ಬೆಳಗಾವಿ ಜಿಲ್ಲೆಯ ಚಿಕ್ಕೋಡಿ ತಾಲೂಕಿನ ಇಂಗಳಿಯಲ್ಲಿ ಮರಕ್ಕೆ ದ್ವಿಚಕ್ರ ವಾಹನ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ಸಾವನ್ನಪ್ಪಿದ ಘಟನೆ ನಡೆದಿದೆ.
ಇಂಗಳಿಯಿಂದ ಶಿರಗುಪ್ಪಿ ಕಡೆಗೆ ದ್ವಿಚಕ್ರ ವಾಹನದಲ್ಲಿ ಹೋಗುತ್ತಿರುವಾಗ ನಿಯಂತ್ರಣ ತಪ್ಪಿ ಮರಕ್ಕೆ ಡಿಕ್ಕಿ ಹೊಡೆದ ಪರಿಣಾಮ ಅಪಘಾತದಲ್ಲಿ ತೀವ್ರ ಗಾಯಗೊಂಡ ಪ್ರಭಾಕರ (45), ಮೋಹನ ಇವರನ್ನು ಆಸ್ಪತ್ರೆಗೆ ಸಾಗಿಸುವ ಮಾರ್ಗ ಮದ್ಯದಲ್ಲಿ (42) ಮೃತಪಟ್ಟಿದ್ದಾರೆ.
ಇದನ್ನು ಓದಿದ್ದೀರಾ? ಬೆಳಗಾವಿ | ಸಂಸದೆ ಪ್ರಿಯಾಂಕಾ ಜಾರಕಿಹೊಳಿಗೆ ಸನ್ಮಾನ ವಿಚಾರ: ಗ್ರಾ. ಪಂಚಾಯತಿಗೆ ಬೆಂಕಿ ಹಚ್ಚಿದ ದುಷ್ಕರ್ಮಿಗಳು
ದ್ವಿಚಕ್ರ ವಾಹನ ಸವಾರ ನಾಗೇಂದ್ರ ಶಿರಹಟ್ಟಿ ಗಾಯಗೊಂಡಿದ್ದು, ಹೆಚ್ಚಿನ ಚಿಕಿತ್ಸೆಗಾಗಿ ಬೆಳಗಾವಿಗೆ ಕಳುಹಿಸಲಾಗಿದೆ. ಅಂಕಲಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.
