ಮುಂಬೈ | ಮೂರು ತಿಂಗಳಲ್ಲಿ 383 ಬಾಲಕಿಯರು, ಮಹಿಳೆಯರು ನಾಪತ್ತೆ : ವರದಿ

Date:

Advertisements
  • ಮುಂಬೈ ಸೇರಿ ಮಹಾರಾಷ್ಟ್ರದಲ್ಲಿ 3,594 ಮಹಿಳೆಯರ ನಾಪತ್ತೆ ಪ್ರಕರಣಗಳು ಪತ್ತೆ
  • ಪೊಲೀಸ್‌ ವರದಿಯ ಬಗ್ಗೆ ಮಹಿಳಾ ಆಯೋಗ ಅಧ್ಯಕ್ಷೆ ರೂಪಾಲಿ ಮಾಹಿತಿ

ಮಹಾರಾಷ್ಟ್ರದಲ್ಲಿ ಕಳೆದ ಮೂರು ತಿಂಗಳಲ್ಲಿ ನಾಪತ್ತೆಯಾಗಿರುವ ಮಹಿಳೆಯರ ಪೈಕಿ ಮುಂಬೈ ನಗರದಲ್ಲಿ ಹೆಚ್ಚು ಸಂಖ್ಯೆ ಪತ್ತೆಯಾಗಿದೆ ಎಂದು ರಾಜ್ಯ ಪೊಲೀಸರು ಸೋಮವಾರ (ಮೇ 15) ಬಿಡುಗಡೆಗೊಳಿಸಿರುವ ಅಂಕಿ ಅಂಶಗಳ ವರದಿ ಹೇಳಿದೆ.

ಈ ಅಂಕಿ ಅಂಶಗಳ ನಂತರ ಮಹಾರಾಷ್ಟ್ರ ರಾಜ್ಯ ಮಹಿಳಾ ಆಯೋಗ (ಎಸ್‌ಡಬ್ಲ್ಯುಸಿ) ಕಳವಳ ವ್ಯಕ್ತಪಡಿಸಿದೆ. ಈ ವರ್ಷದ ಜನವರಿಯಿಂದ ಮಾರ್ಚ್‌ವರೆಗೆ ಮಾತ್ರ ಹುಡುಗಿಯರು ಮತ್ತು ಮಹಿಳೆಯರ ನಾಪತ್ತೆ ಪ್ರಕರಣಗಳನ್ನು ಪತ್ತೆ ಹಚ್ಚಲಾಗಿದೆ. ಮುಂಬೈ ನಗರ ಇವುಗಳಲ್ಲಿ ಅತಿ ಹೆಚ್ಚು ಮಹಿಳೆಯರ ನಾಪತ್ತೆ ಪ್ರಕರಣಗಳನ್ನು ಹೊಂದಿದೆ ಎಂದು ವರದಿ ಹೇಳಿದೆ. ಮಹಿಳೆಯರ ನಾಪತ್ತೆ ಪ್ರಕರಣಗಳು ಹೆಚ್ಚಾಗಿರುವುದು ರಾಜ್ಯಕ್ಕೆ ಎಚ್ಚರಿಕೆ ಗಂಟೆಯಾಗಿದೆ ಎಂದು ಮಹಿಳಾ ಆಯೋಗ ಅಭಿಪ್ರಾಯಪಟ್ಟಿದೆ.

ಮಹಿಳಾ ಆಯೋಗದ ಅಧ್ಯಕ್ಷೆ ರೂಪಾಲಿ ಚಕಂಕರ್‌ ಮಾಧ್ಯಮಗೋಷ್ಠಿಯೊಂದರಲ್ಲಿ ಮಹಾರಾಷ್ಟ್ರ ಪೊಲೀಸರ ಅಂಕಿ ಅಂಶಗಳ ವರದಿ ಕುರಿತು ಮಾಹಿತಿ ನೀಡಿದರು.

Advertisements

ರಾಜ್ಯದಲ್ಲಿ ಒಟ್ಟು 3,594 ಮಹಿಳೆಯರು ಜನವರಿ 1 ರಿಂದ ಮಾರ್ಚ್‌ 31 ರ ಅವಧಿಯಲ್ಲಿ ಕಾಣೆಯಾಗಿದ್ದಾರೆ. ಇವರೆಲ್ಲ 16-35 ವಯೋಮಾನದವರು ಎಂದು ವರದಿ ಹೇಳಿದೆ.

“ರಾಜ್ಯದಲ್ಲಿ ಮಹಿಳೆಯರ ನಾಪತ್ತೆ ಪ್ರಕರಣಗಳು ಹೆಚ್ಚುತ್ತಿವೆ. ಪೊಲೀಸರ ವರದಿ ಮತ್ತಷ್ಟು ಕಳವಳಕಾರಿಯಾಗಿದೆ. ಈ ಹಿನ್ನೆಲೆ ಮಹಿಳಾ ಆಯೋಗ ಸೋಮವಾರ ಸಭೆ ನಡೆಸಿತು. ಮಹಿಳೆಯರ ನಾಪತ್ತೆ ಪ್ರಕರಣಗಳ ಬಗ್ಗೆ ಮಹಾರಾಷ್ಟ್ರ ಪೊಲೀಸರು, ಗೃಹ ಸಚಿವಾಲಯ ತೆಗೆದುಕೊಂಡಿರುವ ಕ್ರಮಗಳ ಬಗ್ಗೆ ಚರ್ಚೆ ನಡೆಸಲಾಯಿತು” ಎಂದು ರೂಪಾಲಿ ಸುದ್ದಿಗಾರರಿಗೆ ತಿಳಿಸಿದರು.

“ಪ್ರತಿ ತಿಂಗಳು ಹೊಸ ಮಹಿಳೆಯರ ನಾಪತ್ತೆ ಪ್ರಕರಣಗಳು ವರದಿಯಾಗುತ್ತಿವೆ. ಪೊಲೀಸರು ಈ ಬಗ್ಗೆ ತನಿಖೆ ನಡೆಸಿ ಅಗತ್ಯ ಕ್ರಮ ಕೈಗೊಳ್ಳಬೇಕು” ಎಂದು ರೂಪಾಲಿ ಹೇಳಿದರು.

ಈ ಸುದ್ದಿ ಓದಿದ್ದೀರಾ? ಜಲ್ಲಿಕಟ್ಟು, ಕಂಬಳಕ್ಕೆ ಅವಕಾಶ ನೀಡುವ ಕಾನೂನನ್ನು ಎತ್ತಿಹಿಡಿದ ಸುಪ್ರೀಂ ಕೋರ್ಟ್

ಮುಂಬೈ ನಗರದಲ್ಲಿ ಅತಿಹೆಚ್ಚು ಅಂದರೆ 383 ನಾಪತ್ತೆ ಪ್ರಕರಣಗಳು ಪತ್ತೆಯಾಗಿವೆ. ಅಹ್ಮದ್‌ನಗರದಲ್ಲಿ 183, ನಾಗ್ಪುರ ಗ್ರಾಮೀಣ ಮತ್ತು ನಾಸಿಕ್ ಗ್ರಾಮೀಣದಲ್ಲಿ ತಲಾ 169, ಪುಣೆ ಗ್ರಾಮೀಣ 156 ಮತ್ತು ಪುಣೆ ನಗರದಲ್ಲಿ 148 ಪ್ರಕರಣಗಳು ಪತ್ತೆಯಾಗಿವೆ ಎಂದು ವರದಿ ಹೇಳಿದೆ.

ನಾಸಿಕ್‌ ನಗರ 109, ಪಿಂಪ್ರಿ ಚಿಂಚ್‌ವಾಡ್‌ 143, ಕೊಲ್ಲಾಪುರ 127, ಜಲಗಾಂವ್‌ 121, ಮೀರಾ-ಭಾಯಂದರ್‌ ಮತ್ತು ವಸೈ ವಿರಾರ್‌ನಲ್ಲಿ ತಲಾ 113 ಪ್ರಕರಣಗಳು ಕಂಡು ಬಂದಿವೆ ಎಂದು ವರದಿ ತಿಳಿಸಿದೆ.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಾಂತ್ರಿಕ ದೋಷ: ಮತ್ತೊಂದು ಏರ್‌ ಇಂಡಿಯಾ ವಿಮಾನ ರದ್ದು, ವಾರದಲ್ಲೇ ಮೂರನೇ ಘಟನೆ

110 ಪ್ರಯಾಣಿಕರನ್ನು ಹೊತ್ತೊಯ್ಯುತ್ತಿದ್ದ ಮುಂಬೈನಿಂದ ಜೋಧ್‌ಪುರಕ್ಕೆ ಹಾರುತ್ತಿದ್ದ ಏರ್‌ ಇಂಡಿಯಾ ವಿಮಾನವನ್ನು...

ಬಿಹಾರ ಮತದಾರರ ಪಟ್ಟಿ ಪರಿಷ್ಕರಣೆ ಬಗ್ಗೆ ಕಳವಳ ವ್ಯಕ್ತಪಡಿಸಿದ ನೊಬೆಲ್ ಪ್ರಶಸ್ತಿ ವಿಜೇತ ಅಮರ್ತ್ಯ ಸೇನ್

ಬಿಹಾರದಲ್ಲಿ ನಡೆದ ಮತದಾರರ ಪಟ್ಟಿ ಪರಿಷ್ಕರಣೆ(SIR) ಬಗ್ಗೆ ನೊಬೆಲ್ ಪ್ರಶಸ್ತಿ ವಿಜೇತ...

ಹಿಂದೂ ಧರ್ಮ ಪ್ರಚಾರಕ ಪ್ರೇಮಾನಂದರಿಗೆ ತನ್ನ ಕಿಡ್ನಿ ದಾನ ಮಾಡಲು ಮುಂದಾದ ಮುಸ್ಲಿಂ ಯುವಕ

ಮಧ್ಯಪ್ರದೇಶದ ನರ್ಮದಾಪುರಂ ಜಿಲ್ಲೆಯ 26 ವರ್ಷದ ಮುಸ್ಲಿಂ ಯುವಕನೊಬ್ಬ ತನ್ನ ಒಂದು...

ಬಿಹಾರ ಎಸ್ಐಆರ್ | ʼಆಧಾರ್ʼ ಅನ್ನು ಪುರಾವೆಯಾಗಿ ಸ್ವೀಕರಿಸಲು ಚುನಾವಣಾ ಆಯೋಗಕ್ಕೆ ಸುಪ್ರೀಂ ನಿರ್ದೇಶನ

ಬಿಹಾರ ಎಸ್ಐಆರ್‌ಗೆ ಪುರಾವೆಯಾಗಿ ಆಧಾರ್ ಅನ್ನು ಸ್ವೀಕರಿಸಬೇಕು ಎಂದು ಸುಪ್ರೀಂ ಕೋರ್ಟ್...

Download Eedina App Android / iOS

X