- ಕಾಂಗ್ರೆಸ್ ಅಧಿಕಾರವಿರುವ ರಾಜ್ಯಗಳ ಸಿಎಂಗಳು, ಮಿತ್ರಪಕ್ಷಗಳ ನಾಯಕರು ಭಾಗಿ
- ಕಂಠೀರವ ಕ್ರೀಡಾಂಗಣದಲ್ಲಿ ಭರ್ಜರಿ ಸಿದ್ಧತೆ; ಅಭಿನಂದನೆಗಳ ಮಹಾಪೂರ
ಕರ್ನಾಟಕದ ನೂತನ ಮುಖ್ಯಮಂತ್ರಿಯಾಗಿ ಮೇ 20ರಂದು ಸಿದ್ದರಾಮಯ್ಯ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ. ಸಮರಂಭಕ್ಕೆ ತಮಿಳುನಾಡು ಮುಖ್ಯಮಂತ್ರಿ ಎಂ.ಕೆ ಸ್ಟಾಲಿನ್ ಸೇರಿದಂತೆ ಹಲವು ಗಣ್ಯರನ್ನು ಆಹ್ವಾನಿಸಲಾಗಿದೆ.
ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಮತ್ತು ಸಿದ್ದರಾಮಯ್ಯ ಅವರು ಗುರುವಾರ ದೂರವಾಣಿ ಮೂಲಕ ಸ್ಟಾಲಿನ್ ಅವರಿಗೆ ಕರೆ ಮಾಡಿ ಮೇ 20 ರಂದು ಮಧ್ಯಾಹ್ನ 12.30ಕ್ಕೆ ಪ್ರಮಾಣ ವಚನ ಸಮಾರಂಭದಲ್ಲಿ ಭಾಗವಹಿಸುವಂತೆ ಆಹ್ವಾನಿಸಿದ್ದಾರೆ ಎಂದು ಅಧಿಕೃತ ಪ್ರಕಟಣೆ ತಿಳಿಸಿದೆ.
ಮೇ 20ರಂದು ಮುಖ್ಯಮಂತ್ರಿಯಾಗಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿಯಾಗಿ ಡಿ.ಕೆ ಶಿವಕುಮಾರ್ ಪ್ರಮಾಣವಚನ ಸ್ವೀಕರಿಸಲಿದ್ದಾರೆ.
ಕಾಂಗ್ರೆಸ್ ಆಡಳಿತವಿರುವ ರಾಜ್ಯಗಳ ಮುಖ್ಯಮಂತ್ರಿಗಳು, ಕಾಂಗ್ರೆಸ್ ಮಿತ್ರಪಕ್ಷಗಳ ನಾಯಕರನ್ನು ಪ್ರಮಾಣವಚನ ಸಮಾರಂಭಕ್ಕೆ ಆಹ್ವಾಅನಿಸಲಾಗಿದೆ ಎಂದು ಪಕ್ಷದ ಮೂಲಗಳು ತಿಳಿಸಿವೆ.
ಕಾರ್ಯಕ್ರಮಕ್ಕೆ ಬಿಹಾರ ಸಿಎಂ ನಿತೀಶ್ ಕುಮಾರ್, ಛತ್ತೀಸ್‌ಘಡ ಸಿಎಂ ಭೂಪೇಶ್ ಬಘೇಲ್, ತಮಿಳುನಾಡು ಮುಖ್ಯಮಂತ್ರಿ ಎಂ.ಕೆ ಸ್ಟಾಲಿನ್, ರಾಜಸ್ತಾನ ಮುಖ್ಯಮಂತ್ರಿ ಅಶೋಕ್ ಗೆಹ್ಲೋಟ್, ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಆಗಮಿಸುವ ಸಾಧ್ಯತೆ ಇದೆ ಎನ್ನಲಾಗಿದೆ.
ಈ ಸುದ್ದಿ ಓದಿದ್ದೀರಾ? ರಾಜ್ಯ ರಾಜಕಾರಣದಲ್ಲಿ ಇನ್ನಾರು ತಿಂಗಳೊಳಗೆ ಭಾರೀ ಬದಲಾವಣೆ : ಎಚ್‌ಡಿಕೆ ಅಚ್ಚರಿ ಹೇಳಿಕೆ