿದರೆ ಅಣಕಿಸಬಾರದು. ತಾಯಿ ಭಾವನೆ ಇದ್ದವರಿಗೆ ಮಾತ್ರ ಕಣ್ಣಿರು ಬರುತ್ತದೆ. ಇದನ್ನೇ ಟೀಕೆ ಮಾಡಬಾರದು” ಎಂದು ಬಿಜೆಪಿ ಹಿರಿಯ ನಾಯಕಿ ಹಾಗೂ ನಟಿ ತಾರಾ ಹೇಳಿದರು.

ದೇವೇಗೌಡರ ಜತೆ ನಿಲಸಂದ್ರದಲ್ಲಿ ನಿಖಿಲ್ ಪರ ಪ್ರಚಾರ ಮಾಡಿದ ತಾರಾ ಅವರು; ಮಾತೃ ಹೃದಯ ಇದ್ದವರಿಗೆ ಕಣ್ಣೀರು ಬರುತ್ತದೆ. ಅಭಿವೃದ್ಧಿ ಬಗ್ಗೆ ಮಾತಾಡಿದರೆ ಬಹಳ‌ ಮಾತಾಡಬಹುದು. ಎಲ್ಲರಿಗೂ ಒಂದು ಅವಕಾಶ ಕೊಟ್ಟಿದ್ದೀರಿ. ನಿಖಿಲ್ ಕುಮಾರಸ್ವಾಮಿಗೆ ಒಂದು ಅವಕಾಶ ಕೊಡಿ. ಈ ಕ್ಷೇತ್ರಕ್ಕೆ ದೇವೆಗೌಡರು, ಕುಮಾರಸ್ವಾಮಿ ಏನ್ ಮಾಡಿದ್ದಾರೆ ಅಂತ ನೆನಪು ಮಾಡಿಕೊಳ್ಳಿ. ನೂರಾರು ಕೆರೆ ತುಂಬಿದವರು ಕುಮಾರಸ್ವಾಮಿ. ಆದರೆ, ಯಾರೋ ಕೆರೆ ತುಂಬಿಸಿದವರು ಅಂತಾರೆ. ಇದು ಸರಿಯಲ್ಲ” ಎಂದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

1 COMMENT

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬ್ರಹ್ಮಾವರ | ಮಹೇಶ್ ಶೆಟ್ಟಿ ತಿಮರೋಡಿಗೆ 14 ದಿನಗಳ ಕಾಲ ನ್ಯಾಯಾಂಗ ಬಂಧನ

ಬಿಜೆಪಿ ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿ ಬಿಎಲ್ ಸಂತೋಷ್ ವಿರುದ್ಧ ಅವಹೇಳನಾಕಾರಿ ಹೇಳಿಕೆ...

ಚಿಕ್ಕಮಗಳೂರು l ಸಭಾಧ್ಯಕ್ಷರೇ ಮಲೆನಾಡಿನ ಸಮಸ್ಯೆ ಬಗ್ಗೆ ಚರ್ಚಿಸಲು ಅವಕಾಶ ಕಲ್ಪಿಸಿ; ಹೆಚ್.ಡಿ ತಮ್ಮಯ್ಯ

ಮಲೆನಾಡಿನಲ್ಲಿ ಕಾಡುತ್ತಿರುವ ಕಾಡು-ಪ್ರಾಣಿ-ಮಾನವ ಸಂಘರ್ಷದಿಂದ ಜನಜೀವನ ಅಸ್ತವ್ಯಸ್ಥವಾಗಿದೆ. ಇಂತಹ ಗಂಭೀರ ಸಮಸ್ಯೆಗಳ...

ಒಳಮೀಸಲಾತಿ | ಅಲೆಮಾರಿ ಸಮುದಾಯಗಳಿಗೆ ಸರ್ಕಾರದಿಂದ ನ್ಯಾಯ ಸಿಗಲಿ: ಬರಗೂರು ರಾಮಚಂದ್ರಪ್ಪ

ರಾಜ್ಯ ಸರ್ಕಾರವು ಜಾರಿಗೊಳಿಸಿರುವ ಒಳಮೀಸಲಾತಿಯಲ್ಲಿ ಅಲೆಮಾರಿ ಸಮುದಾಯಗಳಿಗೆ ನ್ಯಾಯ ಸಿಗಬೇಕು ಎಂದು...

ದಾವಣಗೆರೆ | ಪರಿಶಿಷ್ಟ ಜಾತಿ ಒಳಮೀಸಲಾತಿ; ಅಲೆಮಾರಿಗಳಿಗೆ ಅನ್ಯಾಯ ವಿರೋಧಿಸಿ ಪ್ರತಿಭಟನೆ

""ಒಳ ಮೀಸಲಾತಿ ಹಂಚಿಕೊಳ್ಳುವಾಗ ನಿರ್ಗತಿಕ ಅಲೆಮಾರಿ ಜಾತಿಗಳನ್ನು ಸಂಪೂರ್ಣವಾಗಿ ಕಡೆಗಣಿಸಲಾಗಿದೆ. ಅಲೆಮಾರಿ...

Download Eedina App Android / iOS

X