ಕರ್ನಾಟಕ ರಾಜ್ಯ ಅಕ್ಕಮಹಾದೇವಿ ಮಹಿಳಾ ವಿವಿಯ ಪತ್ರಿಕೋದ್ಯಮ ಮತ್ತು ಸಮೂಹ ಸಂವಹನ ವಿಭಾಗದಲ್ಲಿ 2024-25ನೇ ಶೈಕ್ಷಣಿಕ ಸಾಲಿನ ಸ್ನಾತಕೋತ್ತರ ಪದವಿ(ಎಂಎ), ವ್ಯಾಲ್ಯು ಆಡೆಡ್ ಡಿಪ್ಲೋಮಾ ಹಾಗೂ ವ್ಯಾಲ್ಯು ಆಡೆಡ್ ಅಡ್ವಾನ್ಸ್ ಡಿಪ್ಲೋಮಾ ಮತ್ತು ಗ್ರಾಫಿಕ್ ಡಿಸೈನಿಂಗ್ ಸರ್ಟಿಫಿಕೇಟ್ ಕೋರ್ಸ್‌ಗಳ ಪ್ರಥಮ ವರ್ಷದ ಉಳಿಕೆ ಸೀಟುಗಳ ಪ್ರವೇಶಕ್ಕಾಗಿ ಅರ್ಹ ಅಭ್ಯರ್ಥಿಗಳಿಂದ ಯುಯುಸಿಎಂಎಸ್ ತಂತ್ರಾಂಶದ ಮೂಲಕ ಆನ್‌ಲೈನ್‌ನಲ್ಲಿ ಅರ್ಜಿ ಆಹ್ವಾನಿಸಲಾಗಿದೆ.
ಪತ್ರಿಕೋದ್ಯಮ ವಿಭಾಗದ ಎಂಎ ಕೋರ್ಸ್‌ನ ಉಳಿಕೆ ಸೀಟುಗಳಿಗೆ ಪ್ರವೇಶ ಪಡೆಯಲು ಈಗಾಗಲೇ ಯುಯುಸಿಎಂಎಸ್ ಮೂಲಕ ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಿ ಈವರೆಗೆ ಪ್ರವೇಶ ಪಡೆಯದೇ ಇರುವವರು ಮತ್ತು ಈಗಾಗಲೇ ಅರ್ಜಿ ಸಲ್ಲಿಸದೇ ಇರುವವರು ಸಹ ಅರ್ಜಿ ಸಲ್ಲಿಸಲು ನವೆಂಬರ್ 15 ಕೊನೆಯ ದಿನವಾಗಿದೆ.
ಈ ಸುದ್ದಿ ಓದಿದ್ದೀರಾ? ಧಾರವಾಡ | ವಿದ್ಯಾರ್ಥಿಗಳು ಕಾನೂನು ಸೇವೆಗಳ ಉಪಯೋಗ ಪಡೆಯಬೇಕು: ಬಿ.ಎಫ್.ಹೊಸಮನಿ
ಅರ್ಹ ಅಭ್ಯರ್ಥಿಗಳು https://uucms.kamataka.gov.in/Login/Index ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ. ಅರ್ಜಿ ಸಲ್ಲಿಸಿದ ನಂತರ ನೇರವಾಗಿ ಪತ್ರಿಕೋದ್ಯಮ ವಿಭಾಗಕ್ಕೆ ಭೇಟಿ ನೀಡಿ ಪ್ರವೇಶ ಪಡೆಯಬಹುದಾಗಿದೆ. ಹೆಚ್ಚಿನ ಮಾಹಿತಿಗಾಗಿ ಮೊಬೈಲ್ ಸಂಖ್ಯೆ 9611488205ಕ್ಕೆ ಸಂಪರ್ಕಿಸಬಹುದಾಗಿದೆ ಎಂದು ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾಲಯ ಪ್ರಕಟಣೆ ತಿಳಿಸಿದೆ.