ರಾಜ್ಯದ ಎಲ್ಲೆಡೆ ಒಣ ಹವೆಯ ವಾತಾವರಣ ಕಂಡುಬರುತ್ತಿದೆ. ದಕ್ಷಿಣ ಒಳನಾಡು ಹಾಗೂ ಉತ್ತರ ಒಳನಾಡು ಜೆಲ್ಲೆಗಳಲ್ಲಿ ಸಾಧಾರಣ ಮಳೆ ಆಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ನವಂಬರ್ 10 ಮತ್ತು 11ರಂದು ಎಲ್ಲೆಡೆ ಒಣ ಹವೆಯ ವಾತಾವರಣ ಇದ್ದು, ಬಳಿಕ ನವಂಬರ್ 12ರಿಂದ ನಾಲ್ಕು ದಿನಗಳ ಕಾಲ ಗದಗ ಹಾವೇರಿ ಜಿಲ್ಲೆಗಳಲ್ಲಿ ಸಾಧಾರಣ ಮಳೆ ಆಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
15ರಂದು ಕರಾವಳಿ ಎಲ್ಲಾ ಜಿಲ್ಲೆಗಳ ಬಹುತೇಕ ಕಡೆಗಳಲ್ಲಿ, ದಕ್ಷಿಣ ಒಳನಾಡಿನ ಜಿಲ್ಲೆಗಳ ಹಲವು ಕಡೆಗಳಲ್ಲಿ ಹಾಗೂ ಉತ್ತರ ಒಳನಾಡಿನ ಗದಗ, ಧಾರವಾಡ, ಹಾವೇರಿ ಜಿಲ್ಲೆಗಳ ಒಂಡೆರಡು ಕಡೆಗಳಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ. ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ಇದನ್ನು ಓದಿದ್ದೀರಾ? ಧಾರವಾಡ | ರಾಜ್ಯದಲ್ಲಿ ಸರ್ಕಾರ ಇದೆಯೋ ಇಲ್ಲವೋ ಅನ್ನುವ ಸಂಶಯವಿದೆ: ಗೋವಿಂದ ಕಾರಜೋಳ
ಮುಂದಿನ 24 ಗಂಟೆಗಳ ಕಾಲ ಭಾಗಶಃ ಮೋಡ ಕವಿದ ಆಕಾಶವಿರಲಿದ್ದು, ಒಣ ಹವೆ ಇರುವ ಬಹಳಷ್ಟು ಸಾಧ್ಯತೆ ಇದೆ. ಕೆಲವು ಸ್ಥಳಗಳಲ್ಲಿ ಮುಂಜಾನೆಯ ಸಮಯದಲ್ಲಿ ಮಂಜು ಇರುವ ಬಹಳಷ್ಟು ಸಾಧ್ಯತೆ ಇರುತ್ತದೆ.