ಕಾಮಗಾರಿಯಲ್ಲಿ ಮುಸ್ಲಿಂ ಮೀಸಲಾತಿ | ಸುಳ್ಳು ಹೇಳುವ ಸಿದ್ದರಾಮಯ್ಯರ ಭಂಡತನಕ್ಕೆ ಏನು ಹೇಳೋಣ: ಆರ್‌ ಅಶೋಕ್

Date:

Advertisements

ಎಡವಟ್ಟು ಮಾಡೋದು, ಆಮೇಲೆ ಸುಳ್ಳು ಹೇಳೋದು ಇದೇ ಸಿಎಂ ಸಿದ್ದರಾಮಯ್ಯ ಅವರ ದಿನಚರಿ! ಸ್ವಾಮಿ ಮುಖ್ಯಮಂತ್ರಿಗಳೇ, ಗುತ್ತಿಗೆ ಕಾಮಗಾರಿಗಳಲ್ಲಿ ಮುಸ್ಲಿಮರಿಗೆ ಮೀಸಲಾತಿ ನೀಡುವ ಪ್ರಸ್ತಾವನೆಯೇ ಸರ್ಕಾರದ ಮುಂದಿಲ್ಲ ಎಂದು ಸತ್ಯದ ತಲೆಯ ಮೇಲೆ ಹೊಡೆದ ಹಾಗೆ ಸುಳ್ಳು ಹೇಳುತ್ತೀರಲ್ಲಾ, ತಮ್ಮ ಭಂಡತನಕ್ಕೆ ಏನು ಹೇಳೋಣ ಎಂದು ಪ್ರತಿಪಕ್ಷ ನಾಯಕ ಆರ್‌ ಅಶೋಕ್‌ ಪ್ರಶ್ನಿಸಿದ್ದಾರೆ.

“ಕಾಮಗಾರಿಯಲ್ಲಿ ಮುಸ್ಲಿಮರಿಗೆ ಮೀಸಲಾತಿ ನೀಡುವ ಪ್ರಸ್ತಾವನೆ ಸರ್ಕಾರದ ಮುಂದೆ ಎಂಬ ವರದಿ ಕೆಲ ಮಾಧ್ಯಮಗಳಲ್ಲಿ ಪ್ರಕಟವಾಗಿದೆ. ಮೀಸಲಾತಿ ನೀಡಬೇಕೆಂಬ ಬೇಡಿಕೆ ಬಂದಿರುವುದು ನಿಜ. ಆದರೆ, ಈ ಕುರಿತು ಸರ್ಕಾರದ ಮುಂದೆ ಯಾವುದೇ ಪ್ರಸ್ತಾವನೆ ಇಲ್ಲ” ಮಂಗಳವಾರ ಬೆಳಿಗ್ಗೆ ಸಿಎಂ ಸಿದ್ದರಾಮಯ್ಯ ಅವರು ಸ್ಪಷ್ಟಪಡಿಸಿದ್ದರು.

ಸಿದ್ದರಾಮಯ್ಯ ಅವರ ಈ ಸ್ಪಷ್ಟನೆಗೆ ಎಕ್ಸ್‌ ತಾಣದಲ್ಲಿ ಪ್ರತಿಕ್ರಿಯಿಸಿರುವ ಆರ್‌ ಅಶೋಕ್‌ ಅವರು, “ಗುತ್ತಿಗೆ ಕಾಮಗಾರಿಗಳಲ್ಲಿ ಮುಸ್ಲಿಮರಿಗೆ 4% ಮೀಸಲಾತಿ ಕೊಡಬೇಕು ಎಂದು ತಮ್ಮ ರಾಜಕೀಯ ಕಾರ್ಯದರ್ಶಿ ನಸೀರ್ ಅಹ್ಮದ್, ಸಚಿವ ಜಮೀರ್ ಅಹ್ಮದ್ ಖಾನ್ ಸೇರಿದಂತೆ ಮುಸ್ಲಿಂ ಶಾಸಕರು ಆಗಸ್ಟ್ 24, 2024 ರಂದು ತಮಗೆ ಪತ್ರ ಬರೆಯುತ್ತಾರೆ. ತಾವು ಅದೇ ದಿನವೇ ಈ ಪತ್ರವನ್ನ ಪರಿಶೀಲಿಸಿ ಮಂಡಿಸಿ ಎಂದು ಆರ್ಥಿಕ ಇಲಾಖೆಗೆ ನಿರ್ದೇಶನ ನೀಡಿದ್ದೀರಿ. ಈ ಸಂಬಂಧ ಕೆಟಿಪಿಪಿ ಕಾಯ್ದೆಗೆ ತಿದ್ದುಪಡಿ ತರಲೂ ಸಹ ತಾವು ಅನುಮೋದನೆ ನೀಡಿದ್ದೀರಿ” ಎಂದು ಪತ್ರವನ್ನು ಲಗತ್ತಿಸಿದ್ದಾರೆ.

Advertisements

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಸಾರ್ವಜನಿಕ ಸಂಯಮವೂ, ಸುದ್ದಿ ಮಾಧ್ಯಮಗಳೂ

“ಮೀಸಲಾತಿ ಬಗ್ಗೆ ಪತ್ರ ವ್ಯವಹಾರ ನಡೆದಿದ್ದರೂ ಗುತ್ತಿಗೆ ಕಾಮಗಾರಿಗಳಲ್ಲಿ ಮುಸ್ಲಿಮರಿಗೆ ಮೀಸಲಾತಿ ನೀಡುವ ಪ್ರಸ್ತಾವನೆಯೇ ಸರ್ಕಾರದ ಮುಂದಿಲ್ಲ ಎಂದು ಹಸಿ ಸುಳ್ಳು ಹೇಳುತ್ತೀರಲ್ಲ, ತಮಗೆ ಕಿಂಚಿತ್ತಾದರೂ ಆತ್ಮಸಾಕ್ಷಿ, ನೈತಿಕತೆ ಅನ್ನುವುದೇ ಇಲ್ಲವೇ? ಸತ್ಯದ ಮೇಲೆ ಪ್ರಮಾಣ ವಚನ ಸ್ವೀಕರಿಸಿ, ಬಾಯಿ ಬಿಟ್ಟರೆ ಬರಿ ಸುಳ್ಳು ಹೇಳುವ ತಮ್ಮನ್ನು ಆ ತಾಯಿ ಚಾಮುಂಡೇಶ್ವರಿ ಮೆಚ್ಚುತ್ತಾಳಾ? ತಮ್ಮನ್ನು ನಂಬಿ ಮತ ಹಾಕಿ ಅಧಿಕಾರ ಕೊಟ್ಟ ಕನ್ನಡಿಗರು ಕ್ಷಮಿಸುತ್ತಾರಾ?” ಎಂದು ಕುಟುಕಿದ್ದಾರೆ.

https://twitter.com/RAshokaBJP/status/1856258327598035440
eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

1 COMMENT

  1. ಅದು ಸಿದ್ದರಾಮಯ್ಯ ಭಂಡತನ ಅಲ್ಲ ವಿರೋಧ ಪಕ್ಷದ ನಾಯಕರೆ,, ಮುಸ್ಲಿಂ ದ್ವೇಷವನ್ನು ನೀವು ರಾಜಕೀಯ ಸ್ಟ್ರಾಟೆಜಿ ಮಾಡಿಕೊಂಡು,, ನಿಮ್ಮನ್ನು ಚುನಾಯಿಸಿದ ಜನರ ಸುಖದುಃಖಗಳನ್ನು ವಿಚಾರಿಸುವುದನ್ನು ಸಂಪೂರ್ಣವಾಗಿ ಮರೆತ ನಿಮಗೆ,, ಅಂಥದೇ ಇನ್ನೊಂದು ವಿಷಯ ಕೊಟ್ಟು ನಿಮ್ಮನ್ನು ಬ್ಯೂಸಿ ಇಡುವ ಪ್ರಯತ್ನ ಮಾಡುತ್ತಿದ್ದಾರೆ,,ಕಳೆದ ಹತ್ತು ವರ್ಷಗಳ ದುರಾಡಳಿತದಲ್ಲಿ ಬೆಲೆಯೇರಿಕೆ ನಿರುದ್ಯೋಗ ಐತಿಹಾಸಿಕ ದಾಖಲೆ ನಿರ್ಮಿಸಿದೆ ಆದರೂ ಬಾಯಿಬಿಡದೇ ಜನರಿಗೆ ಮೋಸ ಮಾಡುತ್ತಿರುವಿರಿ,,,

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಸರಾ ಉದ್ಘಾಟನೆಗೆ ಸೋನಿಯಾ ಗಾಂಧಿಗೆ ಆಹ್ವಾನ ಸಂಪೂರ್ಣ ಸುಳ್ಳು: ಸಿಎಂ ಸಿದ್ದರಾಮಯ್ಯ ಸ್ಪಷ್ಟನೆ

ಈ ಬಾರಿಯ ದಸರಾ ಉದ್ಘಾಟನೆಗೆ ಕಾಂಗ್ರೆಸ್ ಅಧಿನಾಯಕಿ ಸೋನಿಯಾ ಗಾಂಧಿಯನ್ನು ಆಹ್ವಾನಿಸಲಾಗಿದೆ...

BREAKING NEWS | ಬೆಂಗಳೂರು ನಗರ ಸಿವಿಲ್ ನ್ಯಾಯಾಲಯಕ್ಕೆ ಬಾಂಬ್​ ಬೆದರಿಕೆ ಇಮೇಲ್

ಬೆಂಗಳೂರು ನಗರ ಸಿವಿಲ್ ನ್ಯಾಯಾಲಯಕ್ಕೆ ಬಾಂಬ್​ ಬೆದರಿಕೆ ಇಮೇಲ್ ಬಂದಿದೆ ಎಂದು...

ಬಿಜೆಪಿ-ಆರ್‌ಎಸ್‌ಎಸ್‌ ಜತೆ ಕೈ ಜೋಡಿಸುವ ಪ್ರಶ್ನೆಯೇ ಇಲ್ಲ: ಡಿಸಿಎಂ ಡಿ.ಕೆ.ಶಿವಕುಮಾರ್

ನಾನು ಅಪ್ಪಟ ಕಾಂಗ್ರೆಸ್ಸಿಗ. ಹುಟ್ಟಿನಿಂದ ಕಾಂಗ್ರೆಸ್ಸಿಗ. ಜೀವ ಇರುವ ತನಕವೂ ಕಾಂಗ್ರೆಸ್ಸಿಗನಾಗಿಯೇ...

Download Eedina App Android / iOS

X