ಕಾಲೇಜು ವಿದ್ಯಾರ್ಥಿನಿಯ ಮೇಲೆ ಆಕೆಯ ಪ್ರಿಯಕರ ಮತ್ತು ಅಪ್ರಾಪ್ತ ಬಾಲಕನೂ ಸೇರಿದಂತೆ 6 ಮಂದಿ ಕಾಮಕರ ಹಲವು ದಿನಗಳ ಕಾಲ ನಿರಂತರವಾಗಿ ಸಾಮೂಹಿಕ ಅತ್ಯಾಚಾರ ಎಸಗಿರುವ ಅಮಾನುಷ ಘಟನೆ ಒಡಿಶಾದ ಕಟಕ್ ಜಿಲ್ಲೆಯಲ್ಲಿ ನಡೆದಿದೆ.
19 ವರ್ಷದ ವಿದ್ಯಾರ್ಥಿನಿಯ ಮೇಲೆ ಅತ್ಯಾಚಾರ ಎಸಗಿ, ಆ ಕೃತ್ಯವನ್ನು ಆರೋಪಿಗಳು ವಿಡಿಯೋ ಮಾಡಿಕೊಂಡಿದ್ದಾರೆ. ವಿಡಿಯೋವನ್ನು ಹರಿಬಿಡುವುದಾಗಿ ಬೆದರಿಸಿ ನಿರಂತರವಾಗಿ ಸಾಮೂಹಿಕ ಅತ್ಯಾಚಾರ ಎಸಗಿದ್ದಾರೆ ಎಂದು ವರದಿಯಾಗಿದೆ.
ಸಂತ್ರಸ್ತ ವಿದ್ಯಾರ್ಥಿನಿ ಪೊಲೀಸರಿಗೆ ದೂರು ನೀಡಿದ್ದು, ಆಕೆಯ ದೂರಿನ ಆಧಾರದ ಮೇಲೆ ಬಾದಂಬಾಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ವಿದ್ಯಾರ್ಥಿನಿ ತನ್ನ ಹುಟ್ಟುಹಬ್ಬದ ಆಚರಣೆಗಾಗಿ ಪ್ರಿಯಕರನೊಂದಿಗೆ ಕೆಫೆಯೊಂದಕ್ಕೆ ತೆರಳಿದ್ದರು. ಈ ವೇಳೆ, ಆಕೆಯೊಂದಿಗೆ ಆರೋಪಿ ಪ್ರಿಯಕರ ದೈಹಿಂಕ ಸಂಪರ್ಕ ಬೆಳೆಸಿದ್ದಾನೆ. ಆ ಕೃತ್ಯವನ್ನು ಕೆಫೆ ಮಾಲೀಕನ ಸಹಾಯದಿಂದ ವಿಡಿಯೋ ಮಾಡಿಕೊಂಡಿದ್ದಾನೆ. ಬಳಿಕ, ವಿಡಿಯೋ ತೋರಿಸಿ ಬ್ಲಾಕ್‌ಮೇಲ್ ಕೆಫೆ ಮಾಲೀಕನೂ ಸೇರಿದಂತೆ ಹಲವರು ಆಕೆಯ ಮೇಲೆ ಅತ್ಯಾಚಾರ ಎಸಗಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.
ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು, ವಿದ್ಯಾರ್ಥಿನಿಯ ಪ್ರಿಯಕರ, ಕೆಫೆ ಮಾಲೀಕ, ಓರ್ವ ಅಪ್ರಾಪ್ತ ಸೇರಿದಂತೆ 6 ಮಂದಿಯನ್ನು ಬಂಧಿಸಿದ್ದಾರೆ. ಫೋನ್‌ಗಳಲ್ಲಿದ್ದ ವಿಡಿಯೋಗಳನ್ನು ವಶಕ್ಕೆ ಪಡೆದಿದ್ದಾರೆ ಎಂದು ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.