ನೀರಿನ ತೊಟ್ಟಿಯಲ್ಲಿ ಮುಳುಗಿ ಬಾಲಕನೋರ್ವ ಮೃತಪಟ್ಟ ಘಟನೆ ಹಾವೇರಿ ಜಿಲ್ಲೆ ರಟ್ಟೀಹಳ್ಳಿ ತಾಲೂಕಿನ ಕಡೂರು ಗ್ರಾಮದಲ್ಲಿ ನಡೆದಿದೆ.
ಪ್ರಜ್ವಲ್(9) ಮೃತ ಬಾಲಕ. ಶನಿವಾರ ಶಾಲೆ ಬಿಟ್ಟ ನಂತರ ಬಾಲಕ ಆಡಲು ಹೋಗಿದ್ದ. ಆಟ ಆಡಲು ಹೋಗಿದ್ದ ಬಾಲಕ ಶಾಲೆಯ ಬಳಿ ಇರುವ ಬಹುಗ್ರಾಮ ಕುಡಿಯುವ ನೀರಿನ ಯೋಜನೆಯ ನೀರಿನ ತೊಟ್ಟಿಗೆ ಬಿದ್ದಿದ್ದಾನೆ.
ಇದನ್ನು ಓದಿದ್ದೀರಾ? ಬಾಗಲಕೋಟೆ | ದೇವಸ್ಥಾನದ ಕಾರ್ಯಕ್ರಮದಲ್ಲಿ ‘ವಕ್ಫ್’ ವಿಚಾರ: ಶಾಸಕ ಯತ್ನಾಳ್‌ಗೆ ಸಾರ್ವಜನಿಕರಿಂದ ಛೀಮಾರಿ
ಸಂಜೆಯಾದರೂ ಬಾಲಕ ಪ್ರಜ್ವಲ್ ಮನೆಗೆ ಬಂದಿರಲಿಲ್ಲ. ಹೀಗಾಗಿ ಆತನ ಮನೆಯವರು ಹುಡುಕಾಟ ನಡೆಸಿದ್ದರು. ಆಗ ಪ್ರಜ್ವಲ್ ನೀರಿನ ತೊಟ್ಟಿಯಲ್ಲಿ ಮುಳುಗಿ ಮೃತಪಟ್ಟಿರುವುದು ಗೊತ್ತಾಗಿದೆ. ನಂತರ ಬಾಲಕನ ಮೃತದೇಹವನ್ನು ನೀರಿನ ತೊಟ್ಟಿಯಿಂದ ಹೊರ ತೆಗೆದು ರಟ್ಟೀಹಳ್ಳಿ ತಾಲೂಕು ಸರ್ಕಾರಿ ಆಸ್ಪತ್ರೆಯ ಶವಾಗಾರಕ್ಕೆ ಕಳುಹಿಸಲಾಗಿದೆ.