ಸಚಿವ ಜಮೀರ್ ಅಹ್ಮದ್ ಅವರು ಒಕ್ಕಲಿಗರನ್ನು ಅಥವಾ ಹಿಂದೂಗಳನ್ನು ಖರೀದಿಸುತ್ತೇನೆ ಎಂದು ಹೇಳುತ್ತಿರುವುದೇ ಎಂದು ಪ್ರತಿಪಕ್ಷ ನಾಯಕ ಆರ್ ಅಶೋಕ್ ಅವರು ಪ್ರಶ್ನಿಸಿದ್ದಾರೆ.
ಚನ್ನಪಟ್ಟಣ ಉಪಚುನಾವಣೆಯ ಪ್ರಚಾರದಲ್ಲಿ ಮಾತನಾಡಿದ ಆರ್ ಅಶೋಕ್ ಅವರು, “ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡರು ಚಾಮರಾಜಪೇಟೆಗೆ ಹೋಗಿ ರ‍್ಯಾಲಿ ಮಾಡಿ ಜಮೀರ್ ಅಹಮದ್‌ರನ್ನು ಗೆಲ್ಲಿಸಿ ಅವರಿಗೆ ಜೀವನ ನೀಡಿದ್ದರು. ಆದರೆ ಈಗ ಅದೇ ಜಮೀರ್ ಅಹಮದ್ ದೇವೇಗೌಡರ ಕುಟುಂಬವನ್ನು ಖರೀದಿಸುತ್ತೇವೆ ಎನ್ನುತ್ತಿದ್ದಾರೆ” ಎಂದು ಅಶೋಕ್ ಟೀಕಿಸಿದರು.
ಹಾಗೆಯೇ, “ಇದು ಒಕ್ಕಲಿಗರನ್ನು ಖರೀದಿಸುತ್ತೇವೆಂದು ಅರ್ಥವೇ ಅಥವಾ ಹಿಂದೂಗಳನ್ನು ಖರೀದಿಸುತ್ತೇವೆಂದು ಅರ್ಥವೇ” ಎಂದು ಪ್ರಶ್ನಿಸಿದರು.
ಇದನ್ನು ಓದಿದ್ದೀರಾ? ವಕ್ಪ್ ವಿವಾದ | ಸತ್ಯ ಮರೆಮಾಚಲು ಮುಖ್ಯಮಂತ್ರಿ ಸುಳ್ಳು ಹೇಳಿದ್ದಾರೆ: ಆರ್ ಅಶೋಕ್ ಆರೋಪ
“ಚುನಾವಣೆ ಬರುವಾಗ ಕಾಂಗ್ರೆಸ್ ಸಚಿವರು ಖರೀದಿ ಬಗ್ಗೆ ಮಾತನಾಡುತ್ತಿದ್ದಾರೆ. ಬೆಂಗಳೂರಿನಲ್ಲಿ ಹಿಂದೆ ಇದ್ದ ರೌಡಿಗಳು ನಾಚುವಂತೆ ಅಬಕಾರಿ ಇಲಾಖೆಯ ಮೂಲಕ ಮದ್ಯ ಮಾರಾಟಗಾರರಿಂದ ಹಫ್ತಾ ವಸೂಲಿ ಮಾಡುತ್ತಿದ್ದಾರೆ. ಲೂಟಿ ಮಾಡಿದ ಹಣದಲ್ಲಿ ಕುಟುಂಬ ಖರೀದಿಸುವವರನ್ನು ಚನ್ನಪಟ್ಟಣದ ಜನರು ಕ್ಷಮಿಸುವುದಿಲ್ಲ” ಎಂದು ಹೇಳಿದರು.
“ಸಚಿವ ಜಮೀರ್ ಅಹ್ಮದ್ ರೈತರ ಜಮೀನು ಕಬಳಿಸುತ್ತಿದ್ದಾರೆ. ಈಗ ದೇವೇಗೌಡರ ಕುಟುಂಬ ಖರೀದಿಸಲು ಇರಾಕ್, ಇರಾನ್‌ನಿಂದ ಹಣ ಬಂದಿದೆಯೇ” ಎಂದು ಎಚ್ ಡಿ ಕುಮಾರಸ್ವಾಮಿ ಪ್ರಶ್ನಿಸಿದರು.
