ಸುಪ್ರೀಂ ಕೋರ್ಟ್‌ನ ಸಿಜೆಐ ಆಗಿ ಪ್ರಮಾಣ ವಚನ ಸ್ವೀಕರಿಸಿದ ನ್ಯಾ. ಸಂಜೀವ್‌ ಖನ್ನಾ

Date:

Advertisements

ಸುಪ್ರೀಂ ಕೋರ್ಟ್‌ನ ಹಿರಿಯ ನ್ಯಾಯಮೂರ್ತಿ ಸಂಜೀವ್‌ ಖನ್ನಾ ಅವರು ಭಾರತದ 51ನೇ ಮುಖ್ಯ ನ್ಯಾಯಮೂರ್ತಿಯಾಗಿ (CJI) ಸೋಮವಾರ ಪ್ರಮಾಣ ವಚನ ಸ್ವೀಕರಿಸಿದರು.

ರಾಷ್ಟ್ರಪತಿ ಭವನದಲ್ಲಿ ನಡೆದ ಪ್ರಮಾಣವಚನ ಸಮಾರಂಭದಲ್ಲಿ ರಾಷ್ಟ್ರಪತಿ ದೌಪದಿ ಮುರ್ಮು ಅವರು ನ್ಯಾಯಮೂರ್ತಿ ಖನ್ನಾ ಅವರಿಗೆ ಪ್ರಮಾಣ ವಚನ ಬೋಧಿಸಿದರು.

ಚುನಾವಣಾ ಬಾಂಡ್ ರದ್ದತಿ, ಕಣಿವೆ ರಾಜ್ಯ ಜಮ್ಮು ಕಾಶ್ಮೀರಕ್ಕೆ ವಿಶೇಷ ಸ್ಥಾನಮಾನ ನೀಡುವ 370 ವಿಧಿ ರದ್ದತಿ ಎತ್ತಿ ಹಿಡಿದಂತಹ ಪ್ರಮುಖ ವಿಷಯಗಳ ತೀರ್ಪು ಪ್ರಕಟಿಸಿದ್ದ ಹೆಗ್ಗಳಿಕೆ ಇವರಿಗಿದೆ. ನಿರ್ಗಮಿತ ನ್ಯಾಯಮೂರ್ತಿ ಡಿ.ವೈ ಚಂದ್ರಚೂಡ್ ಅವರಿಂದ ತೆರವಾದ ಸ್ಥಾನಕ್ಕೆ ಈಗ ಸಂಜೀವ್ ಖನ್ನಾ ಏರುತ್ತಿದ್ದು, 2025ರ ಮೇ 13ರವರೆಗೆ ಅವರು ಸಿಜೆಐ ಆಗಿ ಅಧಿಕಾರದಲ್ಲಿ ಇರಲಿದ್ದಾರೆ.

Advertisements

1960ರ ಮೇ 14ರಂದು ದೆಹಲಿ ಹೈಕೋರ್ಟ್‌ನ ಮಾಜಿ ನ್ಯಾಯಮೂರ್ತಿಯಾದ ದೇವ್ ರಾಜ್ ಖನ್ನಾ ಅವರ ಮಗನಾಗಿ ಜನಿಸಿದ ಸಂಜೀವ್ ಖನ್ನಾ ದೆಹಲಿಯ ಪ್ರತಿಷ್ಠಿತ ಮಾಡರ್ನ್ ಸ್ಕೂಲ್‌ನಲ್ಲಿ ಶಾಲಾ ಶಿಕ್ಷಣವನ್ನು ಪೂರ್ಣಗೊಳಿಸಿದ್ದಾರೆ. 1980ರಲ್ಲಿ ದೆಹಲಿ ವಿಶ್ವವಿದ್ಯಾಲಯದಿಂದ ಪದವಿ ಮತ್ತು ಅನಂತರ ದೆಹಲಿ ವಿಶ್ವವಿದ್ಯಾಲಯದಿಂದ ಕಾನೂನು ಪದವಿ ಪಡೆದಿದ್ದಾರೆ.

2004ರಲ್ಲಿ ದೆಹಲಿ ಸರ್ಕಾರದ ಸ್ಥಾಯಿ ಸಲಹೆಗಾರರಾಗಿ (ಸಿವಿಲ್) ನೇಮಕಗೊಂಡಿದ್ದ ಅವರು, ದೆಹಲಿ ಹೈಕೋರ್ಟ್‌ನಲ್ಲಿ ಹೆಚ್ಚುವರಿ ಪಬ್ಲಿಕ್ ಪ್ರಾಸಿಕ್ಯೂಟರ್ ಆಗಿ ಮತ್ತು ಅಮಿಕಸ್ ಕ್ಯೂರಿ ಆಗಿ ಹಲವಾರು ಕ್ರಿಮಿನಲ್ ಪ್ರಕರಣಗಳಲ್ಲಿ ಹಾಜರಾಗಿ, ವಾದಿಸಿದ್ದಾರೆ. ಅವರ ಚಿಕ್ಕಪ್ಪ ಎಚ್.ಆರ್.ಖನ್ನಾ ಸುಪ್ರೀಂಕೋರ್ಟ್‌ ನ್ಯಾಯಮೂರ್ತಿಯಾಗಿ ಕಾರ್ಯ ನಿರ್ವಹಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬೀದಿ ನಾಯಿಗಳಿಗೆ ಲಸಿಕೆ ಹಾಕಿದ ನಂತರ ಅದೇ ಸ್ಥಳಕ್ಕೆ ತಂದು ಬಿಡಬೇಕು: ಸುಪ್ರೀಂ ಕೋರ್ಟ್‌

ಬೀದಿ ನಾಯಿಗಳಿಗೆ ಸಂಬಂಧಿಸಿದ್ದಂತೆ ಆಗಸ್ಟ್ 11ರ ಆದೇಶವನ್ನು ಮಾರ್ಪಡಿಸಿದ ಸುಪ್ರೀಂ...

ವಿವಾದಾತ್ಮಕ ಯೂಟ್ಯೂಬರ್ ಎಲ್ವಿಶ್ ಮನೆ ಮೇಲೆ ಗುಂಡಿನ ದಾಳಿ: ಎನ್‌ಕೌಂಟರ್ ಮಾಡಿ ಆರೋಪಿ ಬಂಧನ

ಬಲಪಂಥೀಯ, ವಿವಾದಾತ್ಮಕ ಯೂಟ್ಯೂಬರ್ ಮತ್ತು ಬಿಗ್ ಬಾಸ್ ವಿಜೇತ ಎಲ್ವಿಶ್ ಯಾದವ್‌...

ಗೇಮಿಂಗ್​ ಆ್ಯಪ್​ಗಳಿಗೆ ಅಕ್ರಮ ಹಣ ವರ್ಗಾವಣೆ ಆರೋಪ: ಚಿತ್ರದುರ್ಗ ಶಾಸಕ ವೀರೇಂದ್ರ ಮನೆ ಮೇಲೆ ಇಡಿ ದಾಳಿ

ಶುಕ್ರವಾರ(ಆಗಸ್ಟ್ 22) ಬೆಳ್ಳಂಬೆಳಗ್ಗೆ ಚಿತ್ರದುರ್ಗದ ಶಾಸಕ ಕೆಸಿ ವೀರೇಂದ್ರ ಪಪ್ಪಿ ಅವರ...

ಉತ್ತರಾಖಂಡ | ಕಪಾಳ ಮೋಕ್ಷ ಮಾಡಿದ ಶಿಕ್ಷಕನಿಗೆ ಗುಂಡು ಹಾರಿಸಿದ ವಿದ್ಯಾರ್ಥಿ

ತರಗತಿಯಲ್ಲಿ ಕಪಾಳ ಮೋಕ್ಷ ಮಾಡಿದ ಕಾರಣಕ್ಕೆ ಕುಪಿತಗೊಂಡ ವಿದ್ಯಾರ್ಥಿಯೊಬ್ಬ ತನ್ನ ಶಿಕ್ಷಕನ...

Download Eedina App Android / iOS

X