ಗದಗ | ಗುಣಮಟ್ಟದ ಬಿಳಿ ಜೋಳ ಉತ್ಪನ್ನ ಖರೀದಿಗೆ ಬೆಂಬಲ ಬೆಲೆ ನಿಗದಿ: ಜಿಲ್ಲಾಧಿಕಾರಿ ಗೋವಿಂದರೆಡ್ಡಿ

Date:

Advertisements

2024-25ನೇ ಸಾಲಿನ ಬೆಂಬಲ ಬೆಲೆ ಯೋಜನೆಯಡಿಯಲ್ಲಿ ರೈತರಿಂದ ಎಫ್.ಎ.ಕ್ಯೂ ಗುಣಮಟ್ಟದ ಬಿಳಿ ಜೋಳ ಉತ್ಪನ್ನವನ್ನು ಖರೀದಿಸಲು ಬೆಂಬಲ ಬೆಲೆ ನಿಗದಿಪಡಿಸಲಾಗಿದೆ. ನೋಂದಣಿ ಪ್ರಕ್ರಿಯೆಯಲ್ಲಿ ರೈತರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಳ್ಳಲು ಕ್ರಮ ವಹಿಸಬೇಕೆಂದು ಜಿಲ್ಲಾಧಿಕಾರಿ ಗೋವಿಂದರೆಡ್ಡಿ ತಿಳಿಸಿದರು.

ಗದಗ ಪಟ್ಟಣದ ಜಿಲ್ಲಾಧಿಕಾರಿಗಳ ಸಭಾಭವನದಲ್ಲಿ 2024-25 ನೇ ಸಾಲಿನ ಮುಂಗಾರು ಋತುವಿನಲ್ಲಿ ಕನಿಷ್ಠ ಬೆಂಬಲ ಬೆಲೆ ಯೋಜನೆಯಡಿಯಲ್ಲಿ ಜೋಳ ಕೃಷಿ ಹುಟ್ಟುವಳಿ ಖರೀದಿಸುವ ಕುರಿತು ಜರುಗಿದ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

“ಸರ್ಕಾರದ ಮಾನದಂಡಗಳನ್ವಯ ಎಫ್.ಎ.ಕ್ಯೂ ಗುಣಮಟ್ಟವನ್ನು ದೃಢೀಕರಿಸಲು ಕ್ರಮ ವಹಿಸಬೇಕು. ಖರೀದಿ ಏಜೆನ್ಸಿಯವರು ತಮ್ಮ ಸಂಸ್ಥೆಯ ಹಿರಿಯ ಅಧಿಕಾರಿಗಳು ಮೇಲುಸ್ತುವಾರಿ ತಪಾಸಣೆ ಕೈಗೊಳ್ಳಬೇಕು. ಪ್ರತಿ ಖರೀದಿ ಕೇಂದ್ರಕ್ಕೆ ಗ್ರೇಡರ್‌ಗಳನ್ನು ನೇಮಿಸಬೇಕು” ಎಂದು ಜಿಲ್ಲಾಧಿಕಾರಿ ಸೂಚಿಸಿದರು.

Advertisements

ಆಹಾರ ಇಲಾಖೆಯ ಜಂಟಿ ನಿರ್ದೇಶಕ ವಿನೋದಕುಮಾರ್ ಹೆಗ್ಗಳಗಿ ಮಾತನಾಡಿ, “ಸರ್ಕಾರದ ಆದೇಶದನ್ವಯ ಮುಂಗಾರು ಋತುವಿನ ಬೆಂಬಲ ಬೆಲೆ ಯೋಜನೆಯಡಿಯಲ್ಲಿ ರೈತರಿಂದ ಎಫ್.ಎ.ಕ್ಯೂ ಗುಣಮಟ್ಟದ ಬಿಳಿ ಜೋಳ ಉತ್ಪನ್ನವನ್ನು ಖರೀದಿಸಲು ಕರ್ನಾಟಕ ರಾಜ್ಯ ಸಹಕಾರ ಮಾರಾಟ ಮಹಾಮಂಡಳ ( ಮಾರ್ಕಫೆಡ್ ) ಸಂಸ್ಥೆಯನ್ನು ರಾಜ್ಯದ ವತಿಯಿಂದ ಖರೀದಿ ಸಂಸ್ಥೆಯನ್ನಾಗಿ ನೇಮಿಸಿ ಆದೇಶಿಸಿದೆ. ಸರ್ಕಾರದ ಆದೇಶದನ್ವಯ ಬಿಳಿಜೋಳ- ಹೈಬ್ರೀಡ್ – ಪ್ರತಿ ಕ್ವಿಂಟಾಲ್ ಗೆ 3371 ರೂ. ಹಾಗೂ ಬಿಳಿ ಜೋಳ -ಮಾಲ್ದಂಡಿ – ಪ್ರತಿ ಕ್ವಿಂಟಾಲ್ ಗೆ 3421 ರೂ. ಬೆಂಬಲ ಬೆಲೆ ನಿಗದಿಪಡಿಸಲಾಗಿದೆ” ಎಂದು ಸಭೆಗೆ ವಿವರಿಸಿದರು.

ಕೇಂದ್ರ ಸರ್ಕಾರದ ಹಾಗೂ ರಾಜ್ಯ ಸರ್ಕಾರದ ಬೆಂಬಲ ಬೆಲೆ ಖರೀದಿ ಮಾರ್ಗಸೂಚಿಗಳನ್ವಯ ಬಿಳಿ ಜೋಳ ಉತ್ಪನ್ನ ಖರೀದಿಗೆ 1-12-2024 ರಿಂದ ನೋಂದಣಿ ಕಾರ್ಯ ಕೈಗೊಳ್ಳುವುದು. ಹಾಗೂ 1-1-2025 ರಿಂದ 31-3-2025 ರ ಅವಧಿಯಲ್ಲಿ ಖರೀದಿ ಪ್ರಕ್ರಿಯೆ ಜರುಗಿಸುವುದು. ಜಿಲ್ಲೆಯ 4 ಕಡೆ ಖರೀದಿ ಕೇಂದ್ರಗಳನ್ನು ತೆರೆಯಲು ತೀರ್ಮಾನಿಸಲಾಯಿತು.

ಇದನ್ನು ಓದಿದ್ದೀರಾ? ಗದಗ | ಮಕ್ಕಳನ್ನು ನದಿಗೆ ತಳ್ಳಿ ನದಿಗೆ ಹಾರಿದ್ದ ತಂದೆ: ನಾಲ್ವರ ಮೃತದೇಹವೂ ಪತ್ತೆ; ಸಾಮೂಹಿಕ ಅಂತ್ಯಕ್ರಿಯೆ

ಜೋಳ ಖರೀದಿಗೆ ಗದಗ ಎಪಿಎಂಸಿ ಮಾರುಕಟ್ಟೆ ಪ್ರಾಂಗಣ, ಲಕ್ಷ್ಮೆಶ್ವರ ಎಪಿಎಂಸಿ ಮಾರುಕಟ್ಟೆ ಪ್ರಾಂಗಣ, ಮುಂಡರಗಿ ಎಪಿಎಂಸಿ ಮಾರುಕಟ್ಟೆ ಪ್ರಾಂಗಣ, ರೋಣ ಎಪಿಎಂಸಿ ಮಾರುಕಟ್ಟೆ ಪ್ರಾಂಗಣ ಕೇಂದ್ರಗಳಾಗಿ ಸೂಚಿಸಲಾಯಿತು.

ಸಭೆಯಲ್ಲಿ ಜಂಟಿ ಕೃಷಿ ನಿರ್ದೇಶಕರು, ಸಹಕಾರಿ ಸಂಘಗಳ ಇಲಾಖೆಯ ಉಪನಿಬಂಧಕರು, ಕೃಷಿ ಉತ್ಪನ್ನ ಮಾರುಕಟ್ಟಿ ಸಮಿತಿ ಕಾರ್ಯದರ್ಶಿಗಳು ವಿವಿಧ ಇಲಾಖೆಯ ಅಧಿಕಾರಿಗಳು ಹಾಜರಿದ್ದರು.

ಈದಿನ 1
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಶಿವಮೊಗ್ಗ | ಒಳಮೀಸಲಾತಿ ಪುನರ್ ಪರಿಶೀಲಿಸಿ, ನ್ಯಾಯ ಒದಗಿಸಿ ; ಅಖಿಲ ಕರ್ನಾಟಕ ಕೊರಚ ಮಹಾ ಸಂಘ ಆಗ್ರಹ

ಶಿವಮೊಗ್ಗ, ಅಖಿಲ ಕರ್ನಾಟಕ ಕೊರಚ ಮಹಾ ಸಂಘವು ಸರ್ಕಾರದ ಒಳಮೀಸಲಾತಿಯನ್ನು ಪುನರ್...

ಮಂಡ್ಯ | ಕಿರುಗಾವಲು ಜ್ಯುವೆಲರಿ ಶಾಪ್ ಕಳ್ಳತನ; ಆರೋಪಿ ಕಾಲಿಗೆ ಗುಂಡು

ಮಂಡ್ಯ ಜಿಲ್ಲೆ, ಕಿರುಗಾವಲು ಜ್ಯುವೆಲರಿ ಶಾಪ್ ನಲ್ಲಿ ನಡೆದ ಕಳ್ಳತನ ಹಾಗೂ...

ಬಾಗಲಕೋಟೆ | ಬೀದಿ ನಾಯಿಗಳ ಹಾವಳಿ; ಶೀಘ್ರ ಕ್ರಮಕ್ಕೆ ಡಿಸಿ ಸಂಗಪ್ಪ ಸೂಚನೆ

ಬಾಗಲಕೋಟೆ ಜಿಲ್ಲೆಯ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲಿನ ಬೀದಿನಾಯಿಗಳ ಹಾವಳಿಯಿಂದ ಸಾರ್ವಜನಿಕರು ಹಾಗೂ...

ಶಿವಮೊಗ್ಗ | ಡಿ.ಎ.ಆರ್.ಸಭಾಂಗಣದಲ್ಲಿ ಜಿಲ್ಲಾಧಿಕಾರಿ ನೇತೃತ್ವದಲ್ಲಿ ಶಾಂತಿ ಸಮಿತಿ ಸಭೆ

ಎಲ್ಲಾ ಧರ್ಮದವರು ಹಬ್ಬಗಳನ್ನು ಸಡಗರ-ಸಂಭ್ರಮಗಳಿಂದ ಆಚರಿಸುವಂತೆ ಜಿಲ್ಲಾಧಿಕಾರಿ ಗುರುದತ್ ಹೆಗಡೆ ಕರೆ...

Download Eedina App Android / iOS

X