ಖ್ಯಾತ ನೇತ್ರತಜ್ಞ ಭುಜಂಗ ಶೆಟ್ಟಿ ನಿಧನ

Date:

Advertisements
  • ಭುಜಂಗ ಶೆಟ್ಟಿ ತಮ್ಮ ನೇತ್ರಗಳನ್ನು ದಾನ ಮಾಡಿದ್ದಾರೆ
  • ಕಣ್ಣಿನ ಪೊರೆ ಶಸ್ತ್ರಚಿಕಿತ್ಸೆಯಲ್ಲಿ ಅವರು ನಿಪುಣರಾಗಿದ್ದರು

ಖ್ಯಾತ ನೇತ್ರ ತಜ್ಞ ಮತ್ತು ನಾರಾಯಣ ನೇತ್ರಾಲಯದ ಅಧ್ಯಕ್ಷರೂ ಆಗಿದ್ದ ಡಾ. ಕೆ ಭುಜಂಗ ಶೆಟ್ಟಿ ಅವರು ಹೃದಯಾಘಾತದಿಂದ ಶುಕ್ರವಾರ ರಾತ್ರಿ ನಿಧನರಾಗಿದ್ದಾರೆ.

ಭುಜಂಗ ಶೆಟ್ಟಿ(69) ನಾರಾಯಣ ನೇತ್ರಾಲಯದಲ್ಲಿ ಕರ್ತವ್ಯ ನಿರ್ವಹಿಸಿ, ಸಂಜೆ ಮನೆಗೆ ತೆರಳಿದ್ದರು. ವ್ಯಾಯಾಮದ ಬಳಿಕ ಎದೆಯಲ್ಲಿ ನೋವು ಕಾಣಿಸಿಕೊಂಡ ಕಾರಣ ಅವರನ್ನು ಯಶವಂತಪುರದ ಕೊಲಂಬಿಯಾ ಏಷಿಯಾ ಆಸ್ಪತ್ರೆಯಲ್ಲಿ ದಾಖಲಿಸಲಾಗಿತ್ತು.

ಆಸ್ಪತ್ರೆಗೆ ಕರೆತರುವ ವೇಳೆ ಹೃದಯ ಬಡಿತ ನಿಂತಿತ್ತು. ಆಸ್ಪತ್ರೆಯಲ್ಲಿ ಸಿಪಿಆರ್​​ ಮಾಡಿದ್ದರೂ ಪ್ರಯೋಜನವಾಗಲಿಲ್ಲ. ಸದ್ಯ ಮೃತದೇಹ ಇನ್ನೂ ಕೊಲಂಬಿಯಾ ಏಷಿಯಾ ಆಸ್ಪತ್ರೆಯಲ್ಲಿದೆ ಎನ್ನಲಾಗಿದೆ. ಶನಿವಾರ ಬೆಳಿಗ್ಗೆ 11ರಿಂದ ಮಧ್ಯಾಹ್ನ 2 ಗಂಟೆವರೆಗೆ ರಾಜಾಜಿನಗರದ ನಾರಾಯಣ ನೇತ್ರಾಲಯದಲ್ಲಿ ಸಾರ್ವಜನಿಕ ದರ್ಶನಕ್ಕೆ ಅವಕಾಶ ಇರಲಿದೆ. ಭುಜಂಗ ಶೆಟ್ಟಿಯವರು ತಮ್ಮ ನೇತ್ರಗಳನ್ನು ದಾನ ಮಾಡಿದ್ದಾರೆ.

Advertisements

ನಾರಾಯಣ ನೇತ್ರಾಲಯವನ್ನು ಕರ್ನಾಟಕದ ಅತಿದೊಡ್ಡ ಸೂಪರ್ ಸ್ಪೆಷಾಲಿಟಿ ಕಣ್ಣಿನ ಆಸ್ಪತ್ರೆಯಾಗಿ ಪರಿವರ್ತಿಸಲು ಅವರು ಕಾರಣರಾಗಿದ್ದಾರೆ. ಕಣ್ಣಿನ ಪೊರೆ ಶಸ್ತ್ರಚಿಕಿತ್ಸೆಯಲ್ಲಿ ಅವರು ನಿಪುಣರಾಗಿದ್ದರು.

ನಾರಾಯಣ ನೇತ್ರಾಲಯದಲ್ಲಿ ಹಲವು ಉಪವಿಭಾಗಗಳ ಅಭಿವೃದ್ಧಿಯನ್ನು ಸಕ್ರಿಯವಾಗಿ ಪ್ರೋತ್ಸಾಹಿಸಿದ್ದಾರೆ. ನಾರಾಯಣ ನೇತ್ರಾಲಯವನ್ನು ಕರ್ನಾಟಕದ ಅತಿದೊಡ್ಡ ಸೂಪರ್ ಸ್ಪೆಷಾಲಿಟಿ ಕಣ್ಣಿನ ಆಸ್ಪತ್ರೆಯಾಗಿ ಪರಿವರ್ತಿಸಲು ಕಾರಣರಾಗಿದ್ದರು.

ಈ ಸುದ್ದಿ ಓದಿದ್ದೀರಾ?: ಕಲಬುರಗಿ ವಿಮಾನ ನಿಲ್ದಾಣದಲ್ಲಿ ರಾತ್ರಿ ಲ್ಯಾಂಡಿಂಗ್ ಸೌಲಭ್ಯಕ್ಕೆ ಡಿಜಿಸಿಎ ಅನುಮತಿ

ರಿವರ್ಸ್ ಡಯಾಬಿಟೀಸ್ ಅಳವಡಿಸಿಕೊಂಡು ತಮ್ಮ ದೇಹವನ್ನೇ ಪ್ರಯೋಗಕ್ಕೆ ಗುರಿಪಡಿಸುವ ಮೂಲಕ ಮಧುಮೇಹವನ್ನು ಸಂಪೂರ್ಣವಾಗಿ ಡಾ. ಭುಜಂಗಶೆಟ್ಟಿ ಅವರು ಗೆದ್ದಿದ್ದರು. ರಿವರ್ಸ್ ಡಯಾಬಿಟೀಸ್ ಅಳವಡಿಸಿಕೊಳ್ಳುವಂತೆ ಅನೇಕರಿಗೆ ಅವರು ಸಲಹೆ ನೀಡಿದ್ದರು. ‘ರಿಸರ್‍ವಿಂಗ್ ಡಯಾಬಿಟಿಸ್’ ಎಂಬ ಕ್ಲಿನಿಕ್ ಸಹ ತೆರೆದಿದ್ದರು.

1978 ರಲ್ಲಿ ಬೆಂಗಳೂರು ವೈದ್ಯಕೀಯ ಕಾಲೇಜಿನಲ್ಲಿ ಎಂಬಿಬಿಎಸ್ ಮಾಡಿದ್ದರು. 1982 ರಲ್ಲಿ ಬೆಂಗಳೂರು ವೈದ್ಯಕೀಯ ಕಾಲೇಜಿನ ಮಿಂಟೋ ಆಪ್ತಾಲ್ಮಿಕ್ ಆಸ್ಪತ್ರೆಯಲ್ಲಿ ನೇತ್ರಶಾಸ್ತ್ರದಲ್ಲಿ ರೆಸಿಡೆನ್ಸಿ ತರಬೇತಿ ಪಡೆದಿದ್ದರು. 80ರ ದಶಕದಲ್ಲಿ ಸಣ್ಣ ಕ್ಲಿನಿಕ್‌ನಲ್ಲಿ ನೇತ್ರ ಚಿಕಿಯ್ಸಾಲಯವನ್ನು ಪ್ರಾರಂಭಿಸಿದರು. ಅದಾದ ನಂತರ ನಾರಾಯಣ ನೇತ್ರಾಲಯದ ಅಧ್ಯಕ್ಷರಾಗಿದ್ದರು. 

ಭುಜಂಗ ಶೆಟ್ಟಿಯವರ ಸತತ ಪ್ರಯತ್ನ ಮತ್ತು ನೇತ್ರ ದಾನದ ಬಗ್ಗೆ ಜಾಗೃತಿಯಿಂದಾಗಿ 71,538 ಕ್ಕೂ ಹೆಚ್ಚು ಜನರಿಗೆ ದೃಷ್ಟಿ ಭಾಗ್ಯ ಕಲ್ಪಿಸಿದ್ದಾರೆ. 15,254 ನೇತ್ರ ದಾನವಾಗಿದೆ. ಕರ್ನಾಟಕದಲ್ಲಿ ಕಾರ್ನಿಯಲ್ ಕುರುಡುತನ ಗಣನೀಯವಾಗಿ ಕಡಿಮೆ ಮಾಡಿದ್ದರು.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಯಾದಗಿರಿ | ಅತಿವೃಷ್ಟಿಯಿಂದ ಬೆಳೆ ಹಾನಿ: ರೈತರಿಗೆ ಪರಿಹಾರ ನೀಡುವಂತೆ ಆಗ್ರಹ

ಯಾದಗಿರಿ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ಬೆಳೆ ಹಾನಿದ ರೈತರಿಗೆ ಸಮೀಕ್ಷೆ ನಡೆಸಿ ಶೀಘ್ರದಲ್ಲಿ...

ಗುಬ್ಬಿ | ಜನಪದ ಸಾಹಿತ್ಯ ಎಂದೆಂದಿಗೂ ಜೀವಂತ : ಡಾ.ಮೂರ್ತಿ ತಿಮ್ಮನಹಳ್ಳಿ

ಕನ್ನಡ ಸಾಹಿತ್ಯ ಲೋಕದಲ್ಲಿ ಹಲವು ಪ್ರಕಾರಗಳ ಪೈಕಿ ಜನಪದ ಸಾಹಿತ್ಯ...

ಉಡುಪಿ | ಮಹೇಶ್‌ ಶೆಟ್ಟಿ ತಿಮರೋಡಿ ಬೆಂಬಲಿಗರ ಕಾರು ಪೊಲೀಸ್‌ ಅಧೀಕ್ಷರಕ ಕಾರಿಗೆ ಡಿಕ್ಕಿ !

ಬೆಳ್ತಂಗಡಿಯ ಸೌಜನ್ಯ ಪರ ಹೋರಾಟಗಾರ ಮಹೇಶ್‌ ಶೆಟ್ಟಿ ತಿಮರೋಡಿಯವರನ್ನು ಬ್ರಹ್ಮಾವರ ಪೊಲೀಸ್...

ಚಿಕ್ಕಮಗಳೂರು l ಸಮಾಜದಲ್ಲಿ ಜಾತಿ,ಧರ್ಮಗಳ ಕಂದಕದ ಗೋಡೆಗಳನ್ನು ತೊಡೆದು ಹಾಕುವುದೇ ನಿಜವಾದ ಸಾಹಿತ್ಯ; ಸಾಹಿತಿ ಮನಸುಳಿ ಮೋಹನ್‌

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ತಾಲ್ಲೂಕು ಸಮಿತಿ...

Download Eedina App Android / iOS

X