ಹಿಂದು ಮಹಾ ಸಾಗರದಿಂದ ಬಂಗಾಳ ಕೊಲ್ಲಿ ಎಡೆಗೆ ಮತ್ತೊಂದು ಚಂಡಮಾರುತ ಬೀಸುತ್ತಿದ್ದು, ಕರ್ನಾಟಕವೂ ಸೇರಿದಂತೆ ಕರಾವಳಿ ರಾಜ್ಯಗಳಲ್ಲಿ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ನವೆಂಬರ್ 14ರಿಂದ ರಾಜ್ಯದಲ್ಲಿ ಭಾರೀ ಮಳೆಯಾಗಲಿದೆ ಎಂದು ಹೇಳಿರುವ ಹವಾಮಾನ ಇಲಾಖೆ, ಚಾಮರಾಜನಗರ, ಮೈಸೂರು, ಕೊಡಗು, ಚಿಕ್ಕಮಗಳೂರು, ಶಿವಮೊಗ್ಗ – ಐದು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಿದೆ.
ಈ ಜಿಲ್ಲೆಗಳಲ್ಲದೆ, ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಬೆಳಗಾವಿ, ವಿಜಯಪುರ, ಗದಗ, ಬಾಗಲಕೋಟೆ, ಧಾರವಾಡ, ಚಿತ್ರದುರ್ಗ, ದಾವಣಗೆರೆ, ಹಾವೇರಿ, ವಿಜಯನಗರ, ಕೊಪ್ಪಳ, ಕಲಬುರಗಿ, ರಾಯಚೂರು, ಯಾದಗಿರಿ, ಬೀದರ್, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಕೋಲಾರ, ತುಮಕೂರು, ಹಾಸನ, ಮಂಡ್ಯ, ರಾಮನಗರ ಜಿಲ್ಲೆಗಳಲ್ಲಿಯೂ ಮಳೆಯಾಗಲಿದೆ ಎಂದು ಇಲಾಖೆ ತಿಳಿಸಿದೆ.
ಮಂಗಳವಾರವೂ ಬೆಂಗಳೂರಿನಲ್ಲಿ ಮೋಡಕವಿದ ವಾತಾವರಣವಿದ್ದು, ಮಳೆಯಾಗುವ ಸಂಭವವಿದೆ.