ರಾಜ್ಯದ ಚನ್ನಪಟ್ಟಣ, ಸಂಡೂರು ಹಾಗೂ ಶಿಗ್ಗಾಂವಿ ವಿಧಾನಸಭಾ ಕ್ಷೇತ್ರಗಳಲ್ಲಿ ನ.12ರುಂದು ಉಪಚುನಾವಣೆ ನಡೆಯಲಿದೆ. ಈ ಹಿನ್ನೆಲೆಯಲ್ಲಿ ಈ ಕ್ಷೆತ್ರಗಳ ವ್ಯಾಪ್ತಿಯಲ್ಲಿ ಮತದಾನದ ಹಕ್ಕು ಹೊಂದಿರುವ ಸರ್ಕಾರಿ ನೌಕರರು ಮತ್ತು ಖಾಸಗಿ ಕಂಪನಿಗಳ ಉದ್ಯೋಗಿಗಳಿಗೆ ವೇತನ ಸಹಿತ ರಜೆ ಘೋಷಿಸಿ, ರಾಜ್ಯ ಸರ್ಕಾರ ಆದೇಶಿಸಿದೆ.
ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ ಇಲಾಖೆ ಅಧೀನ ಕಾರ್ಯದರ್ಶಿಗಳು ಈ ಸಂಬಂಧ ಪ್ರಕಟಣೆ ಹೊರಡಿಸಿದ್ದಾರೆ. “ಉಪಚುನಾವಣೆ ನಡೆಯಲಿರುವ ಮೂರು ಕ್ಷೇತ್ರಗಳ ವ್ಯಾಪ್ತಿಯ ಎಲ್ಲ ಸರ್ಕಾರಿ ಕಚೇರಿಗಳು, ಶಾಲಾ-ಕಾಲೇಜುಗಳು ಹಾಗೂ ರಾಷ್ಟ್ರೀಕೃತ ಬ್ಯಾಂಕುಗಳು, ಹಣಕಾಸು ಸಂಸ್ಥೆಗಳು ಹಾಗೂ ಇನ್ನಿತರ ಔದ್ಯಮಿಕ ಸಂಸ್ಥೆಗಳಲ್ಲಿ ಖಾಯಂ ಅಥವಾ ದಿನಗೂಲಿ ಮೇಲೆ ಕಾರ್ಯ ನಿರ್ವಹಿಸುತ್ತಿರುವ ಅರ್ಹ ಮತದಾರರಿಗೆ ವೇತನ ಸಹಿತ ರಜೆ ಮಂಜೂರು ಮಾಡಲಾಗಿದೆ” ಎಂದು ತಿಳಿಸಿದ್ದಾರೆ.