ಬೆಳಗಾವಿ ಜಿಲ್ಲೆ ಕಾಗವಾಡ ತಾಲೂಕಿನ ಮೋಳೆ ಗ್ರಾಮದ ಕವಲಗುಡ್ಡ ರಸ್ತೆ ಪಕ್ಕದಲ್ಲಿ ನವಜಾತ ಹೆಣ್ಣು ಶಿಶುವನ್ನು ಕಾಲುವೆಗೆ ಎಸೆದು ಹೋದ ಅಮಾನವೀಯ ಘಟನೆ ನಡೆದಿದೆ.
ಮೋಳೆ ಗ್ರಾಮದ ಬೋರಗಾಂವೆ ತೋಟದ ಬಳಿ ಐನಾಪೂರ ಏತ ನೀರಾವರಿ ಕಾಲುವೆಯಲ್ಲಿ, ಹೊಲದಲ್ಲಿದ್ದ ಕೆಲಸಗಾರಿಗೆ ನವಜಾತ ಹೆಣ್ಣು ಶಿಶುವಿನ ಮೃತದೇಹ ಕಂಡು ಬಂದಿದ್ದು ಈ ಕುರಿತು
ಕಾಗವಾಡ ಪೋಲಿಸರಿಗೆ ಮಾಹಿತಿ ನೀಡಿದ್ದಾರೆ.
ಘಟನಾ ಸ್ಥಳಕ್ಕೆ ಶಿಶು ಅಭಿವೃದ್ಧಿ ಅಧಿಕಾರಿ ಸಂಜೀವಕುಮಾರ ಸದಲಗಾ ಹಾಗೂ ಕಾಗವಾಡ ಪೋಲಿಸ್ ಠಾಣೆಯ ಪಿಎಸ್‌ಐ ಜಿ.ಜಿ. ಬಿರಾದರ, ಅಥಣಿ ಡಿವೈಎಸ್‌ಪಿ ಪ್ರಶಾಂತ ಮುನ್ನೋಳಿ, ಸಿಪಿಐ ಸಂತೋಶ ಹಳ್ಳೂರ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.