ಹಾಸನ | ಗರ್ಭ ಕೊರಳ, ಸ್ತನ ಕ್ಯಾನ್ಸರ್ ಬಗ್ಗೆ ಜಾಗೃತಿ ಜಾಥಾ

Date:

Advertisements

ಸಾರ್ವಜನಿಕರಲ್ಲಿ ಗರ್ಭ ಕೊರಳ ಹಾಗೂ ಸ್ತನ ಕ್ಯಾನ್ಸರ್ ಬಗ್ಗೆ ಜಾಗೃತಿ ಮೂಡಿಸುವ ಜಾಥಾವನ್ನು ಹಾಸನ ನಗರದ ಹೇಮಾವತಿ ಪ್ರತಿಮೆ ಬಳಿ ಕರ್ನಾಟಕ ರಾಜ್ಯ ಪ್ರಸೂತಿ ಮತ್ತು ಸ್ತ್ರೀರೋಗ ತಜ್ಞರ ಸಮ್ಮೇಳನದ ಅಂಗವಾಗಿ ಜಾಗೃತಿ ಜಾಥಾವನ್ನು ಹಮ್ಮಿಕೊಳ್ಳಲಾಯಿತು.

ರಾಜ್ಯ ಪ್ರಸೂತಿ ಮತ್ತು ಸ್ತ್ರೀ ರೋಗ ತಜ್ಞರ ಮಹಾ ಸಮ್ಮೇಳನದ ಅಂಗವಾಗಿ ಬಹಳ ಕಾಮನ್ ಆಗಿರುವಂತಹ ಗರ್ಭ ಕಂಠದ ಕ್ಯಾನ್ಸರ್ ಹಾಗೂ ಸ್ತನ ಕ್ಯಾನ್ಸರ್‌ನಿಂದ ಹೆಚ್ಚು ಮಹಿಳೆಯರು ಸಾವಿಗೀಡಾಗುತ್ತಿದ್ದಾರೆ. ಪ್ರಾರಂಭದಲ್ಲಿ ಈ ಖಾಯಿಲೆಯನ್ನು ಗುರುತಿಸಿ ಚಿಕಿತ್ಸೆ ನೀಡಿದರೇ ಗುಣಮುಖರಾಗುತ್ತಾರೆ. ಜೊತೆಗೆ ಆಗುವ ಸಾವು ನೋವನ್ನು ತಪ್ಪಿಸಬಹುದು. ಈ ಬಗ್ಗೆ ಇನ್ನು ಅನೇಕರಲ್ಲಿ ತಿಳುವಳಿಕೆ ಇರುವುದಿಲ್ಲ. ಈ ನಿಟ್ಟಿನಲ್ಲಿ ಈ ಬಗ್ಗೆ ಜಾಥದ ಮೂಲಕ ಜಾಗೃತಿ ಮೂಡಿಸಲಾಗುತ್ತಿದೆ ಎಂದು ಜಿಲ್ಲಾ ಆರೋಗ್ಯಾಧಿಕಾರಿ ಶಿವಸ್ವಾಮಿ ತಿಳಿಸಿದರು.

ಈ ಬಗ್ಗೆ ಮಹಿಳೆಯರು ತಿಳಿದುಕೊಂಡು ಸಂಬಂಧಿಕರಿಗೆ ಮತ್ತು ಅಕ್ಕಪಕ್ಕದ ಮನೆಯವರಿಗೆ ತಿಳಿಸುವುದರಿಂದ ಆರೋಗ್ಯ ಸಮಾಜ ನಿರ್ಮಾಣ ಮಾಡಬಹುದು. ಮಹಿಳೆಯರಲ್ಲಿ ಕಾಣಿಸಿಕೊಳ್ಳುವ ನೋವು, ಕೆಟ್ಟ ವಾಸನೆ ಕಂಡು ಬಂದಲ್ಲಿ ತಕ್ಷಣ ಪರೀಕ್ಷೆ ಮಾಡಿಸಿಕೊಂಡರೆ ಚಿಕಿತ್ಸೆ ಪಡೆಯಬಹುದು ಎಂದು ಹೇಳಿದರು.

Advertisements

ರಕ್ತ ಕ್ಯಾನ್ಸರ್‌ನಲ್ಲೂ ಕೂಡ ಹೆಚ್ಚು ಸಾವು ನೋವುಗಳು ಕಾಣುತ್ತಿದ್ದೇವೆ. ಚರ್ಮದಲ್ಲಿ ಸೊಂಕು, ಕಲರ್ ಬದಲಾವಣೆ, ಕೆಟ್ಟ ದ್ರವಗಳು ಹೊರ ಬರುತ್ತಿದ್ದರೇ ವೈದ್ಯರ ಬಳಿ ಸಲಹೆ ಪಡೆಯಬಹುದು ಎಂದು ಆರೋಗ್ಯಾಧಿಕಾರಿ ಸಲಹೆ ನೀಡಿದರು.

ಗರ್ಭ ಕಂಠದ ಕ್ಯಾನ್ಸ‌ರ್ ತಡೆಗಟ್ಟಲು ಪ್ರಾಥಮಿಕವಾಗಿ ಹೆಚ್.ಪಿ.ವಿ. ಸೋಂಕಿನಿಂದ ಉಂಟಾಗುತ್ತದೆ. ಈ ಸೋಂಕು ಸಾಮಾನ್ಯವಾಗಿದ್ದು, ಜೀವಿತಾವಧಿಯಲ್ಲಿ ಪ್ರತಿಯೊಬ್ಬರೂ ಹೆಚ್.ಪಿ.ವಿ. ಸೋಂಕಿಗೆ ಒಳಗಾಗುತ್ತಾರೆ. ಈ ಲಸಿಕೆ ಮೂಲಕ ಹೆಚ್.ಪಿ.ವಿ. ಸೋಂಕನ್ನು ತಡೆಯಲು ಸಾಧ್ಯ ಎಂದರು. ಆಶಾ ಕಾರ್ಯಕರ್ತರು ಉತ್ತಮ ಕೆಲಸ ಮಾಡುತ್ತಿದ್ದು, ಇವರು ಸಮಾಜದ ಕಣ್ಣು ಎಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಉಪ ನಿರ್ದೇಶಕ ಧರಣಿ ಕುಮಾ‌ರ್ ಕಾರ್ಯಕ್ರಮದಲ್ಲಿ ತಿಳಿಸಿದರು.

ಇದನ್ನೂ ಓದಿದ್ದೀರಾ?ಹಾಸನ | ಐದು ವರ್ಷವೂ ಶಕ್ತಿ ಯೋಜನೆ ಅನುಷ್ಠಾನದಲ್ಲಿ ಇರಲಿದೆ: ಗೃಹ ಸಚಿವ ಜಿ ಪರಮೇಶ್ವರ್

ಈ ವೇಳೆ ಜಾಗೃತಿ ಜಾಥಾದಲ್ಲಿ ವೈದ್ಯರು ಹಾಗೂ ಆಶಾ ಕಾರ್ಯಕರ್ತೆಯರು ಮತ್ತು ವಿದ್ಯಾರ್ಥಿಗಳು ಮತ್ತು ಮಹಿಳೆಯರು ಇನ್ನಿತರರು ಉಪಸ್ಥಿತಿಯಲಿದ್ದರು.

ಈದಿನ 1
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಯಾದಗಿರಿ | ಅತಿವೃಷ್ಟಿಯಿಂದ ಬೆಳೆ ಹಾನಿ: ರೈತರಿಗೆ ಪರಿಹಾರ ನೀಡುವಂತೆ ಆಗ್ರಹ

ಯಾದಗಿರಿ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ಬೆಳೆ ಹಾನಿದ ರೈತರಿಗೆ ಸಮೀಕ್ಷೆ ನಡೆಸಿ ಶೀಘ್ರದಲ್ಲಿ...

ಗುಬ್ಬಿ | ಜನಪದ ಸಾಹಿತ್ಯ ಎಂದೆಂದಿಗೂ ಜೀವಂತ : ಡಾ.ಮೂರ್ತಿ ತಿಮ್ಮನಹಳ್ಳಿ

ಕನ್ನಡ ಸಾಹಿತ್ಯ ಲೋಕದಲ್ಲಿ ಹಲವು ಪ್ರಕಾರಗಳ ಪೈಕಿ ಜನಪದ ಸಾಹಿತ್ಯ...

ಉಡುಪಿ | ಮಹೇಶ್‌ ಶೆಟ್ಟಿ ತಿಮರೋಡಿ ಬೆಂಬಲಿಗರ ಕಾರು ಪೊಲೀಸ್‌ ಅಧೀಕ್ಷರಕ ಕಾರಿಗೆ ಡಿಕ್ಕಿ !

ಬೆಳ್ತಂಗಡಿಯ ಸೌಜನ್ಯ ಪರ ಹೋರಾಟಗಾರ ಮಹೇಶ್‌ ಶೆಟ್ಟಿ ತಿಮರೋಡಿಯವರನ್ನು ಬ್ರಹ್ಮಾವರ ಪೊಲೀಸ್...

ಚಿಕ್ಕಮಗಳೂರು l ಸಮಾಜದಲ್ಲಿ ಜಾತಿ,ಧರ್ಮಗಳ ಕಂದಕದ ಗೋಡೆಗಳನ್ನು ತೊಡೆದು ಹಾಕುವುದೇ ನಿಜವಾದ ಸಾಹಿತ್ಯ; ಸಾಹಿತಿ ಮನಸುಳಿ ಮೋಹನ್‌

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ತಾಲ್ಲೂಕು ಸಮಿತಿ...

Download Eedina App Android / iOS

X