ಶಿವಮೊಗ್ಗ | ಊಟ ಬಡಿಸಲು ನಿರಾಕರಿಸಿದ ಪತ್ನಿ ಕೊಂದ ಪತಿ

Date:

Advertisements

ಊಟ ಬಡಿಸಲು‌ ನಿರಾಕರಿಸಿದ ಪತ್ನಿಯ ಕತ್ತನ್ನು ಟವಲ್​​ನಲ್ಲಿ ಬಿಗಿದು ಪತಿಯೇ ಕೊಂದಿರುವ ಘಟನೆ ಶಿಕಾರಿಪುರದ ಅಂಬ್ಲಿಗೊಳ ಗ್ರಾಮದಲ್ಲಿ‌ ನಡೆದಿದೆ.

ಅಂಬ್ಲಿಗೊಳ ಗ್ರಾಮದ ಗೌರಮ್ಮ (28) ಕೊಲೆಯಾದ ಮಹಿಳೆ. ಪತಿ ಮನು (35) ಕೊಲೆಗೈದ ಆರೋಪಿಯಾಗಿದ್ದು, ಪೊಲೀಸರು ಆತನನ್ನು ವಶಕ್ಕೆ ಪಡೆದಿದ್ದಾರೆ.

ಗೌರಮ್ಮ ಶಿಕಾರಿಪುರದ ಗಾರ್ಮೆಂಟ್ಸ್​​ನಲ್ಲಿ ಕೆಲಸ ಮಾಡುತ್ತಿದ್ದರು. ಶನಿವಾರ ಮಧ್ಯಾಹ್ನ ಗಂಡ ಮನು ಮನೆಗೆ ಬಂದಾಗ ಪತ್ನಿ ಗೌರಮ್ಮನಿಗೆ ಊಟ ಬಡಿಸುವಂತೆ ಕೇಳಿದ್ದ. ಈ ವೇಳೆ ಮೊಬೈಲ್‌ನಲ್ಲಿ ಮಾತನಾಡುತ್ತಿದ್ದ ಪತ್ನಿ ನೀನೇ ಊಟ ಬಡಿಸಿಕೊಳ್ಳುವಂತೆ ಪತಿಗೆ ಹೇಳಿದ್ದಳು. ಇದರಿಂದ ಇಬ್ಬರ ನಡುವೆ ಜಗಳ ಶುರುವಾಗಿ, ಜಗಳ ವಿಕೋಪಕ್ಕೆ ತಿರುಗಿದೆ. ಅದೇ ಕೋಪದಲ್ಲಿ ಪತಿ ಮನು ಟವಲ್​​ನಿಂದ ಪತ್ನಿಯ ಕುತ್ತಿಗೆಗೆ ಟವಲ್‌ನಿಂದ ಬಿಗಿದು ಉಸಿರುಗಟ್ಟಿಸಿ ಕೊಂದಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ.

Advertisements

ದಂಪತಿಗಳಿಗೆ ಇಬ್ಬರು ಮಕ್ಕಳಿದ್ದು, ಅವರು ಹೊರಗೆ ಆಟವಾಡುತ್ತಿದ್ದರು. ಶಿಕಾರಿಪುರ ಗ್ರಾಮಾಂತರ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಆರೋಪಿಯನ್ನು ವಶಕ್ಕೆ ಪಡೆದುಕೊಂಡು, ಪ್ರಕರಣ ದಾಖಲಿಸಿಕೊಂಡಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಶಿವಮೊಗ್ಗ | ಒಳಮೀಸಲಾತಿ ಪುನರ್ ಪರಿಶೀಲಿಸಿ, ನ್ಯಾಯ ಒದಗಿಸಿ ; ಅಖಿಲ ಕರ್ನಾಟಕ ಕೊರಚ ಮಹಾ ಸಂಘ ಆಗ್ರಹ

ಶಿವಮೊಗ್ಗ, ಅಖಿಲ ಕರ್ನಾಟಕ ಕೊರಚ ಮಹಾ ಸಂಘವು ಸರ್ಕಾರದ ಒಳಮೀಸಲಾತಿಯನ್ನು ಪುನರ್...

ಮಂಡ್ಯ | ಕಿರುಗಾವಲು ಜ್ಯುವೆಲರಿ ಶಾಪ್ ಕಳ್ಳತನ; ಆರೋಪಿ ಕಾಲಿಗೆ ಗುಂಡು

ಮಂಡ್ಯ ಜಿಲ್ಲೆ, ಕಿರುಗಾವಲು ಜ್ಯುವೆಲರಿ ಶಾಪ್ ನಲ್ಲಿ ನಡೆದ ಕಳ್ಳತನ ಹಾಗೂ...

ಬಾಗಲಕೋಟೆ | ಬೀದಿ ನಾಯಿಗಳ ಹಾವಳಿ; ಶೀಘ್ರ ಕ್ರಮಕ್ಕೆ ಡಿಸಿ ಸಂಗಪ್ಪ ಸೂಚನೆ

ಬಾಗಲಕೋಟೆ ಜಿಲ್ಲೆಯ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲಿನ ಬೀದಿನಾಯಿಗಳ ಹಾವಳಿಯಿಂದ ಸಾರ್ವಜನಿಕರು ಹಾಗೂ...

ಶಿವಮೊಗ್ಗ | ಡಿ.ಎ.ಆರ್.ಸಭಾಂಗಣದಲ್ಲಿ ಜಿಲ್ಲಾಧಿಕಾರಿ ನೇತೃತ್ವದಲ್ಲಿ ಶಾಂತಿ ಸಮಿತಿ ಸಭೆ

ಎಲ್ಲಾ ಧರ್ಮದವರು ಹಬ್ಬಗಳನ್ನು ಸಡಗರ-ಸಂಭ್ರಮಗಳಿಂದ ಆಚರಿಸುವಂತೆ ಜಿಲ್ಲಾಧಿಕಾರಿ ಗುರುದತ್ ಹೆಗಡೆ ಕರೆ...

Download Eedina App Android / iOS

X