ಎತ್ತಿನಹೊಳೆ ಕಾಮಗಾರಿಯ ನೀರು ತುಂಬಿಕೊಂಡಿದ್ದ ಗುಂಡಿಯಲ್ಲಿ ಬಿದ್ದು ಇಬ್ಬರು ಮಕ್ಕಳು ಸಾವನ್ನಪ್ಪಿರುವ ಘಟನೆ ತುಮಕೂರು ಜಿಲ್ಲೆ ತಿಪಟೂರು ತಾಲೂಕಿನ ಹುಚ್ಚನಹಟ್ಟಿ ಗ್ರಾಮದಲ್ಲಿ ನಡೆದಿದೆ.
ಮುನಿಸ್ವಾಮಿ ಎಂಬುವವರ ಮಗ ಯದುವೀರ್ (8) ಹಾಗೂ ನಟರಾಜ್ ಅವರ ಮಗ ಮನೋಹರ್ (10) ಮೃತಪಟ್ಟ ಮಕ್ಕಳು ಎಂದು ಗುರುತಿಸಲಾಗಿದೆ.
ಗುರುವಾರ ಸಂಜೆ ಗೃಹ ಪ್ರವೇಶ ಊಟಕ್ಕೆ ತೆರಳಿದ್ದ ಬಾಲಕರು ನಾಪತ್ತೆಯಾಗಿದ್ದರು. ಇಂದು ಬೆಳಗ್ಗೆ ಎತ್ತಿನಹೊಳೆ ನಾಲಾ ಕಾಮಗಾರಿಯ ನೀರಿನ ಗುಂಡಿಯಲ್ಲಿ ಮಕ್ಕಳ ಶವ ಪತ್ತೆಯಾಗಿದೆ. ಆಟವಾಡಲು ಹೋಗಿ ಕಾಲು ಜಾರಿ ನೀರಿನಲ್ಲಿ ಬಿದ್ದಿರುವ ಅನುಮಾನ ವ್ಯಕ್ತವಾಗಿದೆ.
ತಿಪಟೂರು ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯ ಪ್ರಗತಿಯಲ್ಲಿರುವ ಕಾಮಗಾರಿ ಗುಂಡಿಯ ನೀರಿನಲ್ಲಿ ಇಬ್ಬರು ಬಾಲಕರು ಆಕಸ್ಮಿಕವಾಗಿ ಮುಳುಗಿ ಮೃತ ಪಟ್ಟಿದ್ದು ಸ್ಥಳಕ್ಕೆ ಬೇಟಿ ಮಾಡಿ ಪರಿಶೀಲನೆ ಮಾಡಲಾಯಿತು.#TumakuruDistrictPolice#TipturRuralPS#Drowning @venkatashok pic.twitter.com/OkASK6baRU
— SP Tumakuru (@SPTumkur) November 8, 2024
ಮಕ್ಕಳನ್ನು ಕಳೆದುಕೊಂಡು ಪೋಷಕರ ಆಕ್ರಂದನ ಮುಗಿಲುಮಟ್ಟಿದೆ. ಸ್ಥಳಕ್ಕೆ ತುಮಕೂರು ಎಸ್‌ಪಿ ಅಶೋಕ್ ಕೆವಿ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ತಿಪಟೂರು ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
