ಬೀದರ್‌ನಲ್ಲಿ ಮಂಗಳವಾರ ಬೆಳ್ಳಂ ಬೆಳಗ್ಗೆ ಬೀದರ್ ಜಿಲ್ಲಾ ತರಬೇತಿ ಕೇಂದ್ರದ ಸಹಾಯಕ ನಿರ್ದೇಶಕ ರವೀಂದ್ರಕುಮಾರ್ ರೊಟ್ಟಿ ಅವರ ನಿವಾಸದ ಮೇಲೆ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ದಾರೆ.
ಅಕ್ರಮವಾಗಿ ಆಸ್ತಿ ಮಾಡಿದ್ದಾರೆ ಎಂಬ ದೂರುಗಳ ಮೇರೆಗೆ ಲೋಕಾಯುಕ್ತ ಪೊಲೀಸರ ತಂಡ ಏಕಕಾಲಕ್ಕೆ ಎರಡು ಕಡೆ ದಾಳಿ ನಡೆಸಿ ದಾಖಲೆಗಳನ್ನು ಪರಿಶೀಲಿಸಿದ್ದು, ಅಂದಾಜು 4 ಕೋಟಿಗೂ ಅಧಿಕ ಮೌಲ್ಯದ ಅಕ್ರಮ ಆಸ್ತಿ ಪತ್ತೆಯಾಗಿರುವುದು ಕಂಡು ಬಂದಿದೆ. ಇನ್ನೂ ಶೋಧ ಕಾರ್ಯ ಮುಂದುವರೆದಿದೆ ಎಂದು ಈ ದಿನ.ಕಾಮ್ ಜೊತೆಗೆ ಮಾತನಾಡಿದ ಕಲಬುರಗಿ ವಿಭಾಗೀಯ ಲೋಕಾಯುಕ್ತ ಎಸ್‌ಪಿ ಉಮೇಶ್ ಬಿ.ಕೆ. ಮಾಹಿತಿ ನೀಡಿದ್ದಾರೆ.
ಬೀದರ್ | ಡಿಟಿಎ ಅಧಿಕಾರಿ ಮನೆ ಮೇಲೆ ಲೋಕಾಯುಕ್ತ ದಾಳಿ; 4 ಕೋಟಿಗೂ ಅಧಿಕ ಅಕ್ರಮ ಆಸ್ತಿ ಪತ್ತೆ
— eedina.com ಈ ದಿನ.ಕಾಮ್ (@eedinanews) November 12, 2024
ಈ ದಿನ.ಕಾಮ್ ಜೊತೆಗೆ ಬೀದರ್ ಲೋಕಾಯುಕ್ತ ಎಸ್‌ಪಿ ಉಮೇಶ್ ಬಿ ಕೆ ಹೇಳಿದ್ದು ಹೀಗೆ…@balajikumbar pic.twitter.com/qZ750Q5tbd
ರವೀಂದ್ರಕುಮಾರ್ ರೊಟ್ಟಿ ಅವರ ಬೀದರ್ ನಗರದ ಗುಂಪಾ ನಿವಾಸ ಹಾಗೂ ಬೀದರ್‌ನ ನೌಬಾದ್‌ನಲ್ಲಿರುವ ಕಚೇರಿ ಮೇಲೆ ಏಕಕಾಲಕ್ಕೆ ದಾಳಿ ನಡೆಸಿ ದಾಖಲೆಗಳ ಪರಿಶೀಲನೆ ನಡೆಸಿದ್ದಾರೆ.

ಲೋಕಾಯುಕ್ತ ಡಿವೈಎಸ್ಪಿ ಹನುಮಂತ ನೇತೃತ್ವದಲ್ಲಿ ದಾಳಿ ನಡೆಸಲಾಗಿದೆ.
ಬೀದರ್ ಜಿಲ್ಲಾ ತರಬೇತಿ ಕೇಂದ್ರದ ಸಹಾಯಕ ನಿರ್ದೇಶಕ ರವೀಂದ್ರಕುಮಾರ್ ರೊಟ್ಟಿ ಇದಕ್ಕೂ ಮೊದಲು ಬೀದರ್ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಶಿರಸ್ತೆದಾರ ಹಾಗೂ ಬಿಬಿಎಂಪಿಯಲ್ಲಿ ಅಧಿಕಾರಿಯಾಗಿ ಕಾರ್ಯ ನಿರ್ವಹಿಸಿದ್ದರು.
