ರಾಯಚೂರು | ಡಿಸೆಂಬರ್‌ನಲ್ಲಿ ಬಿಜೆಪಿ ರಾಜ್ಯಾಧ್ಯಕ್ಷರ ಬದಲಾವಣೆಯಾಗುವ ನಿರೀಕ್ಷೆ : ರಮೇಶ್ ಜಾರಕಿಹೊಳಿ

Date:

Advertisements

ಬಿಜೆಪಿಗಾಗಿ ದುಡಿದವರು, ಸಂಘಟಿಸುವುದಕ್ಕೆ ಬಲಪಡಿಸಿದವರು ವಿಜಯೇಂದ್ರ ನಾಯಕತ್ವವನ್ನು ಒಪ್ಪುತ್ತಿಲ್ಲ. ಇದರ ಬಗ್ಗೆ ಹೈಕಮಾಂಡ್ ಗಮನಕ್ಕೆ ತರಲಾಗಿದೆ. ಮುಂದಿನ ತಿಂಗಳು ಡಿಸೆಂಬರ್‌ನಲ್ಲಿ ಬಿಜೆಪಿ ರಾಜ್ಯಾಧ್ಯಕ್ಷರ ಬದಲಾವಣೆಯಾಗುವ ನಿರೀಕ್ಷೆಯಿದೆ ಎಂದು ಮಾಜಿ ಸಚಿವ ರಮೇಶ್ ಜಾರಕಿಹೊಳಿ ಹೇಳಿದರು.

ರಾಯಚೂರು ನಗರದಲ್ಲಿ ಅವರಿಂದು ಸುದ್ದಿಗೋಷ್ಠಿಯನ್ನುದ್ದೇಶಿಸಿ ಮಾತನಾಡಿ, ನಮ್ಮ ಹೋರಾಟ ಬಿಜೆಪಿ ವಿರುದ್ದವಲ್ಲ, ಪಕ್ಷದ ವಿರುದ್ದವಾಗಿ ನಡೆದುಕೊಳ್ಳುತ್ತಿಲ್ಲ. ಬದಲಾಗಿ ಪಕ್ಷದ ಸಂಘಟನೆಯನ್ನು ಬಲಪಡಿಸುವುದು ನಮ್ಮ ಉದ್ದೇಶ. ನಾವೇನು ಸಿಎಂ ಆಗಬೇಕು, ಉನ್ನತ ಹುದ್ದೆ ಬೇಕೆನ್ನುವ ಬೇಡಿಕೆಯಿಲ್ಲ. ಪೂರ್ಣ ಪ್ರಮಾಣದಲ್ಲಿ ಬಿಜೆಪಿ ಅಧಿಕಾರಕ್ಕೆ ತರುವ ಪ್ರಯತ್ನ ನಮ್ಮದಾಗಿದೆ ಎಂದರು.

ಕೇಂದ್ರ ಮಾಜಿ ಸಚಿವ ಬಸನಗೌಡ ಯತ್ನಾಳ್, ಮಾಜಿ ಸಂಸದ ಪ್ರತಾಪಸಿಂಹ ಸೇರಿ ಹಲವರು ರಾಜ್ಯಾದ್ಯಂತ ಪ್ರವಾಸ ಕೈಗೊಂಡು ಪ್ರತಿ ಆರು ಜಿಲ್ಲೆಗಳಲ್ಲಿ ಒಂದು ತಂಡ ಪ್ರವಾಸ ಕೈಗೊಂಡು ಪಕ್ಷವನ್ನು ಮತ್ತಷ್ಟು ಸಂಘಟಿಸುವ ಮೂಲಕ ಮುಂದಿನ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಪಕ್ಷದ ಸರ್ಕಾರ ಬಹುಮತದಿಂದ ತರುವ ಪ್ರಯತ್ನ ನಡೆಸಲಾಗುತ್ತಿದೆ ಎಂದು ಹೇಳಿದರು.

Advertisements

ವಕ್ಫ್‌ ವಿಷಯದಲ್ಲಿ ಮುಖ್ಯಮಂತ್ರಿ ಮೌನವಾಗಿದ್ದಾರೆ. ಆದೇಶಗಳು ತಾತ್ಕಾಲಿಕ ತಂತ್ರವಷ್ಟೆ, ಶಾಶ್ವತ ಪರಿಹಾರವಲ್ಲ. ಕೇಂದ್ರ ಸರ್ಕಾರ ವಕ್ಫ್‌ ಕಾಯ್ದೆಯ ಕುರಿತಂತೆ ಸಮಿತಿಯನ್ನು ರಚಿಸಿದೆ. ಸಮಿತಿಗಳಿಗೆ ಮಾಹಿತಿಯನ್ನು ನೀಡಲಾಗಿದೆ. ಕೇಂದ್ರ ಶೀಘ್ರದಲ್ಲಿ ನಿರ್ಧಾರ ಕೈಗೊಳ್ಳಲಿದೆ. ರೈತರು, ಮಠ, ಮಂದಿರಗಳ ಆಸ್ತಿಯನ್ನು ವಕ್ಫ್‌ ಎಂದು ನಮೂದಿಸಿರುವದನ್ನು ರದ್ದುಗೊಳಿಸಬೇಕು ಎಂದರು.

ಇದನ್ನು ಓದಿದ್ದೀರಾ? ಆಳಂದ | ಈ ದಿನ ಫಲಶೃತಿ: ಸರ್ಕಾರಿ ಶಾಲೆಯ ಕೊಠಡಿ ನಿರ್ಮಾಣಕ್ಕೆ ₹1.80 ಕೋಟಿ ಅನುದಾನ ಬಿಡುಗಡೆ

ಸದನದಲ್ಲಿ ವಾಲ್ಮೀಕಿ ನಿಗಮದ ಪ್ರಕರಣದಲ್ಲಿ ಸಿಎಂ ಹೇಳಿರುವುದಕ್ಕೆ ಈಗ ಕ್ರಮವಾಗುತ್ತದೆ ಎಂಬ ಭರವಸೆಯೂ ಇಲ್ಲ. ಕಾಂಗ್ರೆಸ್ ಪಕ್ಷ ಜನರ ವಿಶ್ವಾಸ ಕಳೆದುಕೊಂಡಿದೆ. ಮೂರು ಉಪ ಚುನಾವಣೆಯಲ್ಲಿ ಬಿಜೆಪಿ ಪಕ್ಷದ ಅಭ್ಯರ್ಥಿಗಳು ಗೆಲುವು ಸಾಧಿಸುವುದರಲ್ಲಿ ಅನುಮಾನವಿಲ್ಲ. ಪಕ್ಷದ ಮುಖಂಡರುಗಳು ಅಭ್ಯರ್ಥಿಗಳ ಗೆಲುವಿಗೆ ಶ್ರಮಿಸುತ್ತಿದ್ದಾರೆ ಎಂದರು.

ಈ ಸಂದರ್ಭದಲ್ಲಿ ಮಾಜಿ ಸಂಸದ ಬಿ.ವಿ.ನಾಯಕ, ಮಾಜಿ ಶಾಸಕ ಬಸನಗೌಡ ಬ್ಯಾಗವಾಟ, ನಗರ ಮಂಡಲ ಅಧ್ಯಕ್ಷ ರಾಘವೇಂದ್ರ ಉಟ್ಕೂರು, ಮಲ್ಲಿಕಾರ್ಜುನ ಜಕ್ಕಲದಿನ್ನಿ, ಸುಧಾಕರ, ಬಂಡೇಶ ವಲ್ಕಂದಿನ್ನಿ, ಕೊಟ್ರೇಶಪ್ಪ ಕೋರಿ, ಶರಣಗೌಡ ಮದರಕಲ್ ಸೇರಿ ಅನೇಕರಿದ್ದರು.

ಈದಿನ 1
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಯಾದಗಿರಿ | ಅತಿವೃಷ್ಟಿಯಿಂದ ಬೆಳೆ ಹಾನಿ: ರೈತರಿಗೆ ಪರಿಹಾರ ನೀಡುವಂತೆ ಆಗ್ರಹ

ಯಾದಗಿರಿ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ಬೆಳೆ ಹಾನಿದ ರೈತರಿಗೆ ಸಮೀಕ್ಷೆ ನಡೆಸಿ ಶೀಘ್ರದಲ್ಲಿ...

ಗುಬ್ಬಿ | ಜನಪದ ಸಾಹಿತ್ಯ ಎಂದೆಂದಿಗೂ ಜೀವಂತ : ಡಾ.ಮೂರ್ತಿ ತಿಮ್ಮನಹಳ್ಳಿ

ಕನ್ನಡ ಸಾಹಿತ್ಯ ಲೋಕದಲ್ಲಿ ಹಲವು ಪ್ರಕಾರಗಳ ಪೈಕಿ ಜನಪದ ಸಾಹಿತ್ಯ...

ಉಡುಪಿ | ಮಹೇಶ್‌ ಶೆಟ್ಟಿ ತಿಮರೋಡಿ ಬೆಂಬಲಿಗರ ಕಾರು ಪೊಲೀಸ್‌ ಅಧೀಕ್ಷರಕ ಕಾರಿಗೆ ಡಿಕ್ಕಿ !

ಬೆಳ್ತಂಗಡಿಯ ಸೌಜನ್ಯ ಪರ ಹೋರಾಟಗಾರ ಮಹೇಶ್‌ ಶೆಟ್ಟಿ ತಿಮರೋಡಿಯವರನ್ನು ಬ್ರಹ್ಮಾವರ ಪೊಲೀಸ್...

ಚಿಕ್ಕಮಗಳೂರು l ಸಮಾಜದಲ್ಲಿ ಜಾತಿ,ಧರ್ಮಗಳ ಕಂದಕದ ಗೋಡೆಗಳನ್ನು ತೊಡೆದು ಹಾಕುವುದೇ ನಿಜವಾದ ಸಾಹಿತ್ಯ; ಸಾಹಿತಿ ಮನಸುಳಿ ಮೋಹನ್‌

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ತಾಲ್ಲೂಕು ಸಮಿತಿ...

Download Eedina App Android / iOS

X