ಹಾವೇರಿ | ಕಾಂಗ್ರೆಸ್ ಅಭ್ಯರ್ಥಿ ಯಾಸೀರ್ ಪಠಾಣ್ ಮೇಲೆ ಯಾವುದೇ ರೌಡಿಶೀಟ್ ಇಲ್ಲ: ಹಾವೇರಿ ಎಸ್ಪಿ ಸ್ಪಷ್ಟನೆ

Date:

Advertisements

ಯಾಸೀರ್ ಖಾನ್ ಪಠಾಣ್ ವಿರುದ್ಧ ರೌಡಿಶೀಟರ್ ಪ್ರಕರಣದ ಬಗ್ಗೆ ಸ್ವತಃ ಹಾವೇರಿ ಪೊಲೀಸ್ ವರಿಷ್ಠಾಧಿಕಾರಿ ಅಂಶುಕುಮಾರ್ ಮಾಧ್ಯಮ ಪ್ರಕಟಣೆ ಹೊರಡಿಸಿದ್ದು, ಕಾಂಗ್ರೆಸ್ ಅಭ್ಯರ್ಥಿ ಯಾಸೀರ್ ಪಠಾಣ್ ಮೇಲೆ ರೌಡಿಶೀಟ್ ಇಲ್ಲ ಎಂದು ಸ್ಪಷ್ಟಪಡಿಸಿ, ಈ ಮೂಲಕ ಎಲ್ಲಾ ಗೊಂದಲಗಳಿಗೆ ತೆರೆ ಎಳೆದಿದ್ದಾರೆ.

ಹೌದು, ಕಾಂಗ್ರೆಸ್ ಅಭ್ಯರ್ಥಿ ಯಾಸೀರ್ ಖಾನ್ ಪಠಾಣ್ ಮೇಲೆ ರೌಡಿಶೀಟರ್ ಪ್ರಕರಣ ಇದೆ ಎಂದು ಮಾಜಿ ಸಿಎಂ, ಸಂಸದ ಬಸವರಾಜ್ ಬೊಮ್ಮಾಯಿ ಆರೋಪ ಮಾಡಿದ್ದರು. ಆದರೆ ಪಠಾಣ್​ ಅವರು ತಮ್ಮ ನಾಮಪತ್ರದಲ್ಲಿ ಯಾವುದೇ ಪ್ರಕರಣಗಳಿಲ್ಲ ಎಂದು ತಿಳಿಸಿದ್ದಾರೆ. ಹೀಗಾಗಿ ಬೊಮ್ಮಾಯಿ ಕಾನೂನು ಹೋರಾಟಕ್ಕೆ ಮುಂದಾಗಿದ್ದು, ಇದರ ಮಧ್ಯೆ ಪಠಾಣ್ ಮೇಲೆ ಯಾವುದೇ ರೌಡಿಸೀಟರ್ ಪ್ರಕರಣ ಇಲ್ಲವೆಂದು ಹಾವೇರಿ ಎಸ್ಪಿ ಸ್ಪಷ್ಟನೆ ನೀಡಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಯಾಸೀರ್ ಪಠಾಣ್​ ಅವರ ಮೇಲೆ ರೌಡಿಶೀಟ್​ ಇದೆ ಎಂದು ಕೆಲವು ಮಾಧ್ಯಮಗಳಲ್ಲಿ ಪ್ರಸಾರವಾಗಿದೆ. ಈ ಸಂಬಂಧ ಶಿಗ್ಗಾಂವಿ ಡಿಎಸ್​​ಪಿ ಹಾಗೂ ಪಿಎಸ್​ಐ ಕಚೇರಿಯಿಂದ ದಾಖಲೆಗಳನ್ನು ಪರಿಶೀಲಿಸಿದ್ದು, ಯಾಸೀರ್ ಪಠಾಣ್​ ಅವರ ಮೇಲೆ ಯಾವುದೇ ರೀತಿಯ ರೌಡಿಶೀಟ್​ ಇರುವುದಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.

Advertisements

ಕಾಂಗ್ರೆಸ್ ಅಭ್ಯರ್ಥಿ ವಿರುದ್ಧ ಹಲವು ಕೇಸ್​ಗಳು ಇವೆ. ಆದರೆ ಅವರು ಅಫಿಡೆವಿಟ್​​ನಲ್ಲಿ ತಿಳಿಸಿಲ್ಲ. ಈ ಮೂಲಕ ಚುನಾವಣಾಧಿಕಾರಿಗಳು ಪಕ್ಷಪಾತ ಮಾಡಿದ್ದಾರೆ. ರಾಜ್ಯ ಹಾಗೂ ಕೇಂದ್ರ ಚುನಾವಣೆಗೆ ನಾವು ಅರ್ಜಿ ಸಲ್ಲಿಸುತ್ತೇವೆ. ಜಿಲ್ಲಾಧಿಕಾರಿ ಮೇಲೆ ದೊಡ್ಡ ಜವಾಬ್ದಾರಿ ಇದ್ದು, ಸ್ಟೇಟಸ್ ಏನಿದೆ ಎಂದು ಸ್ಪಷ್ಟಪಡಿಸಲಿ. ಇಲ್ಲದಿದ್ದರೆ ಅಧಿಕಾರಿಗಳು ಕಟಕಟೆಯಲ್ಲಿ ನಿಲ್ಲಬೇಕಾಗುತ್ತೆ ಎಂದು ಬೊಮ್ಮಾಯಿ ಎಚ್ಚರಿಕೆ ನೀಡಿದ್ದರು.

ಈ ವರದಿ ಓದಿದ್ದೀರಾ? ಶಿಗ್ಗಾವಿ ಉಪಚುನಾವಣೆ | ಬಿಜೆಪಿಯವರು ಎಷ್ಟೇ ತಿಪ್ಪರಲಾಗ ಹಾಕಿದರೂ ಪ್ರಯೋಜನವಾಗದು: ಈಶ್ವರ ಖಂಡ್ರೆ

ಕೆಲ ದಿನಗಳ ಹಿಂದೆ ಕಾಂಗ್ರೆಸ್’ನ ಮಾಜಿ ಶಾಸಕ ಅಜ್ಜಂಪೀರ್ ಖಾದ್ರಿ ತಮಗೆ ಬೈ ಎಲೆಕ್ಷನ್ ಟಿಕೆಟ್​ ಕೈತಪ್ಪಿದ ಬಳಿಕ ಪಠಾಣ್ ಓರ್ವ ರೌಡಿಶೀಟರ್ ಎಂದು ಆರೋಪಿಸಿದ್ದರು. ಇದನ್ನೇ ಇಟ್ಟುಕೊಂಡು ಇದೀಗ ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಅವರು, ಪಠಾಣ್ ಮೇಲೆ ರೌಡಿ ಶೀಟರ್ ಕೇಸ್ ಇದೆ, ವಿವಿಧ ಪ್ರಕರಣ ಇರೋದನ್ನು ಆಫಿಡಿವೇಟ್‌ನಲ್ಲಿ ಮುಚ್ಚಿಟ್ಟಿದ್ದಾರೆ ಎಂದು ಗಂಭೀರ ಆರೋಪ ಮಾಡುತ್ತಿದ್ದಾರೆ. ಅಲ್ಲದೇ ಈ ಬಗ್ಗೆ ಕೇಂದ್ರ ಹಾಗೂ ರಾಜ್ಯ ಚುನಾವಣಾ ಆಯೋಗಕ್ಕೆ ದೂರು ನೀಡುವುದಾಗಿ ಬೊಮ್ಮಾಯಿ ತಿಳಿಸಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಹಾವೇರಿ | ಗಣೇಶ ಚತುರ್ಥಿ ಪ್ರಯುಕ್ತ 265 ಹೆಚ್ಚುವರಿ ಸಾರಿಗೆ ಸೌಲಭ್ಯ

ಚತುರ್ಥಿಯ ಪ್ರಯುಕ್ತ ಸಾರ್ವಜನಿಕರು ತಮ್ಮ ಸ್ವಂತ ಊರುಗಳಿಗೆ ತೆರಳಲು ಅನುಕೂಲವಾಗುವಂತೆ ವಾಯವ್ಯ...

ಬ್ರ್ಯಾಂಡ್ ಕರಾವಳಿ ಹೆಸರಲ್ಲಿ ಅಭಿವೃದ್ಧಿಗೆ ಒತ್ತು ನೀಡಬೇಕು – ಸಚಿವೆ ಲಕ್ಷ್ಮೀ ಹೆಬ್ಬಾಳಕರ್

ಕರಾವಳಿ ಜಿಲ್ಲೆಗಳಾದ ಉಡುಪಿ, ದಕ್ಷಿಣ ಕನ್ನಡ ಹಾಗೂ ಉತ್ತರ ಕನ್ನಡ ಜಿಲ್ಲೆಗಳಲ್ಲಿ...

ಗದಗ | ಆಗಸ್ಟ್ 25ಕ್ಕೆ ಲೋಕಾಯುಕ್ತ ಜನ ಸಂಪರ್ಕ ಸಭೆ

ಸಾರ್ವಜನಿಕ ಕುಂದು-ಕೊರತೆಗಳ ಅಹವಾಲು ಸ್ವೀಕರಿಸಲು ಆಗಸ್ಟ್ 25 ಸೋಮವಾರದಂದು  ಗದಗ ಶಿರಹಟ್ಟಿ...

ಬೀದರ್‌ | ಅತಿವೃಷ್ಟಿ : ತ್ವರಿತ ಬೆಳೆ ಹಾನಿ ಪರಿಹಾರಕ್ಕೆ ಕಿಸಾನ್‌ ಸಭಾ ಒತ್ತಾಯ

ಮೇ ತಿಂಗಳಿಂದ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ಉದ್ದು, ಹೆಸರು, ತೊಗರಿ ಸೇರಿದಂತೆ ಹಲವು...

Download Eedina App Android / iOS

X