ಮಂಡ್ಯ | ಬೆಟ್ಟಿಂಗ್ ದಂಧೆ ವಿರುದ್ಧ ಜನಪರ ಸಂಘಟನೆಗಳಿಂದ ಪೋಸ್ಟರ್ ಅಭಿಯಾನ

Date:

Advertisements

ಮಂಡ್ಯದ ಎಲ್ಲ ಜನಪರ ಸಂಘಟನೆಗಳು ಒಗ್ಗಟ್ಟಿನಿಂದ ಮಾಡುತ್ತಿರುವ ಬೆಟ್ಟಿಂಗ್ ದಂಧೆ ವಿರುದ್ಧ ಪೋಸ್ಟರ್ ಅಭಿಯಾನದ ಉದ್ದೇಶ ಸಮಾಜಕ್ಕೆ ಪೂರಕವಾಗಿದ್ದು, ಸಹಾಯವಾಣಿಗೆ ಬರುವ ದೂರುಗಳನ್ನು ಗಂಭೀರವಾಗಿ ಪರಿಗಣಿಸಿ, ದಂಧೆ ಮಾಡುವವರ ಮೇಲೆ ಪೊಲೀಸ್ ಇಲಾಖೆ ಕ್ರಮ ಜರುಗಿಸಲಿದೆ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಮಲ್ಲಿಕಾರ್ಜುನ ಬಾಲದಂಡಿ ಹೇಳಿದರು.

ಮಂಡ್ಯದ ಜನಪರ ಸಂಘಟನೆಗಳು ರೂಪಿಸಿರುವ ಬೆಟ್ಟಿಂಗ್ ಸಹಾಯವಾಣಿ ಪೋಸ್ಟರ್‌ ಬಿಡುಗಡೆ ಮಾಡಿ ಮಾತನಾಡಿದರು.

ಕರ್ನಾಟಕ ಜನಶಕ್ತಿ ಸಂಘಟನೆಯ ರಾಜ್ಯ ಕಾರ್ಯದರ್ಶಿ ಜಿ. ಪೂರ್ಣಿಮಾ ಮಾತನಾಡಿ, “ಪೊಲೀಸ್ ಇಲಾಖೆ ಬೆಟ್ಟಿಂಗ್ ನಿಯಂತ್ರಿಸಲು ಸಹಾಯವಾಣಿ ಆರಂಭಿಸಿದೆ. ಯುವಜನರನ್ನು ದಿಕ್ಕುತಪ್ಪಿಸುತ್ತಿರುವ ಶಕ್ತಿಗಳನ್ನು ಮಟ್ಟಹಾಕುವ ಸಲುವಾಗಿ ಈಗ ಪೋಸ್ಟರ್ ಅಭಿಯಾನ ಆರಂಭಿಸುತ್ತಿದ್ದೇವೆ. ಎಲ್ಲ ಸಮಾನ ಮನಸ್ಕ ಗೆಳೆಯರು ಜತೆಯಾಗಿ ಬೆಟ್ಟಿಂಗ್ ಮುಕ್ತ ಮಂಡ್ಯ ನಿರ್ಮಾಣಕ್ಕೆ ಕೈ ಜೋಡಿಸಿ” ಎಂದು ಕರೆ ನೀಡಿದರು.

Advertisements

ಅಖಿಲ ಭಾರತ ವಕೀಲರ ಸಂಘದ ಬಿ ಟಿ ವಿಶ್ವನಾಥ್ ಮಾತನಾಡಿ, “ಮಂಡ್ಯ ಜಿಲ್ಲಾದ್ಯಂತ ಜನಜಾಗೃತಿ ಮೂಡಿಸಲು ಮೂರು ಸಾವಿರ ಪೋಸ್ಟರ್ ಮತ್ತು ಏಳು ಸಾವಿರ ಕರಪತ್ರಗಳನ್ನು ಹಂಚುತ್ತಿದ್ದೇವೆ. ಸಮಾಜದ ಹಿತ ಬಯಸುವವರು ಈ ಪೋಸ್ಟರನ್ನು ಪ್ರಿಂಟ್ ತೆಗೆದುಕೊಂಡು, ನಿಮ್ಮ ಹೆಸರು, ಸಂಘ ಸಂಸ್ಥೆಯ ಹೆಸರಿನಲ್ಲಿ ಮುದ್ರಿಸಿ ಶಾಲಾ ಕಾಲೇಜುಗಳಲ್ಲಿ ಮತ್ತು ನಿಮ್ಮ ನಿಮ್ಮ ಊರುಗಳಲ್ಲಿ ಮುಕ್ತವಾಗಿ ಹಂಚಬಹುದು” ಎಂದು ಹೇಳಿದರು.

ಕರುನಾಡ ಸೇವಕರು ಸಂಘಟನೆಯ ಎಂ ಬಿ ನಾಗಣ್ಣಗೌಡ ಮಾತನಾಡಿ, “ಜಿಲ್ಲೆಯ ಎಲ್ಲ ಗ್ರಾಮ ಪಂಚಾಯತ್ ಕಚೇರಿಗಳು, ಪೊಲೀಸ್ ಸ್ಟೇಷನ್‌ಗಳು ಮತ್ತು ಸಾರ್ವಜನಿಕ ಆಸ್ಪತ್ರೆಗಳ ಜತೆಗೆ ಯುವಜನರು ಹೆಚ್ಚಾಗಿ ಒಂದೆಡೆ ಸೇರುವ ಶಾಲಾ ಕಾಲೇಜು, ಕ್ರೀಡಾಂಗಣ, ಬಸ್ ನಿಲ್ದಾಣ, ಟೀ ಶಾಪ್‌ಗಳಲ್ಲಿ ಈ ಪೋಸ್ಟರ್ ಅಂಟಿಸಿ, ಜಾಗೃತಿ ಮೂಡಿಸುವುದರಿಂದ ಬದಲಾವಣೆ ಸಾಧ್ಯವಿದೆ. ನಮ್ಮೊಂದಿಗೆ ಕೈ ಜೋಡಿಸಿ” ಎಂದು ಮನವಿ ಮಾಡಿದರು.

ಈ ಸುದ್ದಿ ಓದಿದ್ದೀರಾ? ಮಂಡ್ಯ | ಲಂಚ ಪಡೆಯುತ್ತಿದ್ದ ಗ್ರಾಪಂ ಸದಸ್ಯ ಲೋಕಾಯುಕ್ತ ಬಲೆಗೆ

ಕರ್ನಾಟಕ ರಾಜ್ಯ ರೈತ ಸಂಘದ ತಾಲೂಕು ಅಧ್ಯಕ್ಷ ಶಿವಳ್ಳಿ ಚಂದ್ರು ಮಾತನಾಡಿ, “ಹಳ್ಳಿಗಳ ರೈತರ ಮಕ್ಕಳ ಆತ್ಮಹತ್ಯೆಗಳು ಬಹುತೇಕ ಬೆಟ್ಟಿಂಗ್, ಇಸ್ಪೀಟ್ ದಂಧೆಗಳಿಂದ ನಡೆಯುತ್ತಿದ್ದು, ಪೊಲೀಸ್ ಇಲಾಖೆ ಆರಂಭಿಸಿರುವ ಸಹಾಯವಾಣಿಗೆ ದೂರು ನೀಡುವ ಕೆಲಸವನ್ನು ರೈತಸಂಘವೂ ಮಾಡಲಿದೆ. ಕ್ರಮ ಜರುಗಿಸುವ ಹೊಣೆಗಾರಿಕೆ ಪೊಲೀಸರದಾಗಿದೆ” ಎಂದು ಹೇಳಿದರು.

ಸಿಐಟಿಯು ಸಂಘಟನೆ ಸಿ ಕುಮಾರಿ, ಕರ್ನಾಟಕ ರಕ್ಷಣಾ ವೇದಿಕೆಯ ಜಯರಾಮ್, ಮಹಿಳಾ ಮುನ್ನಡೆಯ ಶಿಲ್ಪ ಸೇರಿದಂತೆ ಹತ್ತಾರು ಸಂಘಟನೆಗಳ ಮುಖಂಡರು ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬಾಗಲಕೋಟೆ | ಬೀದಿ ನಾಯಿಗಳ ಹಾವಳಿ; ಶೀಘ್ರ ಕ್ರಮಕ್ಕೆ ಡಿಸಿ ಸಂಗಪ್ಪ ಸೂಚನೆ

ಬಾಗಲಕೋಟೆ ಜಿಲ್ಲೆಯ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲಿನ ಬೀದಿನಾಯಿಗಳ ಹಾವಳಿಯಿಂದ ಸಾರ್ವಜನಿಕರು ಹಾಗೂ...

ಶಿವಮೊಗ್ಗ | ಡಿ.ಎ.ಆರ್.ಸಭಾಂಗಣದಲ್ಲಿ ಜಿಲ್ಲಾಧಿಕಾರಿ ನೇತೃತ್ವದಲ್ಲಿ ಶಾಂತಿ ಸಮಿತಿ ಸಭೆ

ಎಲ್ಲಾ ಧರ್ಮದವರು ಹಬ್ಬಗಳನ್ನು ಸಡಗರ-ಸಂಭ್ರಮಗಳಿಂದ ಆಚರಿಸುವಂತೆ ಜಿಲ್ಲಾಧಿಕಾರಿ ಗುರುದತ್ ಹೆಗಡೆ ಕರೆ...

ಬಾಗೇಪಲ್ಲಿ | ನೋಟಿಸ್ ನೀಡದೇ ಕೆಲಸದಿಂದ ತೆಗೆದ ಗಾರ್ಮೆಂಟ್ ಫ್ಯಾಕ್ಟರಿ; ಪ್ರತಿಭಟನೆಗಿಳಿದ ಮಹಿಳಾ ನೌಕರರು

ಬಾಗೇಪಲ್ಲಿ ತಾಲೂಕಿನ ಹೊರವಲಯದ ರಾಷ್ಟ್ರೀಯ ಹೆದ್ದಾರಿ ನಾರೇಪಲ್ಲಿ ಟೋಲ್ ಗೇಟ್ ಬಳಿ...

ಧಾರವಾಡ | ಹಾಳುಬಿದ್ದ ಸಂಶಿ ಎಪಿಎಂಸಿ; ವಾರದ ಸಂತೆ ಸ್ಥಳಾಂತರಿಸಲು ಒತ್ತಾಯ

ಸರ್ಕಾರದ ಮಟ್ಟದಲ್ಲಿ ಆಗುವ ಯೋಜನೆಗಳ ಅನುಷ್ಠಾನ ಮಾಡುವಲ್ಲಿ ನಿರ್ಲಕ್ಷ್ಯ ವಹಿಸುವುದರಿಂದ ಇತ್ತ...

Download Eedina App Android / iOS

X