ವಿದ್ಯಾರ್ಥಿನಿಗೆ ಅಶ್ಲೀಲ ಸಂದೇಶ ಹಾಗೂ ವಿಡಿಯೋ ಕಳುಹಿಸಿದ ಆರೋಪದ ಮೇಲೆ ಕಾಲೇಜು ಉಪನ್ಯಾಸಕನೊಬ್ಬ ಜೈಲು ಸೇರಿರುವ ಘಟನೆ ಮೈಸೂರಿನಲ್ಲಿ ನಡೆದಿದೆ.
“ತನ್ನ ಸಂದೇಶಗಳ ಬಗ್ಗೆ ಯಾರಿಗಾದರೂ ತಿಳಿಸಿದರೆ ಆಂತರಿಕ ಮೌಲ್ಯಮಾಪನದಲ್ಲಿ ಅನುತ್ತೀರ್ಣ ಆಗುವುದಾಗಿ ಉಪನ್ಯಾಸಕ ಬೆದರಿಕೆ ಹಾಕಿದ್ದಾನೆ. ಅವನು ಆಗಾಗ್ಗೆ ಅಶ್ಲೀಲ ಸಂದೇಶಗಳು ಮತ್ತು ವಿಡಿಯೋಗಳನ್ನು ಬಾಲಿಕಿಯ ಮೊಬೈಲ್ ಫೋನ್ ಸಂಖ್ಯೆಗೆ ಕಳುಹಿಸುತ್ತಿದ್ದು, ಅವಳಿಗೆ ಕಿರುಕುಳ ನೀಡುತ್ತಿದ್ದನು” ಎಂದು ಪೊಲೀಸರು ತಿಳಿಸಿದ್ದಾರೆ.
ಈ ಸುದ್ದಿ ಓದಿದ್ದೀರಾ? ಮೈಸೂರು | ಸಿಎಂ ಆಗಿ ಸಿದ್ದರಾಮಯ್ಯ ಆಯ್ಕೆ; ಸಾರ್ವಜನಿಕರಿಗೆ ಉಚಿತ ಹೋಳಿಗೆ ಊಟ
“ಬಾಲಕಿಯರು ಮತ್ತು ಮಹಿಳೆಯರನ್ನು ರಕ್ಷಿಸಲು ಪೊಲೀಸರು ಬದ್ಧರಾಗಿದ್ದಾರೆ. ಅವರಿಗೆ ಕಿರುಕುಳ ನೀಡುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು” ಎಂದು ಪೊಲೀಸ್ ಕಮಿಷನರ್ ರಮೇಶ್ ಬಾನೋತ್ ತಿಳಿಸಿದ್ದಾರೆ.