ವಕ್ಫ್ ವಿಚಾರ | ಯಾವತ್ತೂ ಈ ರೀತಿ ಆಗಿಲ್ಲ: ಜೆಪಿಸಿ ಅಧ್ಯಕ್ಷರ ನಡೆಗೆ ಸದಸ್ಯರಿಂದಲೇ ವಿರೋಧ

Date:

Advertisements

ಕೇಂದ್ರ ಸರ್ಕಾರ ಜಾರಿಗೆ ತರಬೇಕೆನ್ನುವ ವಕ್ಫ್ ತಿದ್ದುಪಡಿ ಬಿಲ್ ಜಾರಿಗೆ ಸಂಬಂಧಿಸಿದಂತೆ ಜಂಟಿ ಸಂಸದೀಯ ಸಮಿತಿ (ಜೆಪಿಸಿ)ಯ ಅಧ್ಯಕ್ಷ ಜಗದಾಂಬಿಕಾ ಪಾಲ್ ವಿಜಯಪುರ ಜಿಲ್ಲೆಗೆ ಭೇಟಿ ನೀಡಿದ್ದಾರೆ. ಆದರೆ, ಈ ಭೇಟಿಗೆ ಸಮಿತಿಯ ಸದಸ್ಯರಿಂದಲೇ ವಿರೋಧ ವ್ಯಕ್ತವಾಗಿದೆ.

ಕೇಂದ್ರ ಸರಕಾರ ತನಿಖಾ ಸಂಸ್ಥೆಯನ್ನು ದುರುಪಯೋಗಪಡಿಸಿಕೊಂಡಂತೆಯೇ ಈಗ ಜೆಪಿಸಿ ಸಮಿತಿಯನ್ನು ದುರುಪಯೋಗಪಡಿಸಿಕೊಳ್ಳುತ್ತಿದೆ ಎಂದು ಸಚಿವ ಹೆಚ್ ಕೆ ಪಾಟೀಲ್ ತಿಳಿಸಿದ್ದರು. ಇದರ ಬೆನ್ನಲ್ಲೇ ಜಂಟಿ ಸಂಸದೀಯ ಸಮಿತಿಯಲ್ಲಿರುವ ಸದಸ್ಯ ಹಾಗೂ ರಾಜ್ಯಸಭಾ ಸಂಸದ ಸೈಯ್ಯದ್ ನಾಸಿರ್‌ ಹುಸೇನ್‌, “ಜೆಪಿಸಿಯ ಅಧ್ಯಕ್ಷ ಜಗದಾಂಬಿಕಾ ಪಾಲ್ ಅವರ ನಡೆ ರಾಜಕೀಯ ಪ್ರೇರಿತವಾದದ್ದು. ಈ ಹಿಂದೆ ಯಾವತ್ತೂ ಜೆಪಿಸಿಯಲ್ಲಿ ಈ ರೀತಿಯ ಬೆಳವಣಿಗೆ ಆಗಿರಲಿಲ್ಲ. ಇದು ದುರದೃಷ್ಟಕರ ಬೆಳವಣಿಗೆ” ಎಂದು ತಿಳಿಸಿದ್ದಾರೆ.

ಈ ದಿನ.ಕಾಮ್ ಜೊತೆಗೆ ಮಾತನಾಡಿರುವ ಸಂಸದ ಸೈಯ್ಯದ್ ನಾಸಿರ್‌ ಹುಸೇನ್‌, “ಜೆಪಿಸಿ ಸಮಿತಿಯು ಹೊರಗಡೆ ಹೋಗಬೇಕೆಂದರೆ ಇಡೀ ಸಮಿತಿ ಒಟ್ಟಿಗೆ ಹೋಗುತ್ತದೆ. ಈ ಬಾರಿಯ ಪ್ರವಾಸದ ವಿವರವನ್ನು ಯಾರಿಗೂ ಹೇಳಿಲ್ಲ. ಇದು ರಾಜಕೀಯ ಪ್ರೇರಿತ ಪ್ರವಾಸ. ಜೆಪಿಸಿಯ ಸ್ಥಾಯಿ ಸಮಿತಿಯಲ್ಲಿ ಕೂಡ ಯಾರನ್ನು ಕರೆಯಬೇಕು, ಯಾವೆಲ್ಲ ಸಾಕ್ಷಿಗಳನ್ನು, ಸಾಕ್ಷ್ಯಗಳನ್ನು ಕಲೆ ಹಾಕಬೇಕು ಅನ್ನೋದು ತೀರ್ಮಾನ ಆಗುತ್ತದೆ. ಆದರೆ, ವಕ್ಫ್ ವಿಚಾರಕ್ಕೆ ಸಂಬಂಧಿಸಿದಂತೆ ಸಮಿತಿಯಲ್ಲಿ ಇಲ್ಲದವರನ್ನೂ ಸೇರಿಸಿಕೊಂಡು ಕರೆದುಕೊಂಡು ಹೋಗಲಾಗಿದೆ” ಎಂದು ಗಂಭೀರ ಆರೋಪ ಮಾಡಿದ್ದಾರೆ.

Advertisements
ಜೆಪಿಸಿ

“ಒಂದು ಮಸೂದೆ ಅಥವಾ ತಿದ್ದುಪಡಿಗೆ ಸಂಬಂಧಿಸಿದಂತೆ ಅದರ ಪರವಾಗಿರಲು ಯಾವತ್ತೂ ಜೆಪಿಸಿಯಲ್ಲಿ ಈ ಥರ ಆಗಿಲ್ಲ. ಮೊದಲನೇ ಬಾರಿಗೆ ಈ ರೀತಿಯ ಬೆಳವಣಿಗೆ ಆಗಿದೆ. ಶೇ. 98% ಜನರು ಇದಕ್ಕೆ ವಿರೋಧ ಮಾಡಿದವರೇ ಬಂದು ಹೇಳಿಕೆ ನೀಡಿ, ಹೋಗಿರುವಾಗಿ ತಿಳಿದುಬಂದಿದೆ. ಬಿಜೆಪಿ ಪರವಾಗಿ ಈ ಹೇಳಿಕೆಗಳು ಇದ್ದಂತಿದೆ” ಎಂದು ನಾಸಿರ್‌ ಹುಸೇನ್ ತಿಳಿಸಿದ್ದಾರೆ.

ಇದನ್ನು ಓದಿದ್ದೀರಾ? ಈ ದಿನ ಸಂಪಾದಕೀಯ | ಮಕ್ಕಳಲ್ಲಿ ಹೆಚ್ಚುತ್ತಿರುವ ಕ್ಯಾನ್ಸರ್;‌ ಭವಿಷ್ಯದ‌ ಯುವ ಭಾರತಕ್ಕೂ ಮಾರಕ

“ಕರ್ನಾಟಕದ ಶಿಗ್ಗಾವಿ, ಸಂಡೂರು, ಚನ್ನಪಟ್ಟಣದ ವಿಧಾನಸಭಾ ಮತಕ್ಷೇತ್ರದಲ್ಲಿ ಉಪಚುನಾವಣೆ ನಡೆಯುತ್ತಿವೆ. ಇದರ ಮಧ್ಯೆಯೇ ಜಂಟಿ ಸಂಸದೀಯ ಸಮಿತಿ (ಜೆಪಿಸಿ)ಯ ಅಧ್ಯಕ್ಷ ಜಗದಾಂಬಿಕಾ ಪಾಲ್ ಕರ್ನಾಟಕಕ್ಕೆ ಭೇಟಿ ನೀಡಿದ್ದಲ್ಲದೇ, ಸುದ್ದಿಗೋಷ್ಠಿ ಕೂಡ ನಡೆಸಿದ್ದಾರೆ. ಸಮಿತಿಯಲ್ಲಿರುವ ಹಲವು ಸದಸ್ಯರಿಗೆ ಮಾಹಿತಿಯೇ ನೀಡಿಲ್ಲ. ಅವರಿಗೆ ಇಷ್ಟ ಬಂದಂತೆ ನಡೆದುಕೊಳ್ಳುತ್ತಿದ್ದಾರೆ. ಈವರೆಗೆ ನಡೆದಿರುವ ಎಲ್ಲ ಬೆಳವಣಿಗೆಯ ಬಗ್ಗೆ ಸ್ಪೀಕರ್‌ ಅವರ ಗಮನಕ್ಕೆ ತಂದಿದ್ದೇವೆ. ಅಲ್ಲದೇ, ಮನವಿ ಕೂಡ ಕೊಟ್ಟಿದ್ದೇವೆ. ಮುಂದಿನ ದಿನಗಳಲ್ಲಿ ಜಂಟಿ ಸಂಸದೀಯ ಸಮಿತಿ (ಜೆಪಿಸಿ)ಯ ಎಲ್ಲ ಪ್ರವಾಸಕ್ಕೆ ನಾವು ಬಹಿಷ್ಕಾರ ಹಾಕುತ್ತಿದ್ದೇವೆ” ಎಂದು ಈ ದಿನ.ಕಾಮ್‌ ಜೊತೆಗೆ ಮಾತನಾಡಿದ ಜಂಟಿ ಸಂಸದೀಯ ಸಮಿತಿಯಲ್ಲಿರುವ ಸದಸ್ಯ ಹಾಗೂ ರಾಜ್ಯಸಭಾ ಸಂಸದ ಸೈಯ್ಯದ್ ನಾಸಿರ್‌ ಹುಸೇನ್‌ ತಿಳಿಸಿದ್ದಾರೆ.

ಈದಿನ 2
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದೀಕ್ಷಾ ಭೂಮಿ ಯಾತ್ರೆಗೆ ಡಾ. ಬಿ.ಆರ್.ಅಂಬೇಡ್ಕರ್ ಅನುಯಾಯಿಗಳ ನಿಯೋಜನೆ – ಅರ್ಜಿ ಆಹ್ವಾನ

ಸಮಾಜ ಕಲ್ಯಾಣ ಇಲಾಖೆಯ ವತಿಯಿಂದ ಪ್ರಸಕ್ತ ಸಾಲಿನಲ್ಲಿ ಪರಿಶಿಷ್ಟ ಜಾತಿ ಮತ್ತು...

ಉಡುಪಿ | ಪರಿಸರ ಸ್ನೇಹಿ ಗೌರಿ, ಗಣೇಶ ಹಬ್ಬ ಆಚರಿಸಿ

ಪ್ರಸಕ್ತ ಸಾಲಿನ ಸ್ವರ್ಣಗೌರಿ ಹಾಗೂ ವರಸಿದ್ದಿ ವಿನಾಯಕ ಚತುರ್ಥಿ ಹಬ್ಬವು ಸಮೀಪಿಸುತ್ತಿದ್ದು....

ಜಾತಿ ನಿಂದನೆ ಆರೋಪ: ಬಿಗ್‌ಬಾಸ್‌ನ ಮಾಜಿ ಸ್ಪರ್ಧಿ ವಕೀಲ ಕೆ ಎನ್ ಜಗದೀಶ್ ಬಂಧನ

ಜಾತಿ ನಿಂದನೆ ಮಾಡಿದ ಆರೋಪದಲ್ಲಿ ಬಿಗ್‌ ಬಾಸ್‌ನಲ್ಲಿ ಸ್ಪರ್ಧಿಸಿದ ಬಳಿಕ ಸೋಷಿಯಲ್...

ಕಲಬುರಗಿ | ಚುನಾವಣಾ ನೀತಿ ಬದಲಾಗಬೇಕೆಂಬುದು ಸಿಪಿಐ(ಎಂ) ನಿಲುವು : ಕೆ.ಪ್ರಕಾಶ

ದೇಶದಲ್ಲಿ ಸರ್ವಾಧಿಕಾರವು ತಾಂಡವವಾಡುತ್ತಿದ್ದು, ಅಘೋಷಿತವಾಗಿ ತುರ್ತುಸ್ಥಿತಿ ಎದುರಿಸುತ್ತಿದ್ದೇವೆ. ಚುನಾವಣೆ ಆಯೋಗದ ಇಂದಿನ...

Download Eedina App Android / iOS

X