ಚಾಂಪಿಯನ್ಸ್ ಟ್ರೋಫಿಗೆ ಪಾಕಿಸ್ತಾನಕ್ಕೆ ಭಾರತದ ತಂಡ ಕಳುಹಿಸಲು ಬಿಸಿಸಿಐ ನಿರಾಕರಿಸಿದೆ. ಇದಾದ ಬೆನ್ನಲ್ಲೇ ಈ ಬಗ್ಗೆ ಐಸಿಸಿಯಿಂದ ಸ್ಪಷ್ಟತೆಯನ್ನು ಕೇಳಲು ಪಾಕಿಸ್ತಾನ ಕ್ರಿಕೆಟ್ ಮಂಡಳಿಯು ನಿರ್ಧರಿಸಿದೆ ವರದಿ ವರದಿಯಾಗಿದೆ.
ಪಾಕಿಸ್ತಾನಕ್ಕೆ ತನ್ನ ತಂಡವನ್ನು ಕಳುಹಿಸದಿರುವ ಬಗ್ಗೆ ಬಿಸಿಸಿಐ ಐಸಿಸಿಗೆ ತಿಳಿಸಿದೆ. ಅದಾದ ಬಳಿಕ ಐಸಿಸಿ ಈ ಬಗ್ಗೆ ಪಿಸಿಬಿಗೆ ಮಾಹಿತಿ ನೀಡಿದೆ.
ಇನ್ನು “ಹೈಬ್ರಿಡ್ ಮಾದರಿಯಲ್ಲಿ ಚಾಂಪಿಯನ್ಸ್ ಟ್ರೋಫಿಯನ್ನು ನಡೆಸುವ ಬಗ್ಗೆ ಸದ್ಯಕ್ಕೆ ಯಾವುದೇ ಮಾತುಕತೆ ಇಲ್ಲ” ಎಂದು ಪಿಸಿಬಿ ಮೂಲಗಳು ತಿಳಿಸಿರುವುದಾಗಿ ವರದಿಯಾಗಿದೆ.
ಇದನ್ನು ಓದಿದ್ದೀರಾ? ಟಿ20 ಕ್ರಿಕೆಟ್ ಸರಣಿ | ಹೊಸ ಆಟಗಾರರಿಗೊಂದು ಉತ್ತಮ ಅವಕಾಶ
ಕಳೆದ ವರ್ಷ ಏಷ್ಯಾಕಪ್‌ನಲ್ಲಿ ಹೈಬ್ರಿಡ್ ಮಾದರಿಯನ್ನು ಅನುಸರಿಸಲಾಗಿದೆ. ಭಾರತದ ಪಂದ್ಯಗಳು ಶ್ರೀಲಂಕಾದಲ್ಲಿ ನಡೆದಿದೆ. ಇತರ ಪಂದ್ಯಗಳು ಪಾಕಿಸ್ತಾನದಲ್ಲಿ ನಡೆದಿದೆ. ಆದರೆ ಈ ಬಾರಿ ಹೈಬ್ರಿಡ್ ಮಾದರಿಯನ್ನು ನಡೆಸುವ ಬಗ್ಗೆ ಪಿಸಿಬಿ ಮಾತುಕತೆ ನಡೆಸಿಲ್ಲ. ಈ ಹಿನ್ನೆಲೆ ಚಾಂಪಿಯನ್ಸ್ ಟ್ರೋಫಿಗೆ ತಂಡ ಕಳುಹಿಸಲು ಭಾರತ ನಿರಾಕಿಸಿದೆ.
ಮುಂದಿನ ವರ್ಷ ಫೆಬ್ರವರಿಯಲ್ಲಿ ನಡೆಯಲಿರುವ ಟೂರ್ನಿಯಲ್ಲಿ ಭಾರತದ ಪಂದ್ಯಗಳಿಗೆ ದುಬೈ ಆತಿಥ್ಯ ವಹಿಸಬಹುದು ಎಂದು ಊಹಿಸಲಾಗಿದೆ. “ಐಸಿಸಿಗೆ ಅದರ ಕಾನೂನು ವಿಭಾಗದ ಸಲಹೆಯೊಂದಿಗೆ ಇಮೇಲ್ ಕಳುಹಿಸಲಾಗುವುದು. ಈ ಬಗ್ಗೆ ಪಾಕಿಸ್ತಾನ ಕ್ರಿಕೆಟ್ ಮಂಡಳಿಯು ಭಾರತದ ನಿರ್ಧಾರದ ಬಗ್ಗೆ ಐಸಿಸಿಯಿಂದ ಸ್ಪಷ್ಟೀಕರಣಗಳನ್ನು ಬಯಸಿದೆ” ಎಂದು ವರದಿಯಾಗಿದೆ.
2008ರ ಮುಂಬೈ ಭಯೋತ್ಪಾದಕ ದಾಳಿಯ ನಂತರ ಭಾರತವು ಪಾಕಿಸ್ತಾನಕ್ಕೆ ಪ್ರಯಾಣಿಸಿಲ್ಲ. ಎರಡೂ ತಂಡಗಳು ಐಸಿಸಿ ಪಂದ್ಯಾವಳಿಗಳಲ್ಲಿ ಮಾತ್ರ ಪರಸ್ಪರ ಸ್ಪರ್ಧಿಸುತ್ತವೆ. ಆದರೆ ಬೇರೆ ದೇಶದಲ್ಲಿ ಈ ಸ್ಪರ್ಧೆಯನ್ನು ನಡೆಸಲಾಗುತ್ತದೆ.
