ರಾಜ್ಯದ 6,158 ಸರ್ಕಾರಿ ಶಾಲೆಗಳಲ್ಲಿ ಒಬ್ಬರೇ ಶಿಕ್ಷಕರು

Date:

Advertisements

ಕರ್ನಾಟಕದ ಸರ್ಕಾರಿ ಶಾಲೆಗಳ ಪೈಕಿ, ಸುಮಾರು 6,158 ಸರ್ಕಾರಿ ಶಾಲೆಗಳಲ್ಲಿ ತಲಾ ಒಬ್ಬರು ಶಿಕ್ಷಕರು ಮಾತ್ರವೇ ಇದ್ದಾರೆ. ಈ ಶಾಲೆಗಳಲ್ಲಿ ಒಟ್ಟು 1.38 ಲಕ್ಷ ವಿದ್ಯಾರ್ಥಿಗಳಿದ್ದು, ಅವರಿಗೆ ಪಾಠ ಕಲಿಸುವ ಜವಾಬ್ಧಾರಿ ಆಯಾ ಶಾಲೆಗಳ ಏಕೈಕ ಶಿಕ್ಷಕರ ಮೇಲಿದೆ. ಇದು, ಶಿಕ್ಷಣ ವ್ಯವಸ್ಥೆಯ ಅಸ್ಥಿರತೆ ಮತ್ತು ವಿದ್ಯಾರ್ಥಿಗಳ ಭವಿಷ್ಯಕ್ಕೆ ತೊಡಕಾಗಲಿದೆ ಎಂದು ಶಿಕ್ಷಣ ತಜ್ಞರು ಹೇಳುತ್ತಿದ್ದಾರೆ.

ಕಳೆದ ಶೈಕ್ಷಣಿಕ ವರ್ಷದಲ್ಲಿ (2023-24) ಏಕೈಕ ಶಿಕ್ಷಕರನ್ನು ಹೊಂದಿರುವ 6,360 ಶಾಲೆಗಳು ರಾಜ್ಯದಲ್ಲಿದ್ದವು. ಈ ವರ್ಷ (2024-25) ಈ ಶಾಲೆಗಳ ಸಂಖ್ಯೆ 6,158 ಇಳಿಕೆಯಾಗಿದೆ. ಕೆಲವು ಶಾಲೆಗಳಲ್ಲಿದ್ದ ಹೆಚ್ಚುವರಿ ಶಿಕ್ಷಕರನ್ನು ಏಕೈಕ ಶಿಕ್ಷಕರಿಸಿದ್ದ ಶಾಲೆಗಳಿಗೆ ವರ್ಗಾಯಿಸಲಾಗಿದೆ.

ಗಮನಾರ್ಹವೆಂದರೆ, ಈ ವರ್ಷ 530 ಶಾಲೆಗಳು ಶೂನ್ಯ ದಾಖಲಾತಿ ಹೊಂದಿವೆ. ಶಿಕ್ಷಕರ ಕೊರತೆಯು ವಿದ್ಯಾರ್ಥಿಗಳನ್ನು ಸರ್ಕಾರಿ ಶಾಲೆಗಳಿಂದ ದೂರ ಮಾಡುತ್ತಿದೆ.

Advertisements

ರಾಜ್ಯಾದ್ಯಂತ ಸುಮಾರು 5,000 ಶಿಕ್ಷಕರ ನೇಮಕಾತಿಗೆ ಶಿಕ್ಷಣ ಇಲಾಖೆ ಮುಂದಾಗಿದೆ ಎಂದು ಇಲಾಖೆಯ ಆಯುಕ್ತ ಕೆ.ವಿ ತ್ರಿಲೋಕಚಂದ್ರ ತಿಳಿಸಿದ್ದಾರೆ.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿತ್ರದುರ್ಗ | ವಿದ್ಯಾರ್ಥಿನಿ ಕೊಲೆ, ಬೆಂಕಿ ಹಚ್ಚಿ ಸುಟ್ಟ ಅಪರಾಧಿಗಳಿಗೆ ಗಲ್ಲುಶಿಕ್ಷೆ ವಿಧಿಸಲು ಎಸ್ ಎಫ್ ಐ ಆಗ್ರಹ

ಚಿತ್ರದುರ್ಗದ ಹೊರವಲಯದಲ್ಲಿರುವ ರಾಷ್ಟ್ರೀಯ ಹೆದ್ದಾರಿ ಬಳಿ ಹಿರಿಯೂರು ತಾಲೂಕಿನ 19 ವರ್ಷದ...

ಬೂಕರ್ ಪ್ರಶಸ್ತಿ ಪುರಸ್ಕೃತೆ ಬಾನು‌ ಮುಷ್ತಾಕ್‌ರಿಂದ ಮೈಸೂರು ದಸರಾ ಉದ್ಘಾಟನೆ: ಸಿಎಂ ಸಿದ್ದರಾಮಯ್ಯ

ಈ ಬಾರಿಯ 'ಮೈಸೂರು ದಸರಾ' ಉದ್ಘಾಟನೆಯನ್ನು ಬೂಕರ್ ಪ್ರಶಸ್ತಿ ವಿಜೇತೆ ಲೇಖಕಿ...

BREAKING NEWS | ಬೆಂಗಳೂರು ನಗರ ಸಿವಿಲ್ ನ್ಯಾಯಾಲಯಕ್ಕೆ ಬಾಂಬ್​ ಬೆದರಿಕೆ ಇಮೇಲ್

ಬೆಂಗಳೂರು ನಗರ ಸಿವಿಲ್ ನ್ಯಾಯಾಲಯಕ್ಕೆ ಬಾಂಬ್​ ಬೆದರಿಕೆ ಇಮೇಲ್ ಬಂದಿದೆ ಎಂದು...

ಬಿಜೆಪಿ-ಆರ್‌ಎಸ್‌ಎಸ್‌ ಜತೆ ಕೈ ಜೋಡಿಸುವ ಪ್ರಶ್ನೆಯೇ ಇಲ್ಲ: ಡಿಸಿಎಂ ಡಿ.ಕೆ.ಶಿವಕುಮಾರ್

ನಾನು ಅಪ್ಪಟ ಕಾಂಗ್ರೆಸ್ಸಿಗ. ಹುಟ್ಟಿನಿಂದ ಕಾಂಗ್ರೆಸ್ಸಿಗ. ಜೀವ ಇರುವ ತನಕವೂ ಕಾಂಗ್ರೆಸ್ಸಿಗನಾಗಿಯೇ...

Download Eedina App Android / iOS

X