ಉಡುಪಿ ತಾಲೂಕಿನ ಗ್ರಾಮ ಪಂಚಾಯಿತಿ ಉಪಚುನಾವಣೆಗೆ ಸಂಬಂಧಿಸಿದಂತೆ ನವೆಂಬರ್ 23ರಂದು ಮತದಾನ ನಡೆಯಲಿದ್ದು, ಶಾಂತಿ, ಸುವ್ಯವಸ್ಥೆ ಕಾಪಾಡುವ ಸಲುವಾಗಿ ಸಂತೆ, ಜಾತ್ರೆ ನಡೆಸದಂತೆ ನಿಷೇಧಿಸಿದ್ದು, ಜಿಲ್ಲಾ ಚುನಾವಣಾಧಿಕಾರಿಯೂ ಆಗಿರುವ ಜಿಲ್ಲಾಧಿಕಾರಿ ಡಾ ಕೆ ವಿದ್ಯಾಕುಮಾರಿ ಆದೇಶಿಸಿದ್ದಾರೆ.
ತಾಲೂಕಿನ ಬೊಮ್ಮಾರಬೆಟ್ಟು ಹಾಗೂ 13-ಕೊಡಿಬೆಟ್ಟು, ಕುಂದಾಪುರ ತಾಲೂಕಿನ 35-ಅಮಾಸೆಬೈಲು, ಬ್ರಹ್ಮಾವರ ತಾಲೂಕಿನ ಕೋಟ ಹಾಗೂ ಕಾರ್ಕಳ ತಾಲೂಕಿನ ಈದು, ನಲ್ಲೂರು, ನಿಟ್ಟೆ, ನೀರೆ, 5-ಕೆರ್ವಾಶೆ ಹಾಗೂ ಕಡ್ತಲ ಗ್ರಾಮ ಪಂಚಾಯತಿಗಳ ಉಪಚುನಾವಣೆಗೆ ನವೆಂವರ್ 23ರಂದು ಮತದಾನ ನಡೆಯಲಿದೆ.
ಈ ಸುದ್ದಿ ಓದಿದ್ದೀರಾ? ಶಿವಮೊಗ್ಗ | ಮಧುಮೇಹ ಜಾಗೃತಿ; ಆಶಾ ಕಾರ್ಯಕರ್ತೆಯರಿಗೆ ತರಬೇತಿ ಕಾರ್ಯಾಗಾರ
ಮತದಾನದ ಹಿನ್ನೆಲೆಯಲ್ಲಿ ಸಾರ್ವಜನಿಕರಿಗೆ ಮತ ಹಾಕಲು ಅನುಕೂಲವಾಗುವಂತೆ ಕರ್ನಾಟಕ ಗ್ರಾಮ ಸ್ವರಾಜ್ ಮತ್ತು ಪಂಚಾಯತ್ ರಾಜ್ ಅಧಿನಿಯಮ 1993 ಪ್ರಕರಣ 36ರ ಅಡಿಯಲ್ಲಿ ಪ್ರದತ್ತವಾದ ಅಧಿಕಾರವನ್ನು ಚಲಾಯಿಸಿ ಚುನಾವಣೆ ನಡೆಯುವ ದಿನದಂದು ಈ ಮೇಲ್ಕಂಡ ಗ್ರಾಮ ಪಂಚಾಯಿತಿಗಳ ಕ್ಷೇತ್ರ ವ್ಯಾಪ್ತಿಯಲ್ಲಿ ಸಂತೆ ಮತ್ತು ಜಾತ್ರೆಗಳನ್ನು ನಿಷೇಧಿಸಿ, ಜಿಲ್ಲಾ ಚುನಾವಣಾಧಿಕಾರಿಯೂ ಆಗಿರುವ ಜಿಲ್ಲಾಧಿಕಾರಿ ಡಾ. ಕೆ ವಿದ್ಯಾಕುಮಾರಿ ಆದೇಶ ಹೊರಡಿಸಿದ್ದಾರೆ.