ಇಂತಹದ್ದೇ ಖಾತೆ ಬೇಕೆಂದು ಕೇಳುವುದಿಲ್ಲ: ರಾಮಲಿಂಗಾರೆಡ್ಡಿ

Date:

Advertisements
  • ಶನಿವಾರ ಪ್ರಮಾಣ ವಚನ ಸ್ವೀಕರಿಸಲಿರುವ ಮಾಜಿ ಗೃಹ ಸಚಿವ
  • ಜನಪರ ಆಡಳಿತ ನೀಡುವುದೇ ನಮ್ಮ ಗುರಿ ಎಂದ ರಾಮಲಿಂಗಾರೆಡ್ಡಿ

ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರದ ಸಂಪುಟ ಸದಸ್ಯರಾಗಿ ಇಂದು ಪ್ರಮಾಣವಚನ ಸ್ವೀಕರಿಸಲಿಸುವ ಮಾಜಿ ಸಚಿವ ರಾಮಲಿಂಗಾರೆಡ್ಡಿ, ತಮಗೆ ಇಂತಹದ್ದೇ ಖಾತೆ ಬೇಕೆಂದು ಬೇಡಿಕೆ ಇಡುವುದಿಲ್ಲ ಎಂದು ಹೇಳಿದ್ದಾರೆ.

ಕಂಠೀರವ ಕ್ರೀಡಾಂಗಣದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, “ನನಗೆ ಇಂತಹದ್ದೇ ಖಾತೆ ಬೇಕೆಂದು ಬೇಡಿಕೆ ಇಡುವುದಿಲ್ಲ. ನನ್ನ ಮೇಲೆ ನಂಬಿಕೆ ಇರಿಸಿ ಯಾವುದೇ ಖಾತೆಕೊಟ್ಟರೂ ನಿಭಾಯಿಸುವೆ” ಎಂದು ಹೇಳಿದರು.

ಬೆಂಗಳೂರು ಅಭಿವೃದ್ಧಿಗೆ ಹೆಚ್ಚಿನ ಆದ್ಯತೆ ಕೊಡುತ್ತೇವೆ. ಆದಷ್ಟು ಬೇಗ ಬೆಂಗಳೂರು ಮಹಾನಗರ ಪಾಲಿಕೆ ಚುನಾವಣೆ ಮಾಡುತ್ತೇವೆ. ಮಳೆ ಸಂದರ್ಭದಲ್ಲಿ ಜನರಿಗೆ ಆಗುತ್ತಿದ್ದ ಸಮಸ್ಯೆ ಬಗೆಹರಿಸುತ್ತೇವೆ” ಎಂದು ರಾಮಲಿಂಗರೆಡ್ಡಿ ತಿಳಿಸಿದರು.

Advertisements

ಅಂದ ಹಾಗೆ ಇಂದು ಸಿಎಂ ಮತ್ತು ಡಿಸಿಎಂ ಜೊತೆಗೆ ನೂತನ ಕಾಂಗ್ರೆಸ್ ಸರ್ಕಾರದ ಭಾಗವಾಗಿ 8 ಮಂದಿ ಶಾಸಕರು ಪ್ರಮಾಣ ವಚನ ಸ್ವೀಕರಿಸಲಿದ್ದಾರೆ. ಈ ಕಾರ್ಯಕ್ರಮಕ್ಕೆ ರಾಹುಲ್ ಗಾಂಧಿ, ಪ್ರಿಯಾಂಕಾಗಾಂಧಿ ಸೇರಿದಂತೆ ಹಲವು ರಾಜ್ಯಗಳ ಮುಖ್ಯಮಂತ್ರಿಗಳು ಭಾಗವಹಿಸಲಿದ್ದಾರೆ.

ಕಂಠೀರವ ಕ್ರೀಡಾಂಗಣದಲ್ಲಿ ನಡೆಯಲಿರುವ ಪದಗ್ರಹಣ ಸಮಾರಂಭದಲ್ಲಿ ಎರಡು ಲಕ್ಷಕ್ಕೂ ಅಧಿಕ ಮಂದಿ ಕಾರ್ಯಕರ್ತರು, ಅಭಿಮಾನಿಗಳು ಭಾಗವಹಿಸಿದ್ದಾರೆ. ರಾಜಧಾನಿ ಬೆಂಗಳೂರಿನಲ್ಲಿ ಈಹಿನ್ನೆಲೆಯಲ್ಲಿ ಹಬ್ಬದ ವಾತಾವರಣ ನಿರ್ಮಾಣವಾಗಿದೆ.

ಜಾನಪದಾ ಕಲಾತಂಡಗಳು ಹಾಗೂ ಅಭಿಮಾನಿಗಳು ಮೆರವಣಿ ಮೂಲಕ ಕಾರ್ಯಕ್ರಮ ಸ್ಥಳಕ್ಕೆ ಹರಿದು ಬರುತ್ತಿದ್ದಾರೆ.

ಈ ಸುದ್ದಿ ಓದಿದ್ದೀರಾ?:ಸಿದ್ದರಾಮಯ್ಯ, ಡಿಕೆಶಿ ಜೊತೆಗೆ ಎಂಟು ಮಂದಿ ಸಚಿವರು ಪ್ರಮಾಣ ವಚನ

ಮತ್ತೊಂದು ಕಡೆ ನಿಯೋಜಿತ ಸಿಎಂ ಸಿದ್ದರಾಮಯ್ಯ, ಪದಗ್ರಹಣದ ಬಳಿಕ ತಮ್ಮ ಮೊದಲ ಸಂಪುಟ ಸಭೆಯಲ್ಲಿ ಗ್ಯಾರಂಟಿ ಯೋಜನೆಗಳನ್ನು ಜಾರಿಗೊಳಿಸಲಿರುವ ಕಾರಣ, ತಮ್ಮ ನಿವಾಸದಲ್ಲಿ ಹಣಕಾಸು ಇಲಾಖೆ, ಸರ್ಕಾರದ ಪ್ರಧಾನ ಕಾರ್ಯದರ್ಶಿ ಸೇರಿದಂತೆ ಪ್ರಮುಖರ ಸಭೆ ನಡೆಸಿ ಆರ್ಥಿಕ ಲೆಕ್ಕಾಚಾರದ ಬಗ್ಗೆ ಮಾಹಿತಿ ಪಡೆದುಕೊಳ್ಳುತ್ತಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬಿಹಾರದಂತೆಯೇ, ಇಡೀ ದೇಶ ಚುನಾವಣಾ ಕಳ್ಳತನವನ್ನು ವಿರೋಧಿಸುತ್ತದೆ: ರಾಹುಲ್ ಗಾಂಧಿ

ಬಿಹಾರದಲ್ಲಿ ತಮ್ಮ 'ಮತದಾರ ಅಧಿಕಾರ ಯಾತ್ರೆ'ಗೆ ಸಕಾರಾತ್ಮಕ ಪ್ರತಿಕ್ರಿಯೆಯನ್ನು ಸ್ವಾಗತಿಸಿದ ಲೋಕಸಭೆ...

ಪಟ್ಟಣ ಪಂಚಾಯತ್ ಚುನಾವಣೆ: ಮೂರರಲ್ಲಿ ಕಾಂಗ್ರೆಸ್‌ಗೆ ಮೇಲುಗೈ; ಎರಡರಲ್ಲಿ ಬಿಜೆಪಿ-ಜೆಡಿಎಸ್ ಮೈತ್ರಿಗೆ ಜಯ

ಕರ್ನಾಟಕದಲ್ಲಿ ಐದು ಪ್ರದೇಶಗಳು ತಾಲೂಕು ಸ್ಥಾನಕ್ಕೇರಿದ ಬಳಿಕ ರಚನೆಯಾದ ಪಟ್ಟಣ ಪಂಚಾಯಿತಿಗೆ...

2029ರ ಚುನಾವಣೆಯಲ್ಲಿ ರಾಹುಲ್ ಗಾಂಧಿ ಇಂಡಿಯಾ ಒಕ್ಕೂಟದ ಪ್ರಧಾನಿ ಅಭ್ಯರ್ಥಿ: ತೇಜಸ್ವಿ ಯಾದವ್

2029ರ ಲೋಕಸಭೆ ಚುನಾವಣೆಯಲ್ಲಿ ಸದ್ಯ ಲೋಕಸಭೆ ವಿಪಕ್ಷ ನಾಯಕರಾಗಿರುವ ರಾಹುಲ್ ಗಾಂಧಿ...

Download Eedina App Android / iOS

X