ತುರುವೇಕೆರೆ |  ತೊರೆಮಾವಿನಹಳ್ಳಿ – ಆನೇಕೆರೆ ರಸ್ತೆ ಅಧ್ವಾನ : ಸಂಚಾರಕ್ಕೆ ಸಾರ್ವಜನಿಕರ ಪರದಾಟ

Date:

Advertisements

 ತುರುವೇಕೆರೆ  ತಾಲೂಕಿನ ತೊರೆಮಾವಿನಹಳ್ಳಿ ಗೇಟ್ ನಿಂದ ಆನೇಕೆರೆಯವರೆಗಿನ ರಸ್ತೆ ಸಂಪೂರ್ಣ ಹಾಳಾಗಿದೆ. ರಸ್ತೆಯ ಉದ್ದಕ್ಕೂ ದೊಡ್ಡ ಪ್ರಮಾಣದಲ್ಲಿ ಗುಂಡಿಗಳು ಬಿದ್ದಿವೆ. ಓಡಾಡಲೂ ಆಗದ ಸ್ಥಿತಿ ನಿರ್ಮಾಣವಾಗಿದೆ. ಮಳೆ ಬಂದರೆ ಎಲ್ಲರಿಗೂ ಖುಷಿ. ಆದರೆ ಈ ಭಾಗದಲ್ಲಿ ಓಡಾಡುವ ಮಂದಿ ಜೀವವನ್ನು ಕೈಲಿ ಹಿಡಿದು ಓಡಾಡುವ ಪರಿಸ್ಥಿತಿ ಇದೆ. ದ್ವಿಚಕ್ರ ವಾಹನದ ಸವಾರರಂತೂ ಈ ರಸ್ತೆಯ ಗಡಿ ದಾಟಿದರೆ ಸಾವನ್ನೇ ಗೆದ್ದು ಬಂದವದಂತೆ ಸಂತಸಪಡುತ್ತಾರೆ. 

1000632901

 ರಸ್ತೆ ಹಾಳಾಗಿರುವ ಸಂಬಂಧ ಸಾಕಷ್ಟು ಸಾರಿ ಸಂಬಂಧಿಸಿದ ಅಧಿಕಾರಿಗಳಿಗೆ ಜನಪ್ರತಿನಿಧಿಗಳಿಗೆ ತಿಳಿಸಿದರೂ ಸಹ ಯಾವುದೇ ಪ್ರಯೋಜವಾಗಿಲ್ಲ. ರಾತ್ರಿ ವೇಳೆಯಂತೂ ಸಂಚರಿಸುವುದು ಅಸಾಧ್ಯದ ಮಾತಾಗಿದೆ. ಸಾಕಷ್ಟು ಅನಾಹುತಗಳು ಸಂಭವಿಸುತ್ತಲೇ ಇದೆ. ಆದರೂ ಸಹ ಅಧಿಕಾರಿಗಳು ದಿವ್ಯ ಮೌನ ವಹಿಸಿದ್ದಾರೆಂದು ತೊರೆಮಾವಿನಹಳ್ಳಿಯ ನಿವಾಸಿ ಡಾ.ಚಂದ್ರಯ್ಯ ವಿಷಾದ ವ್ಯಕ್ತಪಡಿಸಿದ್ದಾರೆ. 

ಮಳೆಗಾಲ ಕಳೆದ ನಂತರವಾದರೂ ರಸ್ತೆಯನ್ನು ದುರಸ್ಥಿಪಡಿಸದಿದ್ದಲ್ಲಿ ತೊರೆಮಾವಿನಹಳ್ಳಿ, ತೊರೆಮಾವಿನಹಳ್ಳಿ ಮಾಳೆ, ಆನೇಕೆರೆಯ ಗ್ರಾಮಸ್ಥರೊಂದಿಗೆ ದಾರಿಯ ಮಧ್ಯೆ ಸಸಿಗಳನ್ನು ನೆಟ್ಟು ಪ್ರತಿಭಟನೆ ಹಮ್ಮಿಕೊಳ್ಳುವುದಾಗಿ ಡಾ.ಚಂದ್ರಯ್ಯ ಅಧಿಕಾರಿಗಳಿಗೆ ಎಚ್ಚರಿಕೆ ನೀಡಿದ್ದಾರೆ.

Advertisements

ವರದಿ – ಎಸ್.  ನಾಗಭೂಷಣ್ 

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಶಿವಮೊಗ್ಗ | ಒಳಮೀಸಲಾತಿ ಪುನರ್ ಪರಿಶೀಲಿಸಿ, ನ್ಯಾಯ ಒದಗಿಸಿ ; ಅಖಿಲ ಕರ್ನಾಟಕ ಕೊರಚ ಮಹಾ ಸಂಘ ಆಗ್ರಹ

ಶಿವಮೊಗ್ಗ, ಅಖಿಲ ಕರ್ನಾಟಕ ಕೊರಚ ಮಹಾ ಸಂಘವು ಸರ್ಕಾರದ ಒಳಮೀಸಲಾತಿಯನ್ನು ಪುನರ್...

ಮಂಡ್ಯ | ಕಿರುಗಾವಲು ಜ್ಯುವೆಲರಿ ಶಾಪ್ ಕಳ್ಳತನ; ಆರೋಪಿ ಕಾಲಿಗೆ ಗುಂಡು

ಮಂಡ್ಯ ಜಿಲ್ಲೆ, ಕಿರುಗಾವಲು ಜ್ಯುವೆಲರಿ ಶಾಪ್ ನಲ್ಲಿ ನಡೆದ ಕಳ್ಳತನ ಹಾಗೂ...

ಬಾಗಲಕೋಟೆ | ಬೀದಿ ನಾಯಿಗಳ ಹಾವಳಿ; ಶೀಘ್ರ ಕ್ರಮಕ್ಕೆ ಡಿಸಿ ಸಂಗಪ್ಪ ಸೂಚನೆ

ಬಾಗಲಕೋಟೆ ಜಿಲ್ಲೆಯ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲಿನ ಬೀದಿನಾಯಿಗಳ ಹಾವಳಿಯಿಂದ ಸಾರ್ವಜನಿಕರು ಹಾಗೂ...

ಶಿವಮೊಗ್ಗ | ಡಿ.ಎ.ಆರ್.ಸಭಾಂಗಣದಲ್ಲಿ ಜಿಲ್ಲಾಧಿಕಾರಿ ನೇತೃತ್ವದಲ್ಲಿ ಶಾಂತಿ ಸಮಿತಿ ಸಭೆ

ಎಲ್ಲಾ ಧರ್ಮದವರು ಹಬ್ಬಗಳನ್ನು ಸಡಗರ-ಸಂಭ್ರಮಗಳಿಂದ ಆಚರಿಸುವಂತೆ ಜಿಲ್ಲಾಧಿಕಾರಿ ಗುರುದತ್ ಹೆಗಡೆ ಕರೆ...

Download Eedina App Android / iOS

X