ಜಿ 7 ಶೃಂಗಸಭೆ ಉಪಸ್ಥಿತಿ ಅರ್ಥಪೂರ್ಣವಾಗಿದೆ: ಪ್ರಧಾನಿ ಮೋದಿ

Date:

Advertisements
  • ಜಿ 7 ಶೃಂಗಸಭೆ ಜಪಾನ್‌ನ ಹಿರೋಷಿಮಾದಲ್ಲಿ ಆಯೋಜನೆ
  • ಮೂರು ರಾಷ್ಟ್ರಗಳ ಸಭೆಗಳಲ್ಲಿ ಭಾಗವಹಿಸಲಿರುವ ಪ್ರಧಾನಿ ಮೋದಿ

ಜಪಾನ್‌ನಲ್ಲಿ ನಡೆಯುತ್ತಿರುವ ಜಿ 7 ಶೃಂಗಸಭೆ ಸಮಾರಂಭದಲ್ಲಿ ಭಾರತದ ಪ್ರತಿನಿಧಿಯಾಗಿ ತಮ್ಮ ಉಪಸ್ಥಿತಿ ಅರ್ಥಪೂರ್ಣವಾಗಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಶುಕ್ರವಾರ (ಮೇ 19) ಹೇಳಿದ್ದಾರೆ.

ಪ್ರಧಾನಿ ಮೋದಿ ತಮ್ಮ ಆರು ದಿನಗಳ ಮೂರು ರಾಷ್ಟ್ರಗಳ ಪ್ರವಾಸಕ್ಕೂ ಮುನ್ನ ಟ್ವೀಟ್‌ ಮೂಲಕ ಸಂತಸ ವ್ಯಕ್ತಪಡಿಸಿದ್ದಾರೆ.

ಭಾರತವು ಪ್ರಸ್ತುತ ಜಿ 20 ರಾಷ್ಟ್ರಗಳ ಶೃಂಗಸಭೆಯ ಅಧ್ಯಕ್ಷ ಸ್ಥಾನ ವಹಿಸಿದೆ. ಈ ಹೊತ್ತಿನಲ್ಲಿ ಜಿ 7ರ ಶೃಂಗಸಭೆಯಲ್ಲಿ ಭಾರತ ಭಾಗವಹಿಸುತ್ತಿರುವುದು ವಿಶೇಷವಾಗಿದೆ ಎಂದು ಪ್ರಧಾನಿ ಮೋದಿ ಟ್ವೀಟ್‌ನಲ್ಲಿ ಹೇಳಿದ್ದಾರೆ.

Advertisements

ಜಿ 7 ಶೃಂಗಸಭೆ ದೇಶಗಳು ಮತ್ತು ಇತರ ಆಹ್ವಾನಿತ ಪಾಲುದಾರರೊಂದಿಗೆ ಜಗತ್ತು ಎದುರಿಸುತ್ತಿರುವ ಸವಾಲುಗಳು ಮತ್ತು ಅವುಗಳನ್ನು ಒಟ್ಟಾಗಿ ಪರಿಹರಿಸುವ ಅಗತ್ಯತೆಯ ಕುರಿತು ಅಭಿಪ್ರಾಯಗಳನ್ನು ವಿನಿಮಯ ಮಾಡಿಕೊಳ್ಳಲು ಎದುರು ನೋಡುತ್ತಿದ್ದೇನೆ ಎಂದು ಪ್ರಧಾನಿ ಮೋದಿ ತಿಳಿಸಿದ್ದಾರೆ.

ಪ್ರಧಾನಿ ಮೋದಿ ಅವರು ಆರು ದಿನಗಳ ಕಾಲ ಪ್ರವಾಸ ಮಾಡಿ ಜಪಾನ್, ಪಪುವಾ ನ್ಯೂ ಗಿನಿಯಾ ಹಾಗೂ ಆಸ್ಟ್ರೇಲಿಯಾಕ್ಕೆ ಭೇಟಿ ನೀಡಲಿದ್ದಾರೆ.

ಜಪಾನ್‌ಗೆ ತೆರಳಿ ಅಲ್ಲಿ ವೈವಿಧ್ಯಮಯ ಜಾಗತಿಕ ವಿಷಯಗಳ ಬಗ್ಗೆ ಆರೋಗ್ಯಕರ ಅಭಿಪ್ರಾಯ ವಿನಿಮಯಕ್ಕಾಗಿ ಎದುರು ನೋಡುತ್ತಿದ್ದೇನೆ ಎಂದು ಪ್ರಧಾನಿ ಮೋದಿ ಹೇಳಿದ್ದಾರೆ.

ಜಿ 7 ಶೃಂಗಸಭೆ ಜಪಾನ್‌ನ ಹಿರೋಷಿಮಾದಲ್ಲಿ ನಡೆಯುತ್ತಿದೆ.

“ಜಿ 7 ಶೃಂಗಸಭೆಯಲ್ಲಿ ಭಾಗವಹಿಸುವ ಕೆಲವು ನಾಯಕರೊಂದಿಗೆ ನಾನು ದ್ವಿಪಕ್ಷೀಯ ಸಭೆಗಳನ್ನು ನಡೆಸುತ್ತೇನೆ. ಜಪಾನ್ ಪ್ರಧಾನಿ ಫ್ಯೂಮಿಯೊ ಕಿಶಿಡಾ ಅವರನ್ನು ಭೇಟಿಯಾಗಲು ಸಂತೋಷವಾಗುತ್ತದೆ” ಎಂದು ಟ್ವೀಟ್‌ನಲ್ಲಿ ತಿಳಿಸಿದ್ದಾರೆ.

ಜಪಾನ್‌ನಿಂದ ಪ್ರಧಾನಿ ಮೋದಿ ಅವರು ಪಪುವಾ ನ್ಯೂ ಗಿನಿಯಾದ ಪೋರ್ಟ್ ಮೊರೆಸ್ಬಿಗೆ ಪ್ರಯಾಣಿಸಲಿದ್ದಾರೆ. ಇದು ಪೆಸಿಫಿಕ್ ದ್ವೀಪ ರಾಷ್ಟ್ರಕ್ಕೆ ಭಾರತೀಯ ಪ್ರಧಾನಿಯೊಬ್ಬರು ನೀಡುತ್ತಿರುವ ಮೊದಲ ಭೇಟಿಯಾಗಿದೆ.

ಪ್ರಧಾನಿ ಮೋದಿ ಅವರು ಮೇ 22 ರಂದು ಭಾರತ-ಪೆಸಿಫಿಕ್ ದ್ವೀಪ ಸಹಕಾರಕ್ಕಾಗಿ ವೇದಿಕೆಯ ಮೂರನೇ ಶೃಂಗಸಭೆ (ಎಫ್ಐಪಿಐಸಿ ಐಐಐ ಶೃಂಗಸಭೆ) ಅನ್ನು ತಮ್ಮ ಪಪುವಾ ನ್ಯೂ ಗಿನಿಯಾ ಪ್ರಧಾನಿ ಜೇಮ್ಸ್‌ ಟಿ ಮರಾಪೆ ಅವರೊಂದಿಗೆ ಜಂಟಿಯಾಗಿ ಆಯೋಜಿಸಲಿದ್ದಾರೆ.

“ಈ ಮಹತ್ವದ ಶೃಂಗಸಭೆಯಲ್ಲಿ ಪಾಲ್ಗೊಳ್ಳಲು ಎಲ್ಲ 14 ಪೆಸಿಫಿಕ್ ದ್ವೀಪ ರಾಷ್ಟ್ರಗಳ ಆಹ್ವಾನವನ್ನು ಸ್ವೀಕರಿಸಿದ್ದಕ್ಕಾಗಿ ನಾನು ಕೃತಜ್ಞನಾಗಿದ್ದೇನೆ. ಹವಾಮಾನ ಬದಲಾವಣೆ ಮತ್ತು ಸುಸ್ಥಿರ ಅಭಿವೃದ್ಧಿ, ಸಾಮರ್ಥ್ಯ ನಿರ್ಮಾಣ ಮತ್ತು ತರಬೇತಿ, ಆರೋಗ್ಯ ಮತ್ತು ಯೋಗಕ್ಷೇಮ, ಮೂಲಸೌಕರ್ಯ ಮತ್ತು ಆರ್ಥಿಕ ಅಭಿವೃದ್ದಿ ವಿಚಾರದಲ್ಲಿ ಒಟ್ಟಾಗಿ ಮುಂದೆ ಸಾಗುವ ನಿರ್ಣಯ ಮಾಡಲಾಗುವುದು” ಎಂದು ಮೋದಿ ಹೇಳಿದ್ದಾರೆ.

ಪ್ರಧಾನಿ ಮೋದಿ ಅವರು ಆಸ್ಟ್ರೇಲಿಯಾದ ಸಿಡ್ನಿಗೆ ಪ್ರಯಾಣಿಸುವ ಮೊದಲು ಹಲವಾರು ದ್ವಿಪಕ್ಷೀಯ ಸಭೆಗಳನ್ನು ನಡೆಸಲಿದ್ದಾರೆ. ಮೋದಿ ಅವರು ಆಸ್ಟ್ರೇಲಿಯಾದ ಪ್ರಧಾನಿ ಆಂಥೋನಿ ಅಲ್ಬನೀಸ್ ಅವರೊಂದಿಗೆ ದ್ವಿಪಕ್ಷೀಯ ಸಭೆಯನ್ನು ನಡೆಸಲಿದ್ದಾರೆ.

ಇದು ನಮ್ಮ ದ್ವಿಪಕ್ಷೀಯ ಬಾಂಧವ್ಯಗಳನ್ನು ಪರಿಶೀಲಿಸಲು ಮತ್ತು ಮಾರ್ಚ್ ನಲ್ಲಿ ನವದೆಹಲಿಯಲ್ಲಿ ನಡೆದ ನಮ್ಮ ಮೊದಲ ಭಾರತ-ಆಸ್ಟ್ರೇಲಿಯಾ ವಾರ್ಷಿಕ ಶೃಂಗಸಭೆಯನ್ನು ಅನುಸರಿಸಲು ಒಂದು ಅವಕಾಶವಾಗಿದೆ ಎಂದು ಪ್ರಧಾನಿ ಮೋದಿ ಹೇಳಿದರು.

ಈ ಸುದ್ದಿ ಓದಿದ್ದೀರಾ? ಜ್ಞಾನವಾಪಿ ಮಸೀದಿ | ಹೈಕೋರ್ಟ್‌ ಆದೇಶ ಪ್ರಶ್ನಿಸಿದ್ದ ಅರ್ಜಿ ವಿಚಾರಣೆಗೆ ‘ಸುಪ್ರೀಂ’ ಸಮ್ಮತಿ

“ನಾನು ಆಸ್ಟ್ರೇಲಿಯನ್ ಸಿಇಒಗಳು ಮತ್ತು ವ್ಯಾಪಾರ ಮುಖಂಡರೊಂದಿಗೆ ಸಂವಾದ ನಡೆಸುತ್ತೇನೆ. ವಿಶೇಷ ಕಾರ್ಯಕ್ರಮದಲ್ಲಿ ಸಿಡ್ನಿಯಲ್ಲಿರುವ ಭಾರತೀಯ ಸಮುದಾಯವನ್ನು ಭೇಟಿ ಮಾಡುತ್ತೇನೆ. ಈ ಭೇಟಿ ಭಾರತ-ಆಸ್ಟ್ರೇಲಿಯಾ ಸ್ನೇಹವನ್ನು ಮತ್ತಷ್ಟು ಗಟ್ಟಿಗೊಳಿಸಲಿದೆ” ಎಂದು ಟ್ವೀಟ್‌ನಲ್ಲಿ ತಿಳಿಸಿದ್ದಾರೆ.

ಜಿ 7 ಶೃಂಗಸಭೆ, ಜಿ 20 ಶೃಂಗಸಭೆಯಷ್ಟೇ ಮಹತ್ವ ಪಡೆದಿದೆ ಎಂದು ಹೇಳಲಾಗಿದೆ.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬೀದಿ ನಾಯಿಗಳಿಗೆ ಲಸಿಕೆ ಹಾಕಿದ ನಂತರ ಅದೇ ಸ್ಥಳಕ್ಕೆ ತಂದು ಬಿಡಬೇಕು: ಸುಪ್ರೀಂ ಕೋರ್ಟ್‌

ಬೀದಿ ನಾಯಿಗಳಿಗೆ ಸಂಬಂಧಿಸಿದ್ದಂತೆ ಆಗಸ್ಟ್ 11ರ ಆದೇಶವನ್ನು ಮಾರ್ಪಡಿಸಿದ ಸುಪ್ರೀಂ...

ಭಾರತೀಯರು ಸೇರಿ 5.5 ಕೋಟಿ ವಿದೇಶಿಗರ ವೀಸಾಗಳ ಮರು ಪರಿಶೀಲನೆಗೆ ಟ್ರಂಪ್ ಆಡಳಿತ ನಿರ್ಧಾರ

ಅಮೆರಿಕಾದಲ್ಲಿ ವೀಸಾ ಹೊಂದಿರುವ 5.5 ಕೋಟಿ ವಿದೇಶಿಗರನ್ನು ಅವರ ದಾಖಲೆಗಳಲ್ಲಿ ಯಾವುದೇ...

ವಿವಾದಾತ್ಮಕ ಯೂಟ್ಯೂಬರ್ ಎಲ್ವಿಶ್ ಮನೆ ಮೇಲೆ ಗುಂಡಿನ ದಾಳಿ: ಎನ್‌ಕೌಂಟರ್ ಮಾಡಿ ಆರೋಪಿ ಬಂಧನ

ಬಲಪಂಥೀಯ, ವಿವಾದಾತ್ಮಕ ಯೂಟ್ಯೂಬರ್ ಮತ್ತು ಬಿಗ್ ಬಾಸ್ ವಿಜೇತ ಎಲ್ವಿಶ್ ಯಾದವ್‌...

ಗೇಮಿಂಗ್​ ಆ್ಯಪ್​ಗಳಿಗೆ ಅಕ್ರಮ ಹಣ ವರ್ಗಾವಣೆ ಆರೋಪ: ಚಿತ್ರದುರ್ಗ ಶಾಸಕ ವೀರೇಂದ್ರ ಮನೆ ಮೇಲೆ ಇಡಿ ದಾಳಿ

ಶುಕ್ರವಾರ(ಆಗಸ್ಟ್ 22) ಬೆಳ್ಳಂಬೆಳಗ್ಗೆ ಚಿತ್ರದುರ್ಗದ ಶಾಸಕ ಕೆಸಿ ವೀರೇಂದ್ರ ಪಪ್ಪಿ ಅವರ...

Download Eedina App Android / iOS

X