ಬೆಂಗಳೂರು | ಚೀನಾ ಮೂಲದ ಶಿಕ್ಷಣ ಸಂಸ್ಥೆ ಮೇಲೆ ಇ.ಡಿ ದಾಳಿ

Date:

Advertisements
  • ಹಣ ವರ್ಗಾವಣೆ ದಾಖಲೆಗಳ ಮಾಹಿತಿ ನೀಡದ ಶಿಕ್ಷಣ ಸಂಸ್ಥೆ
  • ಫೆಮಾ ಸೆಕ್ಷನ್ 37ಎ ಅಡಿಯಲ್ಲಿ ಹಣ ಜಪ್ತಿ; ಇ.ಡಿ ಹೇಳಿಕೆ

ಅಕ್ರಮ ಹಣ ವರ್ಗಾವಣೆ ಆರೋಪ ಎದುರಿಸುತ್ತಿರುವ ಬೆಂಗಳೂರಿನ ‘ಪಿಜೆನ್ ಎಜುಕೇಶನ್ ಟೆಕ್ನಾಲಜಿ ಇಂಡಿಯಾ ಪ್ರೈವೇಟ್ ಲಿಮಿಟೆಡ್​’ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ದಾಳಿ ನಡೆಸಿದೆ. 8.26 ಕೋಟಿ ರೂಪಾಯಿ ಹಣ ವಶಕ್ಕೆ ಪಡೆದಿದೆ.

‘ಪಿಜೆನ್ ಎಜುಕೇಶನ್ ಟೆಕ್ನಾಲಜಿ ಇಂಡಿಯಾ ಪ್ರೈವೇಟ್ ಲಿಮಿಟೆಡ್’ ಸಂಸ್ಥೆಯ ಒಡಾಕ್ಲಾಸ್ ಆ್ಯಪ್ ಮೂಲಕ ಆನ್‌ಲೈನ್ ಶಿಕ್ಷಣ ಒದಗಿಸುತ್ತಿದೆ. ಇದು ಚೀನಾ ಮೂಲದ ಲಿಯು ಕ್ಯಾನ್ ಹಾಗೂ ಭಾರತದ ವೇದಾಂತ್ ಹಮಿರ್ವಾಸಿಯಾ ಅವರನ್ನು ತನ್ನ ನಿರ್ದೇಶಕರನ್ನಾಗಿ ಹೊಂದಿದ್ದು, ಭಾರತದಲ್ಲಿ ಬೆಂಗಳೂರಿನಿಂದ ಕಾರ್ಯ ನಿರ್ವಹಿಸುತ್ತಿತ್ತು.

ಈ ಸಂಸ್ಥೆಯನ್ನು ಕ್ಯಾಮನ್ ದ್ವೀಪಗಳಿಂದಲೇ ಶೇಕಡಾ ನೂರರಷ್ಟು ಚೀನಾ ಮೂಲದ ವ್ಯಕ್ತಿಗಳು ನಿರ್ವಹಿಸುತ್ತಿದ್ದಾರೆ. ಜಾಹೀರಾತು ವೆಚ್ಚದ ಹೆಸರಿನಲ್ಲಿ ಕಂಪನಿಯ ಖಾತೆಯಿಂದ ₹82.72 ಕೋಟಿ ಹಣ ಚೀನಾ ಮತ್ತು ಹಾಂಕಾಂಗ್ ಮೂಲದ ಖಾತೆಗಳಿಗೆ ವರ್ಗಾವಣೆಯಾಗಿರುವುದು ತನಿಖೆ ವೇಳೆ ಪತ್ತೆಯಾಗಿದೆ ಎಂದು ಇಡಿ ಹೇಳಿದೆ.

Advertisements

ಈ ಸುದ್ದಿ ಓದಿದ್ದೀರಾ?: ಸಿದ್ದರಾಮಯ್ಯ, ಡಿಕೆಶಿ ಜೊತೆಗೆ ಎಂಟು ಮಂದಿ ಸಚಿವರು ಪ್ರಮಾಣ ವಚನ

ಈ ಬಗ್ಗೆ ಜಾರಿ ನಿರ್ದೇಶನಾಲಯ ತನ್ನ ಅಧಿಕೃತ ಟ್ವಿಟರ್​ ಖಾತೆಯಲ್ಲಿ ಮಾಹಿತಿ ಹಂಚಿಕೊಳ್ಳಲಾಗಿದ್ದು, “ವಿದೇಶಿ ವಿನಿಮಯ ನಿರ್ವಹಣಾ ಕಾಯ್ದೆಯ (ಫೆಮಾ) ಸೆಕ್ಷನ್ 37ಎ ಅಡಿಯಲ್ಲಿ ಹಣ ಜಪ್ತಿ ಮಾಡಲಾಗಿದೆ ಎಂದು ತಿಳಿಸಿದೆ. ಇಡಿ ಅಧಿಕಾರಿಗಳು ಕಳೆದ ಏಪ್ರಿಲ್​ನಲ್ಲಿ ಈ ಸಂಸ್ಥೆ ಮೇಲೆ ದಾಳಿ ಶೋಧ ಕಾರ್ಯ ನಡೆಸಿದ್ದರು. ಈ ವೇಳೆ ಸಂಸ್ಥೆಯ ಎಲ್ಲ ವ್ಯವಹಾರಗಳು, ಹಣಕಾಸು ನಿರ್ಧಾರಗಳನ್ನು ಒಳಗೊಂಡಂತೆ ಪ್ರತಿಯೊಂದು ತೀರ್ಮಾನ ಚೀನಾದಲ್ಲಿರುವವರು ನಿರ್ಧರಿಸುತ್ತಿದ್ದಾರೆ. ಚೀನಾದ ನಿರ್ದೇಶಕ ಲಿಯು ಕ್ಯಾನ್ ಸೂಚನೆಯ ಮೇರೆಗೆ ಸಂಸ್ಥೆ ಜಾಹೀರಾತು ಮತ್ತು ಮಾರುಕಟ್ಟೆ ವೆಚ್ಚದ ಹೆಸರಿನಲ್ಲಿ ₹82.72 ಕೋಟಿ ಎರಡು ರಾಷ್ಟ್ರಗಳಿಗೆ ವರ್ಗಾವಣೆಗೊಂಡಿರುವುದನ್ನು ಪತ್ತೆ ಹಚ್ಚಲಾಗಿತ್ತು” ಎಂದು ಹೇಳಿದೆ.

ಅಲ್ಲದೇ, ಹಣ ವರ್ಗಾವಣೆಗೆ ಸಂಬಂಧಿಸಿದಂತೆ ತನ್ನ ಕಡೆಯಿಂದ ಯಾವುದೇ ಸೇವಾ ಸ್ವೀಕೃತಿಯ ದಾಖಲೆಗಳು ಮತ್ತು ಹೇಳಿದ ವೆಚ್ಚಗಳಿಗೆ ಯಾವುದೇ ಜಾಹೀರಾತಿನ ಪುರಾವೆಗಳನ್ನು ನೀಡಲು ಸಾಧ್ಯವಿಲ್ಲ ಎಂದು ಸಂಸ್ಥೆ ಹೇಳಿತ್ತು. ಜೊತೆಗೆ ಲಿಯು ಕ್ಯಾನ್‌ನ ಸೂಚನೆಯಂತೆ ಹಣ ಪಾವತಿಸಲಾಗಿತ್ತು ಕಂಪನಿಯ ನಿರ್ದೇಶಕ ಮತ್ತು ಖಾತೆ ವ್ಯವಸ್ಥಾಪಕರು ತನಿಖೆ ಸಂದರ್ಭದಲ್ಲಿ ಒಪ್ಪಿಕೊಂಡಿದ್ದರು. ಗೂಗಲ್ ಮತ್ತು ಫೇಸ್‌ಬುಕ್ ಮೂಲಕ ಜಾಹೀರಾತುಗಳನ್ನು ಪ್ರಕಟಿಸಲಾಗಿದೆ ಎಂದು ಚೀನಾದ ನಿರ್ದೇಶಕರು ಹೇಳಿದ್ದರು ಎಂಬುವುದಾಗಿ ಸಂಸ್ಥೆಯ ಭಾರತೀಯ ನಿರ್ದೇಶಕ ವೇದಾಂತ ಹಮಿರ್ವಾಸಿಯಾ ಹೇಳಿಕೆ ನೀಡಿದ್ದರು ಎಂದು ವಿವರಿಸಿದೆ.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಪರಿಸರ ಸ್ನೇಹಿ ಗಣೇಶ ಹಬ್ಬಕ್ಕೆ ಮಾರ್ಗಸೂಚಿ ಪ್ರಕಟ, ನಿಯಮ ಉಲ್ಲಂಘಿಸಿದರೆ ಕ್ರಿಮಿನಲ್‌ ಕೇಸ್‌ ದಾಖಲು

ಬೆಂಗಳೂರು ನಗರದಲ್ಲಿ ಪರಿಸರ ಸ್ನೇಹಿ ಗಣೇಶ ಮೂರ್ತಿಗಳನ್ನು ಮಾತ್ರ ಪೂಜಿಸಬೇಕಾಗಿ ಮತ್ತು...

ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ: ಮಹಿಳೆ ವಿರುದ್ಧದ ಪೋಕ್ಸೋ ಪ್ರಕರಣ ರದ್ದತಿಗೆ ಹೈಕೋರ್ಟ್‌ ನಕಾರ

ಬೆಂಗಳೂರಿನ ವಿಲ್ಲಾವೊಂದರಲ್ಲಿ ವಾಸವಿದ್ದ 53 ವರ್ಷದ ಮಹಿಳೆ ತನ್ನ ಕಾಮ ತೃಷೆಗಾಗಿ...

ಕೆವಿನ್ ಕಾರ್ಟರ್, ಸಂಗೊಳ್ಳಿಯ ಸಂಗವ್ವ ಇಬ್ಬರೂ ಫೋಟೋ ಜರ್ನಲಿಸಂನ ರೂಪಕಗಳಾಗಿಬಿಟ್ಟರು: ಕೆ ವಿ ಪ್ರಭಾಕರ್

ಕೆವಿನ್ ಕಾರ್ಟರ್, ಸಂಗೊಳ್ಳಿಯ ಸಂಗವ್ವ ಇಬ್ಬರೂ ಫೋಟೋ ಜರ್ನಲಿಸಂನ ರೂಪಕಗಳಾಗಿಬಿಟ್ಟರು. ನೋಟಕ್ಕೆ...

Download Eedina App Android / iOS

X