ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ಕಲ್ಲಡ್ಕದಲ್ಲಿರುವ ಅನುಗ್ರಹ ಮಹಿಳಾ ಕಾಲೇಜಿನಲ್ಲಿ 2024- 25 ನೇ ಸಾಲಿನ ಕ್ರೀಡಾಕೂಟಕ್ಕೆ ಚಾಲನೆ ನೀಡಲಾಯಿತು.
ಕಾರ್ಯಕ್ರಮಕ್ಕೆ ಮುಖ್ಯ ಅತಿಥಿಯಾಗಿ ಆಗಮಿಸಿದ್ದ ಅಂತಾರಾಷ್ಟ್ರೀಯ ಓಟಗಾರ್ತಿ ,ಏಕಲವ್ಯ ಮತ್ತು ದಸರಾ ಪ್ರಶಸ್ತಿ ಪುರಸ್ಕೃತೆ ಹಾಗೂ ಈಗ ಭಾರತೀಯ ಜೀವ ವಿಮಾ ನಿಗಮದಲ್ಲಿ ಅಧಿಕಾರಿಯಾಗಿ ಕಾರ್ಯನಿರ್ವಹಿಸುತ್ತಿರುವ ಶ್ರೀಮತಿ ಸಿಲ್ವಿನ ಪಾಯಸ್ ಕ್ರೀಡಾಕೂಟವನ್ನು ಉದ್ಘಾಟಿಸಿ ವಿದ್ಯಾರ್ಥಿನಿಯರನ್ನು ಉದ್ದೇಶಿಸಿ ಸ್ಪೂರ್ತಿದಾಯಕ ಮಾತುಗಳನ್ನಾಡಿದರು.

ಕಾಲೇಜಿನ ಪ್ರಾಂಶುಪಾಲೆ ಶ್ರೀಮತಿ ಹೇಮಲತ ಬಿ.ಡಿ ಪ್ರಾಸ್ತಾವಿಕ ಮಾತುಗಳನ್ನಾಡುವ ಮೂಲಕ ಅತಿಥಿ ಪರಿಚಯವನ್ನು ಮಾಡಿದರು.
ಜಮಾತೆ ಇಸ್ಲಾಮಿ ಹಿಂದ್ ವಿಟ್ಲ ಮಹಿಳಾ ವಿಭಾಗ ‘ನೈತಿಕತೆಯೇ ಸ್ವಾತಂತ್ರ್ಯ’ ಎಂಬ ಅಭಿಯಾನದ ಪ್ರಯುಕ್ತ ನಡೆಸಿದ ರಸಪ್ರಶ್ನೆ ಸ್ಪರ್ಧೆಯಲ್ಲಿ ವಿಜೇತರಾದ ವಿದ್ಯಾರ್ಥಿನಿಯರಿಗೆ ಇದೇ ವೇಳೆ ಬಹುಮಾನವನ್ನು ನೀಡಿ ಗೌರವಿಸಲಾಯಿತು.
ಕನ್ನಡ ರಾಜ್ಯೋತ್ಸವದ ಅಂಗವಾಗಿ ನಡೆದ ಜಿಲ್ಲಾ ಮಟ್ಟದ ಭಾಷಣ ಸ್ಪರ್ಧೆಯಲ್ಲಿ ವಿಜೇತರಾದ ಕುಮಾರಿ ಸೆಮಿನಾರವರನ್ನು ಗೌರವಿಸಲಾಯಿತು.
ಕಾರ್ಯಕ್ರಮದಲ್ಲಿ ಅಧ್ಯಕ್ಷ ಸ್ಥಾನವನ್ನು ಕಾಲೇಜಿನ ಆಡಳಿತ ಮಂಡಳಿಯ ಉಪಾಧ್ಯಕ್ಷ ಅಬ್ದುಲ್ಲ ಚೆಂಡಾಡಿ ವಹಿಸಿದ್ದರು.
ವೇದಿಕೆಯಲ್ಲಿ ಕಾಲೇಜಿನ ಆಡಳಿತ ಮಂಡಳಿಯ ಖಜಾಂಜಿ ಹೈದರ್ ಅಲಿ ನೀರ್ಕಜೆ, ಜೊತೆ ಕಾರ್ಯದರ್ಶಿ ಅಬ್ದುಲ್ಲಾ ಕುಂಞಿ, ಟ್ರಸ್ಟಿಗಳಾದ ಅಬ್ದುಲ್ ರೆಹಮಾನ್, ಆದಂ ಇಸ್ಮಾಯಿಲ್ ಉಪಸ್ಥಿತರಿದ್ದರು.

ಕಾರ್ಯಕ್ರಮದಲ್ಲಿ ಅನುಗ್ರಹ ಮಹಿಳಾ ಕಾಲೇಜಿನ ಸಲಹಾ ಸಮಿತಿಯ ಕಾರ್ಯದರ್ಶಿ ಮತ್ತು ಸದಸ್ಯರು ಹಾಗೂ ಕಾಲೇಜಿನ ಬೋಧಕ- ಬೋಧಕೇತರ ಸಿಬ್ಬಂದಿಯವರು ಉಪಸಿತರಿದ್ದರು.
ಪ್ರಥಮ ಬಿಕಾಂ ವಿದ್ಯಾರ್ಥಿನಿ ಖತಿಜತ್ ಹಿಷ್ಮ ಕಿರಾತ್ ಪಠಿಸಿ, ಪ್ರಥಮ ಬಿ. ಎ ವಿದ್ಯಾರ್ಥಿನಿ ಫಾತಿಮ ಶಮಿಯ ಸ್ವಾಗತಿಸಿ, ದ್ವಿತೀಯ ವಿಜ್ಞಾನ ವಿಭಾಗದ ತಸ್ನೀಮ್ ವಂದಿಸಿ, ದ್ವಿತೀಯ ವಿಜ್ಞಾನ ವಿಭಾಗದ ವಿದ್ಯಾರ್ಥಿನಿ ನಿಹ್ಲಾ ಹೈದರ್ ಕಾರ್ಯಕ್ರಮ ನಿರೂಪಿಸಿದರು.


