ರಸ್ತೆ ಬದಿಯಲ್ಲಿ ಕೆಟ್ಟು ನಿಂತಿದ್ದ ಟ್ರಾಕ್ಟರ್ ಟ್ರಾಲಿಗೆ ಬೈಕ್ ಡಿಕ್ಕಿಯಾಗಿ ಓರ್ವ ಯುವಕ ಸ್ಥಳದಲ್ಲೇ ಮೃತಪಟ್ಟ ಘಟನೆ ವಿಜಯಪುರ ಜಿಲ್ಲೆಯ ತಾಳಿಕೋಟೆ ತಾಲೂಕಿನ ಮೂಕಿಹಾಳ ಗ್ರಾಮದ ಪೆಟ್ರೋಲ್ ಬಂಕ್ ಬಳಿ ಶುಕ್ರವಾರ ರಾತ್ರಿ ನಡೆದಿದೆ.
ಮುದ್ದೆಬೀಹಾಳದ ಅವಟಿ ಓಣಿ ನಿವಾಸಿ ಶಫೀಕ್ ಹಸನಸಾಬ ಯಕೀನ್ (24) ಮೃತ ಯುವಕ.
ಶಫೀಕ್ ಹಸನಸಾಬ ತಾಳಿಕೋಟಿಯಲ್ಲಿ ಸಂಬಂಧಿಕರನ್ನು ಭೇಟಿಯಾಗಿ ವಾಪಸ್ ಊರಿಗೆ ತೆರಳುತ್ತಿದ್ದ ವೇಳೆ ಈ ದುರ್ಘಟನೆ ಸಂಭವಿಸಿದೆ ಎಂದು ತಿಳಿದು ಬಂದಿದೆ.
ಘಟನಾ ಸ್ಥಳಕ್ಕೆ ತಾಳಿಕೋಟೆ ಪೊಲೀಸರು ಭೇಟಿ ನೀಡಿ ಪರಿಶೀಲಿಸಿದರು. ಪ್ರಕರಣ ದಾಖಲಿಸಿಕೊಂಡ ಪೊಲೀಸರು ತನಿಖೆ ಮುಂದುವರೆಸಿದ್ದಾರೆ.